Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆಗಾರರ ಬದುಕು ಬಾಣಲೆಯಿಂದ ಬೆಂಕಿಗೆ:...

ಬೆಳೆಗಾರರ ಬದುಕು ಬಾಣಲೆಯಿಂದ ಬೆಂಕಿಗೆ: ಕಾಫಿ ತೋಟಗಳೇ ಕಾಡಾನೆಗಳ ಆವಾಸ ಸ್ಥಾನ

ಲಕ್ಷ್ಮೀಶ್ ಕೊಡಗುಲಕ್ಷ್ಮೀಶ್ ಕೊಡಗು20 May 2021 11:47 PM IST
share
ಬೆಳೆಗಾರರ ಬದುಕು ಬಾಣಲೆಯಿಂದ ಬೆಂಕಿಗೆ: ಕಾಫಿ ತೋಟಗಳೇ ಕಾಡಾನೆಗಳ ಆವಾಸ ಸ್ಥಾನ

ಮಡಿಕೇರಿ, ಮೇ 20: ಕೊಡಗಿನ ಬೆಳೆಗಾರರ ಸ್ಥಿತಿ ಕಳೆದ ಐದು ವರ್ಷಗಳಿಂದ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಪ್ರಾಕೃತಿಕ ವಿಕೋಪ, ದುಬಾರಿ ನಿರ್ವಹಣೆ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿರುವುದು, ಇದರ ಜೊತೆ ಜೊತೆಯಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವುದು ವನ್ಯಜೀವಿಗಳ ದಾಳಿ. 

ಕಾಡಾನೆಗಳು ಜಿಲ್ಲೆಯ ಕಾಫಿ ತೋಟಗಳನ್ನು ತಮ್ಮ ಆವಾಸ ಸ್ಥಾನವನ್ನಾಗಿ ಮಾಡಿಕೊಂಡು ಸುಮಾರು 10 ವರ್ಷಗಳೇ ಕಳೆದಿದೆ. ಇದೇ ಅವಧಿಯಲ್ಲಿ ನೂರಾರು ಸಾವು, ನೋವುಗಳು ಇದೇ ಮೂಕ ವನ್ಯಜೀವಿಯಿಂದ ಸಂಭವಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹುಲಿ, ಚಿರತೆ, ಕಾಡೆಮ್ಮೆ, ಕಾಡು ಹಂದಿಗಳ ಉಪಟಳ ಕೂಡ ಮಿತಿ ಮೀರಿದೆ. ಇವುಗಳು ಆಗೊಮ್ಮೆ, ಈಗೊಮ್ಮೆ ಬಂದು ಹೋಗಬಹುದು, ಆದರೆ ಕಾಡಾನೆಗಳು ಮಾತ್ರ ಕೊಡಗು ಜಿಲ್ಲೆಯ ಕಾಫಿ ತೋಟಗಳನ್ನೇ ತವರು ಮನೆ ಎಂದು ಭಾವಿಸಿದಂತ್ತಿದೆ. ಕಾಡಾನೆಗಳ ಹಿಂಡು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸ್ಥಾನಪಲ್ಲಟವಾಗುತ್ತಿವೆಯೇ ಹೊರತು ಯಾವುದೇ ಕಾರಣಕ್ಕೂ ಅರಣ್ಯದೆಡೆಗೆ ಮುಖ ಮಾಡುತ್ತಿಲ್ಲ. 

ಇದು ಬೆಳೆಗಾರರಿಗೆ ಮಾತ್ರವಲ್ಲದೆ ಅರಣ್ಯ ಇಲಾಖೆಗೂ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದು, ಎಲ್ಲರೂ ಅಸಹಾಯಕರಾಗಿದ್ದಾರೆ. ಕಾಡಿನಲ್ಲಿ ಆಹಾರ ಮತ್ತು ನೀರಿನ ಅಭಾವವನ್ನು ಎದುರಿಸುತ್ತಿರುವ ಕಾಡಾನೆಗಳು ಬಾಳೆ, ತೆಂಗು, ಅಡಿಕೆ, ಭತ್ತ ಮತ್ತಿತರ ಬೆಳೆಗಳಿಗಾಗಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳಿನಲ್ಲಂತೂ ಹಲಸಿನ ಹಣ್ಣಿನ ಆಸೆಗಾಗಿ ಹಿಂಡು, ಹಿಂಡು ಆನೆಗಳು ತೋಟಗಳಿಗೆ ನುಗ್ಗುತ್ತಿವೆ. ಇದರಿಂದ ಕಾಫಿ, ಏಲಕ್ಕಿ, ಕಾಳು ಮೆಣಸು ಗಿಡಗಳು ಸಂಪೂರ್ಣವಾಗಿ ನಾಶವಾಗುತ್ತಿವೆ. ಹಲಸಿನ ಮರ ಬೆಳೆಸಿರುವ ಬೆಳೆಗಾರರ ಪರಿಸ್ಥಿತಿ ಬಿಸಿ ತುಪ್ಪವಾಗಿದ್ದು, ಉಗುಳುವಾಗೂ ಇಲ್ಲ, ನುಂಗುವಾಗೂ ಇಲ್ಲ ಎಂಬಂತಾಗಿದೆ. ಮರಗಳನ್ನು ಕಡಿಯಲು ಆಗದೆ, ಉಳಿಸಿಕೊಳ್ಳಲೂ ಆಗದೆ ಪರದಾಡುತ್ತಿರುವ ಬೆಳೆಗಾರರು ತೋಟವನ್ನು ಮಾರಿ ಬಿಟ್ಟರೆ ಯಾವುದೇ ಸಮಸ್ಯೆ ಇರುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದು ಬಿಟ್ಟಿದ್ದಾರೆ. 

