Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ಲ್ಯಾಕ್‌ ಫಂಗಸ್‌ ಗೆ ಹೆಚ್ಚಿನ ಪ್ರಮಾಣದ...

ಬ್ಲ್ಯಾಕ್‌ ಫಂಗಸ್‌ ಗೆ ಹೆಚ್ಚಿನ ಪ್ರಮಾಣದ ಔಷಧ ಪೂರೈಸಲು ಕೇಂದ್ರಕ್ಕೆ ಮನವಿ: ಆರೋಗ್ಯ ಸಚಿವ ಸುಧಾಕರ್‌

ವಾರ್ತಾಭಾರತಿವಾರ್ತಾಭಾರತಿ21 May 2021 4:11 PM IST
share
ಬ್ಲ್ಯಾಕ್‌ ಫಂಗಸ್‌ ಗೆ ಹೆಚ್ಚಿನ ಪ್ರಮಾಣದ ಔಷಧ ಪೂರೈಸಲು ಕೇಂದ್ರಕ್ಕೆ ಮನವಿ: ಆರೋಗ್ಯ ಸಚಿವ ಸುಧಾಕರ್‌

ದಾವಣಗೆರೆ, ಮೇ 21: ರಾಜ್ಯದ ಕೆಲವೆಡೆ ಕಾಣಿಸಿಕೊಂಡಿರುವ ಬ್ಲಾಕ್‌ ಫಂಗಸ್‌ ರೋಗದ ಬಗ್ಗೆ ಕೆಲವರು ವದಂತಿಗಳನ್ನು ಹರಡಿಸುತ್ತಿದ್ದು ಈ ಬಗ್ಗೆ ಜನತೆ ಭಯ ಭೀತರಾಗುವ ಅಗತ್ಯವಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಶುಕ್ರವಾರ ದಾವಣಗೆರೆಯಲ್ಲಿ ಕೋವಿಡ್‌ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಶಿಲೀಂದ್ರದಿಂದ ಉಂಟಾಗುವ ರೋಗ. ಇದಕ್ಕೆ ಅನೇಕ ಕಾರಣಗಳಿವೆ. ಅತಿಯಾದ ಸ್ಟಿರಾಯ್ಡ್‌ ಸೇವನೆ, ಹೆಚ್ಚಿನ ಆಕ್ಸಿಜನ್‌ ಬಳಕೆ, ಹೆಚ್ಚು ಅವಧಿಗೆ ಐಸಿಯುನಲ್ಲಿರುವುದು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಮಧುಮೇಹ, ಮೂತ್ರಪಿಂಡ, ಕ್ಯಾನ್ಸರ್‌ ಮುಂತಾದ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಆಗಿದ್ದಲ್ಲಿ ಅಂತವರಿಗೆ ಕೋವಿಡ್‌ ಬಂದು ಹೋದ ನಂತರ ಈ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಈಗಾಗಲೇ ಈ ರೋಗದ ಪತ್ತೆ, ಚಿಕಿತ್ಸೆ ಮತ್ತು ಔಷಧೋಪಚಾರಗಳ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಇಂದು ಅವರು ವರದಿ ನೀಡುವ ನಿರೀಕ್ಷೆಯಿದೆ. ಆರಂಭಿಕ ಹಂತದಲ್ಲಿ ಇಎನ್‌ಟಿ ತಜ್ಞರು ಪರಿಶೀಲನೆ ನಡೆಸಬೇಕು. ಹೀಗಾಗಿ ಕೋವಿಡ್‌ ನಿಂದ ಗುಣಮುಖರಾದ ಎಲ್ಲರಲ್ಲಿ ಈ ಕಾಯಿಲೆ ಸಂಬಂಧ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೆ ಮನವಿ: ಫಂಗಸ್‌ ಚಿಕಿತ್ಸೆಗೆ ಸಂಬಂಧಿಸಿದ ಔಷಧದ ಸರಬರಾಜು ಕಡಿಮೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರ ಸಚಿವ ಸದಾನಂದಗೌಡರಿಗೆ ಮನವಿ ಮಾಡಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧ ಲಭ್ಯವಾಗಲಿದೆ. ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆಯನ್ನೂ ನೀಡಲಾಗಿದೆ. ಹೀಗಾಗಿ ಜನರು ಆತಂಕ ಪಡುವ ಭಯಭೀತರಾಗುವ ಅಗತ್ಯವಿಲ್ಲ ಎಂದರು.

ಇನ್ನೂ ಕೋವಿಡ್‌ ಎರಡನೇ ಅಲೆ ಕೆಲ ಜಿಲ್ಲೆಗಳಲ್ಲಿ ಹೊರತುಪಡಿಸಿ ಹೆಚ್ಚಿನ ಜಿಲ್ಲೆಗಳಲ್ಲಿ ಇಳಿಮುಖ ಸ್ಥಿತಿಯಲ್ಲಿದೆ. ಇದು ಸಮಾಧಾನಕರ ಅಂಶ. ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮ ಮತ್ತು ಜನತೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಇದೇ ರೀತಿ ಜನತೆ ಸಹಕಾರ ನೀಡಿದರೆ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ ಎಂದು ತಿಳಿಸಿದರು.

