Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ:...

3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

''ಗ್ರಾಮೀಣ, ನಗರ, ಕೊಳೆಗೇರಿಗಳಲ್ಲಿನ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ''

ವಾರ್ತಾಭಾರತಿವಾರ್ತಾಭಾರತಿ15 May 2021 8:03 PM IST
share
3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಮೇ 15: ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂತಹ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಶನಿವಾರ ಡಾ.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ನಾಲ್ಕು ಗಂಟೆಗಳ ಕಾಲ ನಡೆದ ಕಾರ್ಯಪಡೆಯ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ವಾಸ ಮಾಡುವ ಸೋಂಕಿರನ್ನು ಯಾವುದೇ ಕಾರಣಕ್ಕೂ ಅವರ ಮನೆಗಳಲ್ಲೇ ಕ್ವಾರಂಟೈನ್ ಮಾಡುವುದಿಲ್ಲ. ಪಾಸಿಟಿವ್ ಆಗಿದೆ ಎಂದು ವರದಿ ಬಂದ ತಕ್ಷಣವೇ ಹತ್ತಿರದ ಕೋವಿಡ್ ಕೇರ್ ಕೇಂದ್ರಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಲಾಗುವುದು. ಅದೇ ರೀತಿ ನಗರ-ಪಟ್ಟಣ ಪ್ರದೇಶಗಳ ಕೊಳೆಗೇರಿಗಳಲ್ಲಿ ವಾಸ ಮಾಡುವ ಸೋಂಕಿತರಿಗೂ ಇದೇ ರೀತಿಯಲ್ಲಿ ಸ್ಥಳಾಂತರ ಮಾಡಿ ಉಚಿತ ಚಿಕಿತ್ಸೆ ಕೊಡಲಾಗುವುದು. ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಅವರಿಗೆ ಗುಣಮಟ್ಟದ ಚಿಕಿತ್ಸೆ, ಆಹಾರ, ಔಷಧಿ ನೀಡಲು ಸುಲಭವಾಗುತ್ತದೆ ಎಂದರು.

ಜಿಲ್ಲಾಧಿಕಾರಿಗಳಿಗೆ ಹೊಣೆ: ಗ್ರಾಮೀಣ ಭಾಗ ಹಾಗೂ ನಗರದ ಕೊಳೆಗೇರಿಗಳಿಗೆ ಆರೋಗ್ಯ ಸಿಬ್ಬಂದಿ ತೆರಳಿ ಮನೆ ಮನೆಯಲ್ಲೂ ರಾಟ್ ಟೆಸ್ಟ್ ಮಾಡಬೇಕು. ಪಾಸಿಟಿವ್ ಆದವರು ಕಡ್ಡಾಯವಾಗಿ `ಕೋವಿಡ್ ಕೇರ್ ಸೆಂಟರ್'ನಲ್ಲಿಯೇ ಇರಬೇಕು. ಪ್ರತಿ ಪಿಎಚ್‍ಸಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿನ ಹಾಸ್ಟೆಲ್ ಇತ್ಯಾದಿ ಕಟ್ಟಡಗಳನ್ನು ಬಳಸಿಕೊಂಡು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಎಲ್ಲ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲು ಕಾರ್ಯಪಡೆ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಹೊಸ ಆಮ್ಲಜನಕ ನೀತಿ: ರಾಜ್ಯದಲ್ಲಿ ಆಮ್ಲಜನಕ ಬಳಕೆ, ತಯಾರಿಕೆ, ಘಟಕಗಳ ಸ್ಥಾಪನೆ, ಮೂಲಸೌಕರ್ಯ ಸ್ಥಾಪನೆ, ನಿರ್ವಹಣೆ ಇತ್ಯಾದಿ ಅಂಶಗಳ ಬಗ್ಗೆ ಇನ್ನು 3-4 ದಿನಗಳಲ್ಲಿ `ನೂತನ ಆಮ್ಲಜನಕ ನೀತಿ'ಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ ಡಾ.ಅಶ್ವತ್ಥ ನಾರಾಯಣ, ರಾಜ್ಯದಲ್ಲಿ ಈಗಾಗಲೇ ಆಮ್ಲಜನಕ ಕೊರತೆ ಬಹುತೇಕ ನೀಗುತ್ತಿದೆ ಎಂದು ಹೇಳಿದರು.

ಆಮ್ಲಜನಕ ಬಳಕೆಯನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಡಿಆರ್‍ಡಿಒ ಅಭಿವೃದ್ಧಿಪಡಿಸಿರುವ 1 ಸಾವಿರ ಯಂತ್ರಗಳನ್ನು ಪ್ರಾಯೋಗಿಕವಾಗಿ ಬಳಸಲು ಕಾರ್ಯಪಡೆ ತೀರ್ಮಾನಿಸಿದೆ. ಪ್ರತಿ ಒಂದು ಯಂತ್ರಕ್ಕೆ 6ರಿಂದ 10 ಸಾವಿರ ರೂ. ಆಗುತ್ತದೆ ಎಂದ ಅವರು, ಆರು ಜಿಲ್ಲೆಗಳಲ್ಲಿ ಆಮ್ಲಜನಕ ಬಾಟ್ಲಿಂಗ್ ಯೂನಿಟ್ ಸ್ಥಾಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X