ಸಿದ್ದಾಪುರ, ಅಭ್ಯತ್ ಮಂಗಲ, ವಾಲ್ನೂರು, ತ್ಯಾಗತ್ತೂರು, ಪಾಲಿಬೆಟ್ಟ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ತೋಟಗಳನ್ನು ಕಾಡಾನೆಗಳು ತಮ್ಮ ಆವಾಸ ಸ್ಥಾನವನ್ನಾಗಿ ಮಾಡಿಕೊಂಡಿರುವುದಲ್ಲದೆ ಗಜಮಾರ್ಗವನ್ನಾಗಿ ಮಾರ್ಪಡಿಸಿಕೊಂಡಿವೆ. ಈ ಭಾಗದಲ್ಲಿ ಪ್ರಸ್ತುತ ಹಲಸಿನ ಹಣ್ಣು ಘಮಘಮಿಸುತ್ತಿದ್ದು, ಹಣ್ಣಿನ ಆಸೆಗಾಗಿ ಲಗ್ಗೆ ಇಡುತ್ತಿರುವ ಗಜಹಿಂಡಿನಿಂದ ತೋಟ ಸಂಪೂರ್ಣವಾಗಿ ಹಾನಿಗೀಡಾಗುತ್ತಿದೆ. ಅಲ್ಲದೆ ಇವುಗಳ ಚಲನವಲನ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಕಾರ್ಮಿಕರಲ್ಲಿ ಆತಂಕವನ್ನೂ ಮೂಡಿಸುತ್ತಿದೆ. ಏನೂ ತಿಳಿಯದ ಆನೆಗಳಿಗೆ ಮತ್ತಷ್ಟು ಬಲಿಯಾಗುವುದು ಬೇಡ ಎನ್ನುವುದೇ ಬೆಳೆಗಾರರ ಪ್ರಾರ್ಥನೆಯಾಗಿದೆ.

ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳಿಂದ ಆಗಿರುವ ಹಾನಿಗೆ ಇಲ್ಲಿಯವರೆಗೆ ಸರ್ಕಾರದಿಂದ ಸೂಕ್ತ ಪರಿಹಾರ ದೊರೆತ್ತಿಲ್ಲ. ಆನೆ ದಾಳಿಯಿಂದ ಸತ್ತವರ ಕುಟುಂಬಕ್ಕೆ 5 ರಿಂದ ಏಳೂವರೆ ಲಕ್ಷ ದವರೆಗೆ ಪರಿಹಾರದ ಹಣ ನೀಡಲಾಗುತ್ತದೆ. ಆದರೆ ಇದೇ ವನ್ಯಜೀವಿಗಳ ದಾಂಧಲೆಯಿಂದ ಸಂಪೂರ್ಣವಾಗಿ ನಾಶವಾದ ತೋಟಗಳಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ. ಹಣ ನೀಡದಿದ್ದರೂ ಪರ್ವಾಗಿಲ್ಲ, ಆದರೆ ಕಾಡಾನೆಗಳ ಉಪಟಳ ತಡೆಗೆ ಶಾಶ್ವತ ಪರಿಹಾರವನ್ನಾದರೂ ಸೂಚಿಸಿ ಎಂದು ಗೋಗರೆದರೂ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರೈಲ್ವೆ ಕಂಬಿಗಳನ್ನು ಬಳಸಿ ಬೇಲಿ ನಿರ್ಮಿಸುವ ಕಾರ್ಯ ಅರ್ಧದಲ್ಲೇ ನಿಂತಿದೆ. ಕೇವಲ ಪಟಾಕಿ ಸಿಡಿಸುವುದರಿಂದ ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸ್ಥಳಾಂತರಗೊಳ್ಳುತ್ತಿವೆಯೇ ಹೊರತು ಅರಣ್ಯಕ್ಕೆ ಮರಳುತ್ತಿಲ್ಲ. ಸಮಸ್ಯೆಯ ಗಂಭೀರತೆಯನ್ನು ಅರಿಯದ ಜಿಲ್ಲೆಯ ಜನಪ್ರತಿನಿಧಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೂಲಕ ಶಾಶ್ವತ ಯೋಜನೆಯೊಂದನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎನ್ನುವ ಆರೋಪ ಬೆಳೆಗಾರರು ಹಾಗೂ ಕಾರ್ಮಿಕ ಮುಖಂಡರಿಂದ ಕೇಳಿ ಬಂದಿದೆ.

