Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ...

ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸ್ಪೀಕರ್ ಕೃಷ್ಣ ನಿಧನ

ವಾರ್ತಾಭಾರತಿವಾರ್ತಾಭಾರತಿ21 May 2021 5:24 PM IST
share
ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸ್ಪೀಕರ್ ಕೃಷ್ಣ ನಿಧನ

ಮಂಡ್ಯ, ಮೇ 21: ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸ್ಪೀಕರ್ ಕೃಷ್ಣ(81) ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು.

ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಅವರು ಚೆನ್ನೈಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಮೈಸೂರಿಗೆ ಮರಳಿದ್ದರು.

ಮೃತರು ಪತ್ನಿ ಇಂದ್ರಮ್ಮ, ಪುತ್ರಿ ಮಂಜುಳಾ, ಅಳಿಯ ಶ್ರೀಧರ್, ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೃಷ್ಣ ಅವರ ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಎಸ್.ಆರ್.ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರೇಷ್ಮೆ ಮತ್ತು ಪಶುಸಂಗೋಪನೆ ಸಚಿವರಾಗಿದ್ದ ಕೃಷ್ಣ ಮೂರು ಅವಧಿಗೆ ಕೆ.ಆರ್.ಪೇಟೆ ಶಾಸಕರಾಗಿದ್ದರು. ಹೆಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದಾಗ ಮಂಡ್ಯ ಜಿಲ್ಲೆಯಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಬಿಜೆಪಿ– ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣ ಸ್ಪೀಕರ್‌ ಆಗಿದ್ದರು.

ರಾಜಕೀಯ ರಂಗದಲ್ಲಿ ಸರಳತೆ, ಸಜ್ಜನಿಕೆ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದ ಕೃಷ್ಣ ಹಿರಿಯ ಗಾಂಧಿವಾಧಿಯಾಗಿದ್ದು ಮಂಡ್ಯದ ಗಾಂಧಿಯೆಂದೇ ಪ್ರಖ್ಯಾತರಾಗಿದ್ದರು.

ಕೃಷ್ಣ ಅವರ ಅಕಾಲಿಕ ನಿಧನಕ್ಕೆ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಸಚಿವ ಡಾ.ನಾರಾಯಣಗೌಡ ಸೇರಿ ಹಲವಾರು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕೃಷ್ಣ ಅವರ ರಾಜಕೀಯ ಯಶೋಗಾಥೆ

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಪ್ರಥಮ ಭಾರಿಗೆ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ ಅವರು, ಎಸ್.ಆರ್. ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ರೇಷ್ಮೆ ಮತ್ತು ಪಶುಸಂಗೋಪನಾ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಈ ವೇಳೆ ಕೆ.ಆರ್. ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಬಳಿ ರೇಷ್ಮೆ ಸಂಶೋಧನೆ  ಮತ್ತು ತರಬೇತಿ ಕೇಂದ್ರ ಮತ್ತು ಕೆ.ಆರ್. ಪೇಟೆ ಪಟ್ಟಣದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಆರಂಭಿಸಿದ್ದರು. 1994ರಲ್ಲಿ ಜನತಾದಳದಿಂದ ಆಯ್ಕೆಯಾದರು. ಈ ವೇಳೆ ತಾಲೂಕಿನ ಮಾಕವಳ್ಳಿಯ ಐ.ಸಿ.ಎಲ್. ಸಕ್ಕರೆ ಕಾರ್ಖಾನೆ ಆರಂಭಕ್ಕೆ 100 ಎಕರೆ ಜಮೀನು ಮಂಜೂರು ಮಾಡಿಸಿ ಸಕ್ಕರೆ ಕಾರ್ಖಾನೆಯನ್ನು ಮುಖ್ಯಮಂತ್ರಿಗಳಾಗಿದ್ದ ಎಚ್.ಡಿ.ದೇವೇಗೌಡರ ಮೂಲಕ ಆರಂಭಕ್ಕೆ ಅಪಾರವಾಗಿ ಶ್ರಮಿಸಿದ್ದರು. 