ಕೆಲ ಲೋಪಗಳಿವೆ: ಕೋವಿಡ್‌ ನಿಯಂತ್ರಣ ವಿಷಯಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಕೆಲ ನ್ಯೂನ್ಯತೆಗಳಿವವೆ. ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಆರು ತಿಂಗಳ ಹಿಂದೆಯೇ ಕಳುಹಿಸಿಕೊಟ್ಟಿದ್ದ ವೆಂಟಿಲೇಟರ್‌ಗಳನ್ನು ಕೆಲ ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಿಲ್ಲ. ಹಾಗೆಯೇ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್‌ ಆರೈಕೆ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲು ಮಾಡಿ ಔಷಧೋಪಚಾರ ನೀಡಲು ಸೂಚಿಸಲಾಗಿದೆ. ಮುಂದಿನ ವಾರದೊಳಗೆ ಈ ಎಲ್ಲಾ ಲೋಪಗಳನ್ನು ಸರಿಪಡಿಸಲು ಗಡುವು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಇರುವ ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತರಷ್ಟು ಹಾಸಿಗೆ ನೀಡಬೇಕು ಎಂಬ ವಿಷಯ ಸರಿಯಾಗಿ ಪಾಲನೆ ಆಗಿಲ್ಲ. ಒಂದೆರಡು ದಿನದಲ್ಲಿ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಜರುಗಿಸಬೇಕು. ಅಗತ್ಯವಾದರೆ ಕಾನೂನು ಮೂಲಕ ಶಿಸ್ತುಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೊರತೆ ಇಲ್ಲ: ಜಿಲ್ಲೆಯಲ್ಲಿ ಆಕ್ಸಿಜನ್‌ ಮತ್ತು ಔಷಧಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದ ಎಲ್ಲ ನೆರವನ್ನೂ ಒದಗಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಸೇರಿರುವ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ ನೂರು ಹಾಸಿಗೆಗಳಿಗೆ ಆಕ್ಸಿಜನ್‌ ಸಂಪರ್ಕ ನೀಡುವ ಆಲೋಚನೆ ಇದೆ. ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ ಹಾಸಿಗೆಗಳಿಗೆ ಆಕ್ಸಿಜನ್‌ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ವ್ಯಾಕ್ಸಿನ್‌ ವಿಷಯದಲ್ಲೂ ಕೊರೋನ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಶಿಕ್ಷಕರನ್ನೂ ಆ ಪಟ್ಟಿಗೆ ಸೇರಿಸಲಾಗಿದೆ. ಒಟ್ಟಾರೆ ಮೂರನೇ ಅಲೆ ಬರುವ ವೇಳೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ವೈದ್ಯರ ಬಹುತೇಕ ಎಲ್ಲಾ ಹುದ್ದೆಗಳನ್ನು ಒಂದು ವಾರದಲ್ಲಿ ತುಂಬಲಾಗುವುದು. ಹಾಗೆಯೇ ತಜ್ಞರ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಕೆಲ ದಿನಗಳಲ್ಲಿ ಆ ಪ್ರಕ್ರಿಯೆ ಕೂಡ ಮುಗಿಯಲಿದೆ. ಗುತ್ತಿಗೆ ಆಧಾರದಲ್ಲಿ ಅಗತ್ಯ ಸಂಖ್ಯೆ ಸಿಬ್ಬಂದಿ ನೇಮಕ ಅಧಿಕಾರವನ್ನೂ ಜಿಲ್ಲಾಡಳಿತಗಳಿಗೆ ನೀಡಲಾಗಿದೆ ಎಂದು ಸಚಿವ ಸುಧಾಕರ್‌ ವಿವರಿಸಿದರು. 

ಸಂಸದರಾದ ಜಿ.ಎಂ, ಸಿದ್ದೇಶ್ವರ್‌, ನಗರ ಪಾಲಿಕೆ  ಮೇಯರ್‌ ಎಸ್‌,ಟಿ ವಿರೇಶ್‌, ಚನ್ನಗಿರಿ ಶಾಸಕ ಮಾಡಾಳು ವೀರೂಪಾಕ್ಷಪ್ಪ, ದಾವಣಗೆರೆ ಶಾಸಕ ರವೀಂದ್ರನಾಥ್‌, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಹರಿಹರ ಶಾಸಕ ಎಸ್. ರಾಮಪ್ಪ, ವಿಧಾನಪರಿಷತ್‌ ಸದಸ್ಯ ಭೋಜೇಗೌಡ, ಜಿಲ್ಲಾಧಿಕಾರಿ ಮಹಂತೇಶ್‌ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಮಹಂತೇಶ್‌, ಎಸ್ಪಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್‌ ಅವರು ಸಭೆಯಲ್ಲಿ ಹಾಜರಿದ್ದರು.

ಚಿಗಟೇರಿ ಆಸ್ಪತ್ರೆಗೆ ಭೇಟಿ 

ಇದಕ್ಕೂ ಮೊದಲು ಬೆಳಗ್ಗೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಒಂದೂವರೆ ತಾಸಿಗೂ ಹೆಚ್ಚು ಕಾಲ ಕೋವಿಡ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಕಂಡು ಬಂದ ಲೋಪಗಳ ಬಗ್ಗೆ ಅಧಿಕಾರಿಗಳನ್ನುತರಾಟೆ ತೆಗೆದುಕೊಂಡ ಸಚಿವರು, ಎಲ್ಲಾ ಕೊರತೆಗಳನ್ನು ಒಂದೆರಡು ದಿನಗಳಲ್ಲಿ ನಿವಾರಿಸಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X