ಒಂದೆಡೆ ಅಕಾಲಿಕ ಮತ್ತು ಅತಿಯಾದ ಮಳೆಯಿಂದ ತೋಟಗಳು ನಾಶವಾಗುತ್ತಿದ್ದರೆ ಮತ್ತೊಂದೆಡೆ ವನ್ಯಜೀವಿಗಳ ದಾಳಿಗೆ ನೆಲಸಮವಾಗುತ್ತಿವೆ. ಇದರ ನಡುವೆಯೇ ಕೋವಿಡ್ ಸಂದಿಗ್ಧ ಪರಿಸ್ಥಿತಿ ಎದುರಾಗಿದ್ದು, ತೋಟದ ನಿರ್ವಹಣೆ ಅಸಾಧ್ಯವಾಗಿದೆ. ಮಾಲೀಕರು ಹಾಗೂ ಕಾರ್ಮಿಕರು ತಲೆಹಾಕದ ತೋಟಗಳಲ್ಲಿ ಗಜಹಿಂಡುಗಳದ್ದೇ ದರ್ಬಾರ್ ನಡೆಯುತ್ತಿದೆ. ಮತ್ತೊಂದು ಕಡೆ ಹಾಲಿಗಾಗಿ ತಾವು ಸಾಕಿದ ಹಸು, ಎಮ್ಮೆಗಳ ಮೇಲೆ ಹುಲಿ ದಾಳಿಯಾಗುತ್ತಿದೆ. ವನ್ಯಜೀವಿಗಳ ದಾಳಿ ಒಂದು ಕಡೆಯಾದರೆ ಮೃಗೀಯ ಗುಣದ ದುಷ್ಕರ್ಮಿಗಳು ಕಟ್ಟಿ ಹಾಕಿದ ಹಸುವನ್ನೇ ಕದ್ದೊಯ್ದು ರಾಜಾರೋಷವಾಗಿ ಮಾಂಸ ಮಾಡುತ್ತಿರುವ ಘಟನೆಗಳು ಮತ್ತೊಂದೆಡೆ ನಡೆಯುತ್ತಿದೆ. 

ಒಟ್ಟಿನಲ್ಲಿ ಬೆಳೆಗಾರರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸಾಲ ಮರುಪಾವತಿಸಲಾಗದ ಅತಂತ್ರ ಸ್ಥಿತಿಗೆ ಬಂದು ತಲುಪಿದ್ದಾರೆ. ಕಾಡಾನೆಗಳ ದಾಳಿಯಿಂದ ತೋಟಗಳನ್ನು ಉಳಿಸಿಕೊಳ್ಳಬೇಕಾದರೆ ಜಿಲ್ಲೆಯ ಜನಪ್ರತಿನಿಧಿಗಳು, ಅರಣ್ಯ ಅಧಿಕಾರಿಗಳು ಹಾಗೂ ಸರ್ಕಾರ ಇಚ್ಛಾಶಕ್ತಿಯ ಕೊರತೆಯಿಂದ ಹೊರ ಬರುವ ಅನಿವಾರ್ಯತೆ ಇದೆ ಎಂದು ವಾಲ್ನೂರು, ತ್ಯಾಗತ್ತೂರು ಭಾಗದ ಪ್ರಮುಖರಾದ ಮುಂಡ್ರಮನೆ ಸುದೇಶ್, ಪ್ರದೀಪ್, ಭುವನೇಂದ್ರ ಮತ್ತಿತರ ಬೆಳೆಗಾರರು ಅಭಿಪ್ರಾಯಪಟ್ಟಿದ್ದಾರೆ.

ಭತ್ತದ ಕಣಜವೆಂದೇ ಖ್ಯಾತಿ ಪಡೆದಿದ್ದ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದೆ ಇರುವುದರಿಂದ ಗದ್ದೆಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಪರಿಸ್ಥಿತಿ ಮುಂದೊಂದು ಕಾಫಿ ತೋಟಗಳಿಗೂ ಎದುರಾದರೆ ಆಶ್ಚರ್ಯ ಪಡಬೇಕಾಗಿಲ್ಲ. ಬೆಳೆಗಾರರಿಗೆ ತಮ್ಮ ತೋಟಗಳ ಮೇಲೆ ಬೇಸರ ಮೂಡುವ ಮೊದಲು ನಮ್ಮನ್ನಾಳುವ ಸರ್ಕಾರಗಳು ಎಚ್ಚೆತ್ತುಕೊಂಡರೆ ಕೊಡಗು ಹಾಗೂ ಕರ್ನಾಟಕ ಕಾಫಿಗಾಗಿ ಪರಾವಲಂಬಿಯಾಗುವುದನ್ನು ತಪ್ಪಿಸಬಹುದು ಎಂದು ಹಿರಿಯರು ಅಭಿಪ್ರಾಯಪಡುತ್ತಾರೆ.

share
ಲಕ್ಷ್ಮೀಶ್ ಕೊಡಗು
ಲಕ್ಷ್ಮೀಶ್ ಕೊಡಗು
Next Story
X