Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುದಾನರಹಿತ ಶಾಲೆ-ಕಾಲೇಜು ಸಿಬ್ಬಂದಿಗೆ...

ಅನುದಾನರಹಿತ ಶಾಲೆ-ಕಾಲೇಜು ಸಿಬ್ಬಂದಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಸಿಎಂಗೆ ಸುರೇಶ್ ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ20 May 2021 3:53 PM IST
share
ಅನುದಾನರಹಿತ ಶಾಲೆ-ಕಾಲೇಜು ಸಿಬ್ಬಂದಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಸಿಎಂಗೆ ಸುರೇಶ್ ಕುಮಾರ್ ಮನವಿ

ಬೆಂಗಳೂರು, ಮೇ 20: ವಿದ್ಯಾರ್ಥಿಗಳ ಹಿತ ಕಾಯುತ್ತಿರುವ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ- ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅವರು, ಕೋವಿಡ್ ಕಾರಣದಿಂದ‌ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ‌ ಕ್ಷೇತ್ರವೂ ಪ್ರಧಾನವಾದ‌ ಕ್ಷೇತ್ರವಾಗಿದೆ. ಸರ್ಕಾರ‌ ವಿಧಿಸಿದ ಲಾಕ್ ಡೌನ್ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನರಹಿತ ಶಿಕ್ಷಣ‌ ಸಂಸ್ಥೆಗಳ ಮೇಲೆ ಅವಲಂಬಿಸಿದ್ದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು‌ ನಡೆಯದ ಕಾರಣ, ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ‌ ಆಸಕ್ತಿ ತೋರಲಿಲ್ಲ. ಇದೂ ಕೂಡಾ ಬಹುವಿಧದ ಸಾಮಾಜಿಕ‌‌ ಸಮಸ್ಯೆಗಳಿಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ.

ಭವಿಷ್ಯದ ಪ್ರಜೆಗಳನ್ನು ರೂಪಿಸುವ ಕಾಯಕದಲ್ಲಿ‌ ಸಾವಿರಾರು ವಿದ್ಯಾಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿವೆ. ಈ ಖಾಸಗಿ ಅನುದಾನರಹಿತ‌‌ ಶಾಲಾ ಕಾಲೇಜುಗಳಲ್ಲಿ ಲಕ್ಷಾಂತರ (ಅಂದಾಜು ಎರಡು‌ ಲಕ್ಷ) ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾ ಸಂಸ್ಥೆಗಳ ಆಡಳಿತ ವರ್ಗಗಳು ನೀಡುವ ವೇತನ-ಭತ್ಯೆಗಳನ್ನು ಸಂತೃಪ್ತಿಯಿಂದ ಸ್ವೀಕರಿಸಿ ಮಕ್ಕಳ ಭವಿಷ್ಯವನ್ನ ಕಾಯುತ್ತಿದ್ದಾರೆ. 

ಆದರೆ, ಖಾಸಗಿ ಶಾಲೆಗಳಲ್ಲಿ‌, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ‌, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ. ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ‌ ಕೂಲಿ‌ ಕೆಲಸ ಮಾಡಿದ್ದಾರೆ, ಹಣ್ಣು ತರಕಾರಿ ಮಾರಿದ್ದಾರೆ. ಇದನ್ನು ನಾವು ಹಲವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕೇಳಿದ್ದೇವೆ. ಅವರ ನೆರವಿಗೆ ಧಾವಿಸುವುದೂ ಸಹ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಶಿಕ್ಷಣದಂತಹ ಪವಿತ್ರ ವೃತ್ತಿಯನ್ನು ಕೈಗೆತ್ತಿಕೊಂಡ‌‌ ಇಂತಹ ಶಿಕ್ಷಕ‌ ಸಮುದಾಯಕ್ಕೆ‌ ನಾಗರಿಕ ಸಮಾಜದ ಪ್ರತಿಕ್ರಿಯೆ ತನ್ನದೇ‌ ಆದ ದೂರಗಾಮಿ‌, ನಕಾರಾತ್ಮಕವಾದ ಪರಿಣಾಮವನ್ನು ಬೀರಬಲ್ಲುದು. ಮುನ್ನೆಲೆಗೆ ಬಾರದ ಹಾಗೂ ತಮ್ಮ‌‌ ಆಯ್ಕೆಯ ಬೌದ್ಧಿಕ ಕ್ಷೇತ್ರ ಕಲ್ಪಿಸುವ ಸಾಮಾಜಿಕ ಸಂಕೋಚದ ಕಾರಣ, ಈ ವರ್ಗ ಗದ್ದಲದ ಹೋರಾಟಕ್ಕೂ ಮುಂದಾಗಿಲ್ಲ. ಆದರೆ, ಈ ಸಮುದಾಯ ತೀವ್ರ ಆರ್ಥಿಕ-ಭೌತಿಕ ಸಂಕಷ್ಟಗಳನ್ನು ಅನುಭವಿಸುತ್ತಿರುವುದು ಸತ್ಯ. ಹಾಗಾಗಿ ಇಂತಹ ಸಂದರ್ಭದಲ್ಲಿ ತಾವು ಈ ವರ್ಗದ ಬಗ್ಗೆ ವಿಶೇಷ ಕಾಳಜಿಯನ್ನು ತೋರಬೇಕಾದ ತುರ್ತು ಅವಶ್ಯಕತೆ ಇರುತ್ತದೆ. ಈ ವರ್ಗಕ್ಕೆ ನೀಡುವ ಸಹಕಾರವು ನಮ್ಮ ಮಕ್ಕಳ ಭವಿಷ್ಯ ಕಾಯುವಂತಹ ನಿರ್ಣಯವಾಗುತ್ತದೆ.  

ಆದ ಕಾರಣ, ದಯವಿಟ್ಟು, ಕೋವಿಡ್ ಕಾರಣ‌ದಿಂದ ಸಂಕಷ್ಟಕ್ಕೆ ಸಿಲುಕಿರುವ, ಬಜೆಟ್ ಅನುದಾನರಹಿತ ಶಾಲೆ ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ತಾವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ‌ ಮಾಡುವ ಮೂಲಕ ಈ ಸಮುದಾಯಕ್ಕೆ ವಿಶ್ವಾಸ‌ ತುಂಬಬೇಕು ಎಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X