Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು...

ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು: ಡಿ.ಕೆ ಶಿವಕುಮಾರ್ ಪ್ರಶ್ನೆ

''ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ''

ವಾರ್ತಾಭಾರತಿವಾರ್ತಾಭಾರತಿ21 May 2021 3:34 PM IST
share
ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು: ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಮೇ 21: ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಜನರ ರಕ್ಷಣೆ ನಮ್ಮ ಕರ್ತವ್ಯ. ಹೀಗಾಗಿ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೂ, ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಪೂರೈಕೆ, ಮೆಡಿಕಲ್ ಕಿಟ್, ಆಹಾರ ಕಿಟ್ ವಿತರಣೆಯಿಂದ ಉಚಿತ ಲಸಿಕೆ ನೀಡಲು 100 ಕೋಟಿ ರೂ. ಯೋಜನೆವರೆಗೂ ಕಾಂಗ್ರೆಸ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಯವ ಕಾಂಗ್ರೆಸ್ ಸದಸ್ಯರು ರಾಜ್ಯದ ಉದ್ದಗಲಕ್ಕೂ ಜನರ ಪ್ರಾಣ ಉಳಿಸಲು ಅಗತ್ಯ ಸೇವೆ ಒದಗಿಸುತ್ತಿದ್ದಾರೆ. ವಿದೇಶಗಳಿಗೆ ಲಸಿಕೆ ರಫ್ತು ಸ್ಥಗಿತಗೊಳಿಸಿ, ನಮ್ಮ ದೇಶದ ಜನರಿಗೆ ಮೊದಲು ನೀಡಬೇಕು. ಲಸಿಕೆ ಪಡೆಯಲು ಆನ್ ಲೈನ್ ನೋಂದಣಿ ಮಾಡಿಸಬೇಕೆಂದು ಹೇಳಿದ್ದಾರೆ. ಹಳ್ಳಿ ಜನರಿಗೆ ಆನ್ಲೈನ್ ಬಗ್ಗೆ ಏನು ಗೊತ್ತಿರುತ್ತದೆ? ಹೀಗಾಗಿ ನಮ್ಮ ಯೂತ್ ಕಾಂಗ್ರೆಸ್ ಸದಸ್ಯರು ಪಕ್ಷ, ಜಾತಿ, ಧರ್ಮ ಬೇಧವಿಲ್ಲದೆ, ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭಿಸುತ್ತಿದ್ದಾರೆ ಎಂದು ಹೇಳಿದರು.

ನಮ್ಮ ವಿದ್ಯಾರ್ಥಿ ಘಟಕದವರು ಕಳೆದ ವರ್ಷ ರಕ್ತ ದಾನ ಮಾಡಿದ್ದರು. ಈ ವರ್ಷವೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ಮಹಿಳಾ ಕಾಂಗ್ರೆಸ್ ಸದಸ್ಯೆಯರು ವಿಶೇಷ ಆರೋಗ್ಯ ಕಿಟ್ ಗಳನ್ನು ಅಗತ್ಯವಿರುವವರಿಗೆ ನೀಡುತ್ತಿದ್ದಾರೆ. 160 ಕ್ಷೇತ್ರಗಳಲ್ಲಿ ಕೇರ್ ಸೆಂಟರ್, ಸಹಾಯವಾಣಿ ಆರಂಭಿಸಲಾಗಿದ್ದು ಉಳಿದ ಕಡೆಗಳಲ್ಲೂ ಮಾಡಲಾಗುವುದು. ರಾಜ್ಯದಲ್ಲಿ 150 ಆಂಬ್ಯುಲೆನ್ಸ್ ಗಳು ಸೇವೆ ಸಲ್ಲಿಸುತ್ತಿವೆ. ಸರ್ಕಾರ ಘೋಷಿಸಿರುವ ಪ್ಯಾಕೇಜ್ ಬಡವರಿಗೆ ಸಾಲುವುದಿಲ್ಲ. ಹೀಗಾಗಿ ನಮ್ಮ ನಾಯಕರು ಸ್ಥಳೀಯವಾಗಿ ಆಹಾರ ಕಿಟ್ ಹಂಚುತ್ತಿದ್ದಾರೆ. ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಈ ಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಲು ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಸರ್ಕಾರದ ವೈಫಲ್ಯ ಪ್ರಶ್ನಿಸುವುದು  ನಮ್ಮ ಕರ್ತವ್ಯ ಎಂದು ತಿಳಿಸಿದರು.

