Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಎಸ್‍ಸಿ ಕೇಂದ್ರದಲ್ಲಿ ಕೋವಿಡ್ ಕೇರ್...

ಎಎಸ್‍ಸಿ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್: ಸೇನಾಧಿಕಾರಿಗಳ ಜತೆ ಡಿಸಿಎಂ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ18 May 2021 11:04 PM IST
share
ಎಎಸ್‍ಸಿ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್: ಸೇನಾಧಿಕಾರಿಗಳ ಜತೆ ಡಿಸಿಎಂ ಚರ್ಚೆ

ಬೆಂಗಳೂರು, ಮೇ 18: ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್ ಆಸ್ಪತ್ರೆ ಬಳಿ ಇರುವ ಸೇನೆಗೆ ಸೇರಿದ ಎಎಸ್‍ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಮಂಗಳವಾರ ಎಎಸ್‍ಸಿ ಕಮಾಂಡರ್ ಲೆಫ್ಟಿನೆಂಟ್ ಬಿ.ಕೆ.ರೆಸ್‍ಪಾಸ್ ವಾಲ್ ಅವರ ಜತೆ ಚರ್ಚಿಸಿದ ಡಿಸಿಎಂ, ಎಎಸ್‍ಸಿ ಸೆಂಟರ್‍ನಲ್ಲಿ ಕೊನೆಪಕ್ಷ 500 ಬೆಡ್‍ಗಳ ಕೋವಿಡ್ ಕೇಂದ್ರ ಸ್ಥಾಪನೆಯ ಪ್ರಸ್ತಾಪನೆಯನ್ನು ಮುಂದಿಟ್ಟರಲ್ಲದೆ, ಈ ಕೋವಿಡ್ ಕೇರ್ ಗೆ ಅಗತ್ಯವಾದ ಮೂಲಸೌಕರ್ಯವನ್ನು ಸರಕಾರ ಒದಗಿಸಲಿದೆ. ಸೇನೆ ವತಿಯಿಂದ ವೈದ್ಯರು, ಸಿಬ್ಬಂದಿ ಮತ್ತು ಅರೆವೈದ್ಯ ಸಿಬ್ಬಂದಿಯನ್ನು ಒದಗಿಸುವಂತೆ ಕೋರಿದರು.

ಎರಡನೇ ಮತ್ತು ಮೂರನೇ ಅಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕೇಂದ್ರದಲ್ಲಿ ಕೋವಿಡ್ ಕೇರ್ ಸ್ಥಾಪನೆಗೆ ಅವಕಾಶ ನೀಡಬೇಕು. ವಿವಿಧ ಹಂತಗಳಲ್ಲಿ ಇಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಬಹುದು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಇದಕ್ಕೆ ಬಿ.ಕೆ.ರೆಸ್‍ಪಾಸ್ ವಾಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರಲ್ಲದೆ, ಕೋವಿಡ್ ವಿರುದ್ಧ ಸರಕಾರ ನಡೆಸುತ್ತಿರುವ ಹೋರಾಟಕ್ಕೆ ಸೇನೆಯೂ ಹೆಗಲು ಕೊಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಎಸ್‍ಸಿ ಕೇಂದ್ರದಲ್ಲಿ ಕೋವಿಡ್ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಲೆಫ್ಟಿನೆಂಟ್ ಬಿ.ಕೆ.ರೆಸ್‍ಪಾಸ್ ವಾಲ್ ಅವರು ಡಿಸಿಎಂ ಅವರಿಗೆ ಮಾಹಿತಿ ನೀಡಿದರಲ್ಲದೆ, ಆ ಸೌಲಭ್ಯಗಳನ್ನು ತೋರಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಡಿಸಿಎಂ ಕಾರ್ಯದರ್ಶಿ ಪ್ರದೀಪ್ ಪ್ರಭಾಕರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಸರಕಾರದ ಸಲಹೆಗಾರ ಜಿ.ಎಂ.ಬಾಬು ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X