Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳಗೇರಿ ನಿವಾಸಿಗಳಿಗೆ ಮಾಸಿಕ 10 ಸಾವಿರ...

ಕೊಳಗೇರಿ ನಿವಾಸಿಗಳಿಗೆ ಮಾಸಿಕ 10 ಸಾವಿರ ರೂ.ನಂತೆ ಪರಿಹಾರ ಭತ್ತೆ ಘೋಷಿಸಲು ಆಗ್ರಹ

'ಸ್ಲಂ ಜನಾಂದೋಲನ ಕರ್ನಾಟಕ'ದಿಂದ ರಾಜ್ಯಾದ್ಯಂತ ಮನೆ-ಮನೆಯಿಂದಲೇ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ21 May 2021 5:47 PM IST
share
ಕೊಳಗೇರಿ ನಿವಾಸಿಗಳಿಗೆ ಮಾಸಿಕ 10 ಸಾವಿರ ರೂ.ನಂತೆ ಪರಿಹಾರ ಭತ್ತೆ ಘೋಷಿಸಲು ಆಗ್ರಹ

ಬೆಂಗಳೂರು, ಮೇ 22: `ರಾಜ್ಯದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಮತ್ತು ಕೊಳಗೇರಿ(ಸ್ಲಂ) ನಿವಾಸಿಗಳಿಗೆ ಲಾಕ್‍ಡೌನ್ ಆರ್ಥಿಕ ಪರಿಹಾರವಾಗಿ ಮೂರು ತಿಂಗಳು ತಲಾ 10 ಸಾವಿರ ರೂ. ಭತ್ತೆ ಘೋಷಿಸಬೇಕು. ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯಾ ವಿಪತ್ತು ಪರಿಹಾರದ ಮಾನದಂಡದಂತೆ ಮೂರು ತಿಂಗಳು (ಪಡಿತರ ವಿತರಣೆ ಹೊರತು ಪಡಿಸಿ) ತಲಾ 10 ಕೆ.ಜಿ.ಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು' ಎಂದು ಆಗ್ರಹಿಸಿ `ಸ್ಲಂ ಜನಾಂದೋಲನ ಕರ್ನಾಟಕ'ದಿಂದ ರಾಜ್ಯಾದ್ಯಂತ ಮನೆ-ಮನೆಯಿಂದಲೇ ಶುಕ್ರವಾರ ಸತ್ಯಾಗ್ರಹ ನಡೆಸಲಾಯಿತು.

'ರಾಜ್ಯದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು. ಕೋವಿಡ್ ಚಿಕಿತ್ಸೆ ಉಚಿತಗೊಳಿಸಿ ಮತ್ತು ಅದರ ವೆಚ್ಚ ಸಂಪೂರ್ಣವಾಗಿ ಸರಕಾರವೇ ಭರಿಸಬೇಕು. ಕೋವಿಡ್‍ನಿಂದ ಸಾವಿಗೀಡಾದ ಕುಟುಂಬಗಳಿಗೆ 25 ಲಕ್ಷ ರೂ.ಪರಿಹಾರ ನೀಡಬೇಕು. ಈಗಾಗಲೇ ನೆರೆ ರಾಜ್ಯಗಳು ಈ ವಿಷಯವಾಗಿ ಪ್ರತಿ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿವೆ' ಎಂದು ತಿಳಿಸಲಾಗಿದೆ.

ಲಾಕ್‍ಡೌನ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೃಷಿಕರು, ಕ್ಷೌರಿಕರು, ಶ್ರಮಿಕರು, ಆಟೋ ಚಾಲಕರು, ಚಿಂದಿ ಹಾಯುವವರು, ಹಮಾಲಿಗಳು, ಬಟ್ಟಿ ಕಾರ್ಮಿಕರು, ಚಮ್ಮಾರರು, ಗೃಹ ಕಾರ್ಮಿಕರು ಸೇರಿ ಇತರೆ ಸಮುದಾಯಗಳಿಗೆ 1,250 ಕೋಟಿ ರೂ. ಪರಿಹಾರವನ್ನು ಘೋಷಿಸಿರುವುದು ಸ್ವಾಗತರ್ಹ. ಆದರೆ, ಇದರಲ್ಲಿ ನಗರದ ಜನಸಂಖ್ಯೆ ಶೇ.45ರಷ್ಟು ಜನರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ವಂಚಿತ ಸಮುದಾಯಗಳಿಗೆ, ಬಿಪಿಎಲ್ ಕುಟುಂಬಗಳಿಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರದಿಂದ ಮೇ ಹಾಗೂ ಜೂನ್ ತಿಂಗಳಿಗೆ 5 ಕೆಜಿ ಅಕ್ಕಿ ಉಚಿತ ವಿಸ್ತರಣೆ ಈಗಾಗಲೇ ಪ್ರಧಾನಿ ಘೋಷಿಸಿರುವುದನ್ನೇ ಪುನರ್ ವ್ಯಾಖ್ಯಾನಿಸುವುದನ್ನು ಬಿಟ್ಟರೆ ಬೇರಾವುದೇ ವಿಶೇಷತೆ ಇಲ್ಲ ಎಂದು ಆಕ್ಷೇಪಿಸಲಾಗಿದೆ.

ಪರಿಹಾರ ಘೋಷಣೆಯಲ್ಲಿ ನಗರ ವಂಚಿತ ಸಮುದಾಯವಾದ ಸ್ಲಂ ಜನರಿಗೆ ಆದ್ಯತೆ ನೀಡದಿರುವುದನ್ನು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಖಂಡಿಸುತ್ತದೆ. ಕೋವಿಡನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ಸರಕಾರ ರಾಷ್ಟ್ರೀಯ ವಿಪತ್ತಿನ ಮಾನದಂಡಗಳ ಅನ್ವಯ ಪರಿಹಾರವನ್ನು ಘೋಷಿಸಬೇಕು. ಈ ಪ್ಯಾಕೇಜ್ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಘೋಷಣೆಯಾಗಿದೆ. ಇದರಿಂದ ನಗರ ವಂಚಿತ ಸಮುದಾಯಗಳಿಗೆ ಯಾವುದೇ ರೀತಿಯ ಪ್ರಯೋಜನ ದೊರಕುವುದಿಲ್ಲ. ಸರಕಾರದ ಇಚ್ಛಾಶಕ್ತಿ ಕೊರತೆಯಿಂದ ಈ ಅಂಶಗಳು ಜಾರಿಗೆ ಬರುವುದಕ್ಕೆ ಇನ್ನೆಷ್ಟು ವರ್ಷಗಳು ಬೇಕಾಗುತ್ತದೆಯೋ ಗೊತ್ತಿಲ್ಲ. ಆದುದರಿಂದ ರಾಜ್ಯ ಸರಕಾರ ಮುಂದಿನ ಕೋವಿಡ್ ಆರ್ಥಿಕ ಪರಿಹಾರದಲ್ಲಿ ಸ್ಲಂ ನಿವಾಸಿಗಳ ಬೇಡಿಕೆಗಳನ್ನು ಸೇರ್ಪಡೆಗೊಳಿಸಿ ಘೋಷಿಸಬೇಕು ಎಂದು ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X