ಮೈಸೂರು: ಎರಡು ದಿನಗಳಲ್ಲಿ ಮದುವೆಯಾಗಬೇಕಿದ್ದ ಯುವಕ ಕೋವಿಡ್ ನಿಂದ ಸಾವು

ಮೈಸೂರು: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವಕನೋರ್ವ ಕೋವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತನನ್ನು ಹೆಬ್ಬಾಳು ನಿವಾಸಿ ನವೀನ್ (31) ಎಂದು ಹೇಳಲಾಗಿದೆ. ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ನವೀನ್ ಗೆ ಮಾರ್ಚ್ 7 ರಂದು ನಿಶ್ಚಿತಾರ್ಥವಾಗಿತ್ತು. ಮೇ 19 ವಿವಾಹ ನಿಶ್ಚಯವಾಗಿತ್ತು. ಕೆಮ್ಮು ಕಾಣಿಸಿಕೊಂಡ ಕಾರಣ ನವೀನ್ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕಿರುವುದು ದೃಢಪಟ್ಟಿತ್ತು. ಉಸಿರಾಟದ ತೊಂದರೆಯಿಂದಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೀನ್ ಮೃತಪಟ್ಟಿದ್ದಾರೆ.
ಮೃತ ನವೀನ್ ಅಣ್ಣ-ಅತ್ತಿಗೆಗೂ ಕೋವಿಡ್ ಸೋಂಕು ತಗುಲಿದೆ ಎನ್ನಲಾಗಿದೆ.
Next Story





