Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಲಸಿಕೆ ಪಡೆದ ಬಳಿಕ ಆಸ್ಪತ್ರೆಗೆ...

ಕೋವಿಡ್ ಲಸಿಕೆ ಪಡೆದ ಬಳಿಕ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಕೇವಲ ಶೇ.0.06: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ16 May 2021 10:36 PM IST
share
ಕೋವಿಡ್ ಲಸಿಕೆ ಪಡೆದ ಬಳಿಕ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಕೇವಲ ಶೇ.0.06: ಅಧ್ಯಯನ ವರದಿ

ಹೊಸದಿಲ್ಲಿ, ಮೇ 16: ಕೋವಿಡ್-19 ಲಸಿಕೆಯನ್ನು ತೆಗೆದುಕೊಂಡ ಬಳಿಕ ಕೇವಲ ಶೇ.0.06 ಜನರು ಆಸ್ಪತ್ರೆಗೆ ದಾಖಲಾಗುವುದು ಅಗತ್ಯವಾಗುತ್ತದೆ ಮತ್ತು ಶೇ.97.38ರಷ್ಟು ಜನರು ವೈರಸ್ನಿಂದ ರಕ್ಷಣೆಯನ್ನು ಪಡೆಯುತ್ತಾರೆ ಎಂದು ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಯು ನಡೆಸಿದ ಅಧ್ಯಯನವೊಂದು ಬಹಿರಂಗಗೊಳಿಸಿದೆ. ಲಸಿಕೆ ಸ್ವೀಕರಿಸಿದ ಬಳಿಕ ಕೋವಿಡ್-19ರ ಆವರ್ತನಗಳ ಮೌಲ್ಯಮಾಪನ ನಡೆಸಲು ಈ ಅಧ್ಯಯನವನ್ನು ಕೈಗೊಳ್ಳಲಾಗಿತ್ತು.

ಕೋವಿಶೀಲ್ಡ್ ಲಸಿಕೆಯನ್ನು ಬಳಸಿ ಲಸಿಕೆ ಅಭಿಯಾನದ ಮೊದಲ ನೂರು ದಿನಗಳಲ್ಲಿ ಕೋವಿಡ್-19 ಲಕ್ಷಣಗಳೊಂದಿಗೆ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಕಾರ್ಯಕರ್ತರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು.

ಈಗ ಜಾರಿಯಲ್ಲಿರುವ ಲಸಿಕೆ ಅಭಿಯಾನದ ನಡುವೆಯೇ ಎರಡನೇ ಅಲೆಯಿಂದಾಗಿ ಕೋವಿಡ್-19 ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಲಸಿಕೆ ಪಡೆದುಕೊಂಡ ನಂತರವೂ ಸೋಂಕು ಕಾಣಿಸಿಕೊಂಡ ಪ್ರಕರಣಗಳು ವರದಿಯಾಗಿದ್ದು,‘ಬ್ರೇಕ್‌ ತ್ರೂ ಇನ್ಫೆಕ್ಶನ್’ ಎಂದು ಕರೆಯಲಾಗುವ ಈ ಸೋಂಕು ಭಾಗಶಃ ಲಸಿಕೆ ಪಡೆದವರಲ್ಲಿ ಮತ್ತು ಪೂರ್ಣ ಡೋಸ್ಗಳನ್ನು ತೆಗೆದುಕೊಂಡ ಕೆಲವರಲ್ಲಿ ಕಾಣಿಸಿಕೊಳ್ಳಬಹುದು ಎಂದು ಅಪೋಲೊ ಹಾಸ್ಪಿಟಲ್ಸ್ ಗ್ರೂಪ್ನ ಸಮೂಹ ವೈದ್ಯಕೀಯ ನಿರ್ದೇಶಕ ಡಾ.ಅನುಪಮ್ ಸಿಬಲ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಕೋವಿಡ್-19 ಲಸಿಕೆಯು ಶೇ.100ರಷ್ಟು ನಿರೋಧಕತೆಯನ್ನು ಒದಗಿಸುವುದಿಲ್ಲ ಎನ್ನುವುದನ್ನು ಅಧ್ಯಯನವು ತೋರಿಸಿದೆ. ಪೂರ್ಣ ಡೋಸ್ಗಳನ್ನು ತೆಗೆದುಕೊಂಡ ಬಳಿಕ ಅದು ಗಂಭೀರ ಲಕ್ಷಣಗಳ ವಿರುದ್ಧ ರಕ್ಷಣೆ ನೀಡುತ್ತದೆ. ಲಸಿಕೆ ಪಡೆದವರಲ್ಲಿ ಶೇ.97.38ರಷ್ಟು ಜನರು ಸೋಂಕಿನಿಂದ ರಕ್ಷಣೆ ಪಡೆದಿರುತ್ತಾರೆ ಮತ್ತು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಕೇವಲ ಶೇ.0.06ರಷ್ಟಿರುತ್ತದೆ. ಕೆಲವೇ ಜನರಲ್ಲಿ ಬ್ರೆಕ್ಥ್ರೂ ಇನ್ಫೆಕ್ಶನ್ ಉಂಟಾಗುತ್ತದೆ ಮತ್ತು ಇವು ಪ್ರಾಥಮಿಕವಾಗಿ ಸೌಮ್ಯ ಸ್ವರೂಪದ ಸೋಂಕುಗಳಾಗಿದ್ದು, ಗಂಭೀರ ಕಾಯಿಲೆಯನ್ನುಂಟು ಮಾಡುವುದಿಲ್ಲ ಎನ್ನುವುದನ್ನು ಅಧ್ಯಯನದ ಫಲಿತಾಂಶಗಳು ತೋರಿಸಿವೆ. ಅಧ್ಯಯನಕ್ಕೊಳಗಾದವರಲ್ಲಿ ಯಾವುದೇ ಐಸಿಯು ದಾಖಲಾತಿ ಅಥವಾ ಸಾವುಗಳು ಉಂಟಾಗಿರಲಿಲ್ಲ. ಲಸಿಕೆ ನೀಡಿಕೆಯನ್ನು ಅಧ್ಯಯನವು ಬಲವಾಗಿ ಪ್ರತಿಪಾದಿಸಿದೆ ಎಂದರು.

3,235 ಆರೋಗ್ಯ ಕಾರ್ಯಕರ್ತರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ಪೈಕಿ 85 ಜನರು ಅಧ್ಯಯನದ ಅವಧಿಯಲ್ಲಿ ಸೋಂಕಿಗೆ ಒಳಗಾಗಿದ್ದರು. ಇವರಲ್ಲಿ 65 ಜನರು ಲಸಿಕೆಯ ಎರಡೂ ಡೋಸ್ಗಳನ್ನು ಮತ್ತು 20 ಜನರು ಭಾಗಶಃ ಲಸಿಕೆಯನ್ನು ಪಡೆದಿದ್ದರು. ಮಹಿಳೆಯರ ಮೇಲೆ ಹೆಚ್ಚು ಪ್ರತಿಕೂಲ ಪರಿಣಾಮಗಳಾಗಿದ್ದವು ಮತ್ತು ಸೋಂಕಿನ ಮೇಲೆ ವಯಸ್ಸಿನ ಯಾವುದೇ ಪ್ರಭಾವವಿರಲಿಲ್ಲ ಎಂದು ಡಾ.ಸಿಬಲ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X