ಇನ್ನು ಪ್ರದೇಶಾಭಿವೃದ್ಧಿ ನಿಧಿಯಿಂದ 100 ಕೋಟಿ ರೂ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಲವರು ಸ್ವಂತ ಹಣವೇ ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಾದ್ರೆ ಅವರು ತಮ್ಮ ಸ್ವಂತ ಹಣದಲ್ಲಿ ಕೆಲಸ ಮಾಡುತ್ತಿದ್ದಾರೆಯೇ? ನಮಗೆ ಅಭಿವೃದ್ಧಿಗಿಂತ ಜನರ ಪ್ರಾಣ ಉಳಿಸೋದು ಮುಖ್ಯ. ನಾವು ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಕೊರೋನ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಲು ವಿರೋಧ ಪಕ್ಷದ ನಾಯಕರಿಗೆ ಸರ್ಕಾರ ಅವಕಾಶ ನಿರಾಕರಿಸಿದೆ. ಆದರೂ ನಾವು ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಾರಿಗೆ ತರಲಾಗಿದ್ದ ಇಂದಿರಾ ಕ್ಯಾಂಟೀನ್ ಕುರಿತು ಬಿಜೆಪಿಯವರು ಮಾತನಾಡಿದ್ದರು. ಈಗ ಅಲ್ಲಿ ಉಚಿತವಾಗಿ ಊಟ ಕೊಡಲು ನಿರ್ಧರಿಸಿದ್ದಾರೆ. ಆದರೆ ಊಟ ಪಡೆಯುವವರು, ಫೋಟೋ, ಗುರುತಿನ ಚೀಟಿ ತನ್ನಿ ಎಂದು ಆದೇಶಿಸಿರುವುದು ನೀಚ ಕೆಲಸ. ನಾನು ಇದನ್ನು ಪ್ರಶ್ನಿಸಿದಾಗ ಈ ನಿರ್ಧಾರ ಹಿಂಪಡೆದರು. ಆದರೆ ಈ ಊಟ ನೀಡಲು ಆಪ್ ನಲ್ಲಿ ಫೋಟೋ ಹಾಕಲು ನಿನ್ನೆ ಆದೇಶ ಹೊರಡಿಸಿದೆ. ಕಾಂಗ್ರೆಸ್ ಇದನ್ನು ಖಂಡಿಸುತ್ತದೆ. ಇದರ ವಿರುದ್ಧ ನಾವು ಹೋರಾಡುತ್ತೇವೆ ಎಂದು ಹೇಳಿದರು.

ನಾವು ಸರ್ಕಾರಕ್ಕೆ ಸಹಕಾರ ನೀಡಿದ್ದೇವೆ. ಆದರೆ ಸರ್ಕಾರ ಅದನ್ನು ಉಳಿಸಿಕೊಂಡಿಲ್ಲ. ಇಂದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರನ್ನು ಕಳೆದುಕೊಂಡ ದಿನ. ನಮ್ಮ ದೇಶದ ಐಕ್ಯತೆ ಕಾಪಾಡುವ ದಿನ. ರಾಜೀವ್ ಗಾಂಧಿ ಅವರು ಹಾಕಿಕೊಟ್ಟ ಮಾರ್ಗದರ್ಶನ, ವಿಚಾರ ಧಾರೆ, ಚಿಂತನೆಗಳನ್ನು ಪ್ರತಿ ಸಂದರ್ಭದಲ್ಲೂ ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಲಸಿಕೆಯನ್ನು ವಿರೋಧಿಸಿಲ್ಲ: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೋನ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ. ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ ಮಂತ್ರಿಗಳು ತೆಗೆದುಕೊಳ್ಳದೇ, ಅದನ್ನು ಬಡವರ ಮೇಲೆ ಪ್ರಯೋಗಿಸಿದ್ದರು. ನಾವು ಲಸಿಕೆ ವಿರೋಧಿಸಿದ್ದರೆ ಸಿದ್ದರಾಮಯ್ಯನವರು, ನಾನು, ನಮ್ಮ ನಾಯಕರು ಲಸಿಕೆ ತೆಗೆದುಕೊಳ್ಳುತ್ತಿದ್ದೆವಾ? ನಾವು ಕೊಟ್ಟ ಸಹಕಾರವನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X