Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಜಿಲ್ಲೆಯ ಪಡಿತರದಲ್ಲಿ ಕೆಂಪು...

ಕರಾವಳಿ ಜಿಲ್ಲೆಯ ಪಡಿತರದಲ್ಲಿ ಕೆಂಪು ಕುಚಲಕ್ಕಿ ವಿತರಣೆ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ18 May 2021 11:25 PM IST
share

ಮಂಗಳೂರು, ಮೇ 18: ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸರಕಾರ ಪ್ರಸ್ತುತ ಸರಬರಾಜು ಮಾಡುತ್ತಿರುವ ಕುಚಲಕ್ಕಿಯು ಸಾಂಪ್ರದಾಯಕ ವಾಗಿ ಕೆಂಪು ಕುಚ್ಚಲಕ್ಕಿ ಊಟ ಮಾಡುವವರೆಗೆ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಪಡಿತರದಲ್ಲಿ ನೀಡುವ ಅಕ್ಕಿಯನ್ನು ಕೆಲವು ಕಾರ್ಡುದಾರರು ಪಡೆಯುತ್ತಿಲ್ಲ. ಕೆಲವರು ಕರಾವಳಿ ಜಿಲ್ಲೆಯಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡುವ ಬಗ್ಗೆ ಕೇಳಿ ಬರುತ್ತಿದೆ. ಹಾಗಾಗಿ ಕರಾವಳಿ ಜಿಲ್ಲೆಯ ಪಡಿತರದಲ್ಲಿ ಕೆಂಪು ಕುಚಲಕ್ಕಿ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಾರ್ವಜನಿಕ ವಿತರಣಾ ಪದ್ಧತಿಯಡಿ ಕೆಂಪು ಕುಚಲಕ್ಕಿ ವಿತರಿಸುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸ್ಥಳೀಯವಾಗಿ ವಿತರಿಸುವ ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಗೆ ಪ್ರತಿ ತಿಂಗಳು 1 ಲಕ್ಷ ಕ್ವಿಂಟಾಲ್ ಕೆಂಪು ಕುಚಲಕ್ಕಿ ಅಗತ್ಯವಿದ್ದು, ಅವುಗಳ ಉತ್ಪಾದನೆಗೆ 16ರಿಂದ 18 ಲಕ್ಷ ಕ್ವಿಂಟಾಲ್ ಭತ್ತದ ಅವಶ್ಯಕತೆ ಇದೆ. ಈಗಾಗಲೇ ಈ ಎರಡು ಜಿಲ್ಲೆಗಳಲ್ಲಿ ಎಂ.ಒ. ಫೋರ್, ಜಯ, ಜ್ಯೋತಿ, ಭದ್ರಕಜೆ ಮುಂತಾದ ಕೆಂಪು ಕುಚಲಕ್ಕಿ ಉತ್ಪಾದನೆ ಮಾಡಬಹುದಾದ ಭತ್ತಗಳು ಬೆಳೆಯುತ್ತಿದೆ. ಅಗತ್ಯಬಿದ್ದರೆ ಬೆಳಗಾವಿ, ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಿಂದ ಗುಣಮಟ್ಟದ ಭತ್ತ ಖರೀದಿಸುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡಗಿ ಮಾತನಾಡಿ ಕರಾವಳಿ ಜಿಲ್ಲೆಗೆ ಕೆಂಪು ಕುಚಲಕ್ಕಿಗೆ ಸಂಬಂಧಪಟ್ಟಂತೆ ಭತ್ತಗಳ ಸಂಗ್ರಹಣೆ, ಸಂಸ್ಕರಣೆ ಹಾಗೂ ಸಂಬಂಧಿತ ಭತ್ತದ ತಳಿಗೆ ಸಬ್ಸಿಡಿ ನೀಡಲು ಕೇಂದ್ರ ಸರಕಾರದ ಅನುಮೋದನೆ ಪಡೆಯಲು ರಾಜ್ಯ ಆಹಾರ ನಿಗಮ ಪ್ರಯತ್ನ ಮಾಡಲಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾತನಾಡಿ ರೈತರು ಬೆಳೆದ ಕೆಂಪು ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆಯಡಿ ಖರೀದಿ ಮಾಡಲು ಈವರೆಗೆ ಅವಕಾಶ ಇರಲಿಲ್ಲ. ಪ್ರಸ್ತುತ ಭಾರತದ ಆಹಾರ ನಿಗಮದಲ್ಲಿ ಕೆಂಪು ಭತ್ತಕ್ಕೆ ಕನಿಷ್ಟ ಬೆಲೆ ನೀಡಲು ಅನುಮತಿ ದೊರಕಿದೆ. ಈಗ ಪಡಿತರದಲ್ಲಿ ಪ್ಯಾರಾ ಬಾಯಿಲ್ಡ್ ಅಕ್ಕಿ ದೊರಕುತ್ತಿದ್ದು, ಇನ್ನು ಮುಂದೆ ಕೆಂಪು ಕುಚಲಕ್ಕಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ವೈ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಪ್ರತಾಪ್ ಸಿಂಹ ನಾಯಕ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಪಿ.ಆರ್. ರಮ್ಯ, ವಿವಿಧ ಅಕ್ಕಿ ಗಿರಣಿಗಳ ಮಾಲಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X