1996ರಲ್ಲಿ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಸಂಸದರಾಗಿ ಆಯ್ಕೆಯಾದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2004ರಲ್ಲಿ ಮತ್ತೆ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದ ಕೃಷ್ಣರವರು, ಮುಖ್ಯಮಂತ್ರಿಗಳಾಗಿದ್ದ ಧರ್ಮಸಿಂಗ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ರಾಜ್ಯ ವಿಧಾಸಭೆಯ ಸ್ಪೀಕರ್ ಆಗಿ ಸುಮಾರು 40 ತಿಂಗಳುಗಳ ಕಾಲ ರಾಜ್ಯ ವಿಧಾನಸಭೆಯನ್ನು ಸಮರ್ಥವಾಗಿ ಮುನ್ನಡೆಸುವ ಮೂಲಕ ರಾಜಕಾರಣದ ಮೇಸ್ಟ್ರು ಎಂಬ ಕೀರ್ತಿ ಭಾಜನರಾಗಿದ್ದರು.

ನಂತರ 2008ರಲ್ಲಿ, 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಆದರೆ, ಮತದಾರರು ಕೈಹಿಡಿಯದ ಕಾರಣ ಪರಾಜಯಗೊಂಡು ರಾಜಕೀಯ ಕ್ಷೇತ್ರಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಯ ಒತ್ತಾಯದ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2019ರಲ್ಲಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದು ನಿವೃತ್ತಿ ಘೋಷಣೆ ಮಾಡಿದ್ದರು.

ಕೃಷ್ಣ ಅವರ ಅವಧಿಯ ಸಾಧನೆಗಳು
ಕೆ.ಆರ್. ಪೇಟೆ ಪಟ್ಟಣದ ಮಿನಿವಿಧಾನಸೌಧ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಇಂಜಿನಿಯರಿಂಗ್ ಕಾಲೇಜು ಆರಂಭ, ಸರಕಾರಿ ಡಿಗ್ರಿ ಕಾಲೇಜು, ಸ್ನಾತಕೋತ್ತರ ಪದವಿ ಕಾಲೇಜು ಕೋರ್ಸುಗಳ ಆರಂಭ, ಸರಕಾರಿ ಐಟಿಐ ಕಾಲೇಜು, ಅಗ್ನಿಶಾಮಕ ಠಾಣೆ, ಗವೀಮಠ ಮೊರಾರ್ಜಿ ಶಾಲೆ, ಗವೀಮಠದಲ್ಲಿ ರೇಷ್ಮೆ ಸಂಶೋಧನಾ ಕೇಂದ್ರ, 8 ಪಶು ವೈದ್ಯಕೀಯ ಆಸ್ಪತ್ರೆಗಳ ಮಂಜೂರು, 4 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ, ಕಟ್ಟೆಕ್ಯಾತನಹಳ್ಳಿ ಸೇತುವೆ, ಬಂಡಿಹೊಳೆ ಬಳಿ ಸೇತುವೆ ನಿರ್ಮಾಣ ಸೇರಿದಂತೆ ಸಾಕಷ್ಟು ಪ್ರೌಢಶಾಲೆಗಳು, ಸರಕಾರಿ ಆಸ್ಪತ್ರೆಗಳು ಹಾಗೂ ಹಲವು ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿರುವ ಕೃಷ್ಣ ಅವರು ಕೆ.ಆರ್.ಪೇಟೆ ತಾಲೂಕಿನ ಅಭಿವೃದ್ಧಿಗೆ ತಮ್ಮ ಶಕ್ತಿ ಮೀರಿ ಶ್ರಮಿಸಿದ್ದರು.

ಬಸ್ಸಿನಲ್ಲಿ ಪ್ರಯಾಣ: ಕೆ.ಆರ್.ಪೇಟೆ ಕೃಷ್ಣ ಅವರು ಶಾಸಕರಾಗಿ, ಸಂಸದರಾಗಿದ್ದ ವೇಳೆ ಹಾಗೂ ಮಾಜಿಯಾಗಿದ್ದ ವೇಳೆಯೂ ಮೈಸೂರಿನಿಂದ ಕೆ.ಆರ್.ಪೇಟೆಗೆ ಕೆ.ಎಸ್.ಆರ್.ಟಿ. ಬಸ್ಸಿನಲ್ಲಿ ಬಂದು ಹೋಗುವ ಮೂಲಕ ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಬೆಳೆಸಿಕೊಂಡಿದ್ದರು. ಕೃಷ್ಣ ಅವರು ತಮಗೆ ಅಧಿಕಾರ ಇರಲಿ, ಇಲ್ಲದಿರಲಿ ತಾಲೂಕಿನಲ್ಲಿ ನಡೆಯುವ ವಿವಾಹ, ಸಾವು, ಮತ್ತಿತರ ಕಾರ್ಯಕ್ರಮಗಳಿಗೆ ತಪ್ಪದೇ ಭಾಗವಹಿಸುವ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು.

