Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ...

ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಪ್ರತಿ ಗ್ರಾಮ ಪಂಚಾಯತ್ ಗೆ 50 ಸಾವಿರ ರೂ. ಮುಂಗಡ ನೀಡಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 May 2021 3:47 PM IST
share
ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮೇ 20: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಜಿಲ್ಲೆಗಳಿಗೆ ಹಂಚಲಾಗುತ್ತಿದೆ. ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು.

ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ್ ಪೂರೈಕೆ ಸೇರಿದಂತೆ ಹೆಚ್ಚು ನೆರವು ನೀಡಲು ಚರ್ಚಿಸಲಾಗುವುದು. ಇದಕ್ಕಾಗಿ ತುಮಕೂರು, ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಾಗುತ್ತಿದೆ. ನಂತರ ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.

ಪ್ರತಿ ಜಿಲ್ಲಾಡಳಿತ, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಾಹಿತಿ ನೀಡಲಾಗುವುದು. ಎಲ್ಲಾ ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕೋರಲಾಗುವುದು. ಪಾಸಿಟಿವಿಟಿ ದರ 37-40% ಇದ್ದದ್ದು, 27% ಕ್ಕೆ ಬಂದಿದೆ. ಇದನ್ನು 5% ಕ್ಕಿಂತ ಕಡಿಮೆ ಇಳಿಸುವ ಗುರಿ ಇದೆ. ಬೇರೆ ದೇಶಗಳ ಕೊರೋನ ಅಲೆ ಬಗ್ಗೆ ಕಾನ್ಪುರ ಐಐಟಿ ವರದಿ ನೀಡಿದ್ದು, ಈ ಬಗ್ಗೆ ಕೇಂದ್ರದ ಜೊತೆ ಚರ್ಚೆಯಾಗಿ ಸಲಹೆ ದೊರೆತಿದೆ. ಸಾವಿನ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ಅದನ್ನೂ ಕಡಿಮೆ ಮಾಡಬೇಕಿದೆ ಎಂದರು.

ಪ್ರತಿ ಗ್ರಾಮ ಪಂಚಾಯತ್ ಗಳಿಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಹಳ್ಳಿಗಳ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗೆ ಇದು ಅನುಕೂಲವಾಗಲಿದೆ. ಸೋಂಕಿತರ ಮನೆಗೆ ಭೇಟಿ ನೀಡಿ, ಅವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸಾಗಿಸಲು ಸಹಕಾರಿಯಾಗಲಿದೆ ಎಂದರು.

ಅಂಕಿ ಅಂಶ ಮುಚ್ಚಿಟ್ಟರೆ ಯಾವುದೇ ಲಾಭವಿಲ್ಲ. ಒಂದೂಕಾಲು ಲಕ್ಷಕ್ಕಿಂತ ಹೆಚ್ಚು ಕೋವಿಡ್ ಪರೀಕ್ಷೆ ನಡೆಯುತ್ತಿದ್ದು, ಇನ್ನೂ ಹೆಚ್ಚಿಸಲು, 24 ಗಂಟೆಯೊಳಗೆ ಪರೀಕ್ಷಾ ವರದಿ ನೀಡಲು ಸೂಚಿಸಲಾಗಿದೆ. ಬ್ಲ್ಯಾಕ್ ಫಂಗಸ್ ಪ್ರಕರಣ ನೋಡಿಕೊಂಡು ಔಷಧಿ ವಿತರಣೆ ಮಾಡಲಾಗುತ್ತಿದೆ. ಹೆಚ್ಚಿನ ಪ್ರಮಾಣದ ಔಷಧಿ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೋವಿಡ್ ನಿಂದ ಗುಣಮುಖರಾದವರ ಆರೋಗ್ಯದ ಮೇಲೆಯೂ ನಿಗಾ ಇಡಬೇಕೆಂದು ಸೂಚಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X