ಉಸಿರಾಟದ ಸಮಸ್ಯೆ: ಚೆನ್ನೈನ ಆಸ್ಪತ್ರೆಗೆ ದಾಖಲಾದ ವಿಜಯಕಾಂತ್

ಚೆನ್ನೈ: ದೇಸಿಯಾ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕರಾಗಿರುವ ಖ್ಯಾತ ತಮಿಳು ನಟ ವಿಜಯಕಾಂತ್ ಅವರನ್ನು ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಜಯಕಾಂತ್ ಅವರು ಮೇ 19 ರ ಬುಧವಾರ ಮುಂಜಾನೆ ಉಸಿರಾಟದ ತೊಂದರೆಯ ಬಗ್ಗೆ ಹೇಳಿದ್ದರು. ನಂತರ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಕಳೆದ ಕೆಲವು ವರ್ಷಗಳಲ್ಲಿ, ಅವರು ಹಲವಾರು ಬಾರಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು.
ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅವರ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪಕ್ಷ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರು ಒಂದು ಅಥವಾ ಎರಡು ದಿನಗಳಲ್ಲಿಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.
ಸೆಪ್ಟೆಂಬರ್ 2020 ರಲ್ಲಿ, ವಿಜಯಕಾಂತ್ ಕೊರೋನವೈರಸ್ ಸೋಂಕು ತಗಲಿರುವುದು ಪರೀಕ್ಷೆಯಿಂದ ದೃಢಪಟ್ಟಿತ್ತು