ತಾಲೂಕಿನಲ್ಲಿ ಜನತಾದಳ ಪಕ್ಷವನ್ನು ಬೇರುಮಟ್ಟದಲ್ಲಿ ಗಟ್ಟಿಯಾಗಿ ಕಟ್ಟುವ ಕೆಲಸ ಮಾಡಿದ್ದ ಕೃಷ್ಣರವರು ಸಾವಿರಾರು ಮಂದಿ ಸೈನಿಕರಂತಹ ಕಾರ್ಯಕರ್ತರ ಪಡೆಯನ್ನೇ ಹಳ್ಳಿಗಳಲ್ಲಿ ಹುಟ್ಟು ಹಾಕಿದ್ದರು. ಇಂತಹ ಅಪರೂಪದ ರಾಜಕಾರಣಿ ತಾಲೂಕಿನಲ್ಲಿ ಅತ್ಯಂತ ವಿರಳ ಎಂದೇ ಹೇಳಬಹುದು. 

ಗಣ್ಯರ ಸಂತಾಪ: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ, ಮಾಜಿ ಕೇಂದ್ರ ಸಚಿವ ಕೆ.ರೆಹಮಾನ್‌ಖಾನ್, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಎಂ.ಪುಟ್ಟಸ್ವಾಮೀಗೌಡ, ಚಲನಚಿತ್ರ ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಕೆಯುಐಡಿಎಫ್‌ಸಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಕೇಂದ್ರ ಸೆನ್ಸಾರ್ ಮಂಡಳಿ ಮಾಜಿ ನಿರ್ದೇಶಕ ಬಸ್ ಕೃಷ್ಣೇಗೌಡ, ರಾಜ್ಯ ಕಿಯೋನಿಕ್ಸ್ ನಿಗಮದ ಮಾಜಿ ನಿರ್ದೇಶಕ ಅಘಲಯ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಮನ್‌ಮುಲ್ ನಿರ್ದೇಶಕರಾದ ಹೆಚ್.ಟಿ.ಮಂಜು, ಕೆ.ಜಿ.ತಮ್ಮಣ್ಣ, ಮುಖಂಡರಾದ ಎಂ.ಡಿ.ದೊಡ್ಡಸ್ವಾಮೀಗೌಡ, ಜಿ.ಪಂ.ಮಾಜಿ ಉಪಾಧ್ಯಕ್ಷರಾದ ಎಸ್.ಅಂಬರೀಶ್, ಕೆ.ಎಸ್.ಪ್ರಭಾಕರ್, ಜಿ.ಪಂ. ಮಾಜಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಮಾಜಿ ಉಪಾಧ್ಯಕ್ಷೆ ಗಾಯಿತ್ರಿರೇವಣ್ಣ, ತಾ.ಪಂ.ಮಾಜಿ ಅಧ್ಯಕ್ಷ ಮೆಣಸ ಮಹಾದೇವೇಗೌಡ, ಮುಖಂಡರಾದ ಎಂ.ಪಿ.ಲೋಕೇಶ್, ಡಿ.ಆರ್.ವೆಂಕಟೇಶ್, ಚಿಕ್ಕೇಗೌಡ, ಎ.ಎಂ.ಸಂಜೀವಪ್ಪ,  ಎಂ.ಜೆ.ಶಶಿಧರ್, ಲಕ್ಷಿಪುರ ಅಕ್ಕಿ ಮಂಜು, ಹಾದನೂರು ಪರಮೇಶ್, ಹೆಚ್.ಆರ್.ಲೋಕೇಶ್, ಕೆ.ಮುರುಳೀಧರ್, ಗ್ರಾಮ ಪಂಚಾಯಿತಿ ಸದಸ್ಯ ಚಿಲ್ಲದಹಳ್ಳಿ ಆರ್.ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಅಭಿಮಾನಿಗಳ ಆಗ್ರಹ
ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗಳನ್ನು ನೀಡಿರುವ ಕೃಷ್ಣ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ಹಿತದೃಷ್ಠಿಯಿಂದ ಕೃಷ್ಣ ಅವರ ಪಾರ್ಥೀವ ಶರೀರವನ್ನು ಕೆ.ಆರ್.ಪೇಟೆ ಪಟ್ಟಣದ ಸ್ಟೇಡಿಯಂ ಅಥವಾ ಇನ್ನಿತರ ಸರಕಾರಿ ಸಂಸ್ಥೆಯ ಆವರಣದಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಅವರ ಆದರ್ಶಗಳನ್ನು ಜನತೆಗೆ ತಿಳಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳ ಬಳದ ಡಿ.ಆರ್.ವೆಂಕಟೇಶ್, ಎಂ.ಪಿ.ಲೋಕೇಶ್ ಮತ್ತಿತರರು ಮನವಿ ಮಾಡಿದ್ದಾರೆ. 

