Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್...

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 May 2021 11:39 PM IST
share
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು, ಮೇ 17: ರಾಜ್ಯದ ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ- ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು.

ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಮನೆ ಮನೆ ಭೇಟಿ ಹಾಗೂ ಫೋನ್ ಟ್ರಯಾಜಿಂಗ್ ಮೂಲಕ ಸೋಂಕಿತ ವರ್ಗೀಕರಣವನ್ನು ತ್ವರಿತವಾಗಿ ನಡೆಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಹೋಮ್ ಐಸೊಲೇಷನ್‍ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ಒದಗಿಸಲು ಔಷಧಿ ಕೊರತೆಯಾದಲ್ಲಿ ಸ್ಥಳೀಯವಾಗಿ ಖರೀದಿಸಿ, ಒದಗಿಸಲು ಸೂಚನೆ ನೀಡಲಾಯಿತು. ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಭಾರತ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಯಡಿಯೂರಪ್ಪ ಸೂಚಿಸಿದರು.

ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಮುಖ್ಯಮಂತ್ರಿ ತಿಳಿಸಿದರು.

ಇದಕ್ಕೆ ಪೂರಕ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್‍ಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಎಲ್ಲ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗುತ್ತಿದೆ. ಆಮ್ಲಜನಕ ಪೂರೈಕೆಯನ್ನು ಮುಂಚಿತವಾಗಿಯೇ ಅಂದಾಜಿಸಿ, ಸಕಾಲದಲ್ಲಿ ಪೂರೈಕೆಯಾಗುವುದನ್ನು ಖಾತರಿಪಡಿಸಬೇಕು. ತುರ್ತು ಸಂದರ್ಭಗಳಲ್ಲಿ ನೆರೆಯ ಜಿಲ್ಲೆಗಳೊಂದಿಗೆ ಸಮನ್ವಯ ವಹಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಚಿಕಿತ್ಸಾ ಸೌಲಭ್ಯ, ಔಷಧ, ಆಮ್ಲಜನಕ ಮತ್ತಿತರ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಕೆ ಮಾಡಿಕೊಂಡು, ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಬೇಕು. ಹೋಮ್-ಐಸೋಲೇಷನ್ ನಲ್ಲಿರುವವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರಿಗೆ ಔಷಧಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಬೇಕು ಹಾಗೂ ಅವರ ಆರೋಗ್ಯ ಸ್ಥಿತಿಗಳ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಪರಿಸ್ಥಿತಿಯ ತೀವ್ರತೆಗೆ ಅನುಗುಣವಾಗಿ ನಿಬರ್ಂಧಗಳನ್ನು ಇನ್ನಷ್ಟು ಕಠಿಣಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದರು.

ಚಿಕ್ಕಮಗಳೂರು ಜಿಲ್ಲೆಗೆ ಆದ್ಯತೆಯ ಮೇರೆಗೆ ಪಿಎಸ್‍ಎ ಜನರೇಟರ್ ಒದಗಿಸಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರೀಕ್ಷಾ ಕೇಂದ್ರ ಶೀಘ್ರವೇ ಕಾರ್ಯಾರಂಭ ಮಾಡಲಿದೆ. ಭದ್ರಾವತಿಯ ವಿಐಎಸ್‍ಎಲ್‍ನಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ಬಾಟ್ಲಿಂಗ್ ಸಾಮಥ್ರ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್‍ಗೆ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಪಿಎಚ್‍ಸಿ ಮಟ್ಟದಲ್ಲಿ, ಹೋಬಳಿಗಳಲ್ಲಿ ವಸತಿ ಶಾಲೆ, ಸಮುದಾಯ ಭವನಗಳನ್ನು ಕೋವಿಡ್ ಕೇರ್ ಸೆಂಟರ್‍ಗಳನ್ನು ತೆರೆಯಬೇಕು. ಕೇಂದ್ರ ಮತ್ತು ರಾಜ್ಯ ಸರಕಾರ ಆಕ್ಸಿಜನ್ ಪ್ಲಾಂಟ್ ಮತ್ತು ಜನರೇಟರುಗಳನ್ನು ಅಗತ್ಯವಿರುವ ಕಡೆ ನೀಡುತ್ತದೆ ಎಂದು ಅವರು ಹೇಳಿದರು.

ಮೂರು ತಿಂಗಳಿಗಾಗುವಷ್ಟು ಔಷಧಿ ಖರೀದಿಸಲಾಗುತ್ತಿದೆ. ಆದುದರಿಂದ, ಮೆಡಿಕಲ್ ಕಿಟ್‍ಗೆ ಔಷಧಿ ಕೊರತೆಯಾಗದು. ಟ್ರಯಾಜಿಂಗ್ ಎರಡು ಹಂತದಲ್ಲಿ ಆಗಲೇ ಬೇಕು. ಪರೀಕ್ಷಾ ವರದಿ ಬಂದು ಎರಡು ಗಂಟೆಯೊಳಗೆ ಹಾಗೂ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಆಗಲೇ ಬೇಕು ಎಂದು ಅವರು ಸೂಚಿಸಿದರು.

ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು. ಲಸಿಕೆ ನೀಡುವ ಕುರಿತಂತೆ ಚರ್ಚೆ ನಡೆದ ಸಂದರ್ಭದಲ್ಲಿ, ಲಭ್ಯವಿರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಎರಡನೇ ಡೋಸ್ ಗೆ ಅರ್ಹ ವ್ಯಕ್ತಿಗಳಿಗೆ ಆದ್ಯತೆಯ ಮೇರೆಗೆ ನೀಡಬೇಕು. ನಂತರ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಡೋಸ್ ನೀಡಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್ ಅಶ್ವತ್ಥ ನಾರಾಯಣ, ಸಚಿವರಾದ ಡಾ.ಕೆ.ಸುಧಾಕರ್, ಅರವಿಂದ ಲಿಂಬಾವಳಿ, ಕೆ.ಗೋಪಾಲಯ್ಯ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.

ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್‍ಗೆ ಚಿಕಿತ್ಸೆ
ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗುತ್ತಿರುವ ಬ್ಲಾಕ್ ಫಂಗಸ್ ಪ್ರಕರಣಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಪ್ರಸ್ತುತ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಇದಕ್ಕೆ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಬ್ಲಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಐಸಿಯು, ವೆಂಟಿಲೇಟರುಗಳು, ಹ್ಯುಮಿಡಿಫೈಯರ್ ಬಳಕೆಯಿಂದ ಹೆಚ್ಚಾಗುತ್ತಿದೆ. ಐದು ವಿಭಾಗೀಯ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸಾ ವ್ಯವಸ್ಥೆ-ಶಿವಮೊಗ್ಗ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X