ಜನಾನುರಾಗಿ ನಾಯಕನಾಗಿದ್ದ ಕೃಷ್ಣ ಅವರು ತಾಲೂಕು ಬೋರ್ಡ್ ಸದಸ್ಯರಾಗಿ, ಶಾಸಕರಾಗಿ, ಸಚಿವರಾಗಿ ಹಾಗೂ ಸಂಸದರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ವಿಧಾನಸಭೆಯ ಸ್ಪೀಕರ್ ಆಗಿ ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದವರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ

-ಯಡಿಯೂರಪ್ಪ, ಮುಖ್ಯಮಂತ್ರಿ 

ಕೆ.ಆರ್.ಕೃಷ್ಣ ಅವರು ಸರಳ ಹಾಗೂ ಸಜ್ಜನ ರಾಜಕಾರಣದಿಂದ ಹೆಸರು ಮಾಡಿದವರು. ತಳಮಟ್ಟದಿಂದ ಜನ ನಾಯಕರಾಗಿ ಬೆಳೆದ ಕೃಷ್ಣ ಅವರು, ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಅವರ ಸೇವೆ ಸ್ಮರಣೀಯ. ವಿಧಾನಸಭೆ ಸ್ಪೀಕರ್ ಆಗಿ ಸಂಕಷ್ಟದ ಸಮಯದಲ್ಲಿ ಸದನವನ್ನು ಸಮರ್ಥವಾಗಿ ನಡೆಸಿದ್ದ ನಾಯಕರಾಗಿದ್ದರು. ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪು ಮೂಡಿಸಿದ್ದರು'

-ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ನನ್ನ ಆತ್ಮೀಯ ಸ್ನೇಹಿತರೂ ಆಗಿದ್ದ, ಸರಳ ವ್ಯಕ್ತಿತ್ವದ ಕೃಷ್ಣ ಅವರ ಸಾವು ನನಗೆ ಅಪಾರ ದುಃಖ ತಂದಿದೆ. ಜನತಾ ಪರಿವಾರದ ಮೂಲಕ ಸಮಾಜವಾದಿ ಆಶಯಗಳೊಂದಿಗೆ ರಾಜಕಾರಣದಲ್ಲಿ ಇದ್ದವರು. ಸ್ಪೀಕರ್ ಆಗಿದ್ದ ಅವಧಿಯಲ್ಲಿ ಸದನವನ್ನು ನಡೆಸಿದ ಅಚ್ಚುಕಟ್ಟುತನಕ್ಕಾಗಿ ಮೇಷ್ಟ್ರು ಎಂದೆ ಎಲ್ಲರಿಂದ ಕರೆಸಿಕೊಳ್ಳುವಂತಾಗಿದ್ದರು. ಜನತಾ ಪರಿವಾರದ ಮೂಲಕ ರಾಜಕೀಯ ಆರಂಭಿಸಿ ಕಾಂಗ್ರೆಸ್ ಸೇರಿ, ಕಾಂಗ್ರೆಸ್ ಮೂಲಕವೇ ರಾಜಕೀಯ ಜೀವನಕ್ಕೆ ಪೂರ್ಣವಿರಾಮ ಇಟ್ಟಿದ್ದರು. ಅವರ ಕುಟುಂಬ ಮತ್ತು ಬಂಧುಗಳಿಗೆ ಕೃಷ್ಣ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ'

-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X