Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 18ರಿಂದ 44ರ ವಯೋಮಿತಿಯ ಮುಂಚೂಣಿ...

18ರಿಂದ 44ರ ವಯೋಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ಮೇ 22ರಿಂದ ಲಸಿಕೆ: ಡಾ.ಅಶ್ವತ್ಥ ನಾರಾಯಣ

''ಒಂದೆರಡು ತಿಂಗಳಲ್ಲೇ ರಾಜ್ಯದ 500 ಕಡೆ ಆಕ್ಸಿಜನ್ ಉತ್ಪಾದಕ ಘಟಕ''

ವಾರ್ತಾಭಾರತಿವಾರ್ತಾಭಾರತಿ21 May 2021 8:11 PM IST
share
18ರಿಂದ 44ರ ವಯೋಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ಮೇ 22ರಿಂದ ಲಸಿಕೆ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಮೇ 21: ಹದಿನೆಂಟರಿಂದ 44 ವರ್ಷ ವಯೋಮಿತಿಯೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ನಾಳೆ(ಮೇ 22)ಯಿಂದ ಕೋವಿಡ್ ಲಸಿಕೆ ಕೊಡಲಾಗುವುದು ಹಾಗೂ ಒಂದೆರಡು ತಿಂಗಳಲ್ಲಿ ರಾಜ್ಯದ 500 ಕಡೆ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವೇ ಲಸಿಕೆ ನೀಡಲು ಅದರ ಮೇಲೆ ವ್ಯವಸ್ಥಿತ ನಿಗಾ ಇರಿಸಲು ಪ್ರತ್ಯೇಕ ಸಾಫ್ಟ್ ವೇರ್ ವೊಂದನ್ನು ಅಭಿವೃದ್ಧಿ ಮಾಡಲಾಗಿದ್ದು, ಅದನ್ನು ಕೋವಿನ್ ಪೋರ್ಟಲ್ ಜತೆ ಲಿಂಕ್ ಮಾಡಲಾಗುತ್ತಿದೆ. ಜೂನ್ 1ರಿಂದ ಈ ಪೋರ್ಟಲ್ ಕೆಲಸ ಮಾಡಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 1,90,000 ಜನರಿಗೆ ಈಗ ಕೊವ್ಯಾಕ್ಸಿನ್ ಸೆಕೆಂಡ್ ಡೋಸ್ ಕೊಡಬೇಕಿದೆ. ಇದರಲ್ಲಿ 1,70,000 ಕೊವ್ಯಾಕ್ಸಿನ್ ಲಸಿಕೆ ಸಿದ್ಧವಿದ್ದು, ಈಗಾಗಲೇ ಕೊಡಲು ಪ್ರಾರಂಭಿಸಲಾಗಿದೆ. ಕೋವಿಶೀಲ್ಡ್ ದಾಸ್ತಾನು ಇದೆ. ಲಸಿಕೆ ಅಭಿಯಾನ ತೀವ್ರಗೊಳಿಸಲು ಮುಂಚೂಣಿಯ ಕಾರ್ಯಕರ್ತರ ಪಡೆ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಆದ್ಯತೆಯ ಮೇಲೆ ಅವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ನಾಳೆಯಿಂದ ಮಾಧ್ಯಮ ಸಿಬ್ಬಂದಿ, ಚಿತಾಗಾರ ಸಿಬ್ಬಂದಿ, ವಿಕಲಚೇತನರು, ಆರೋಗ್ಯ ಕಾರ್ಯಕರ್ತರು ಮತ್ತವರ ಕುಟುಂಬ ಸದಸ್ಯರು, ಕೋವಿಡ್ ಕೆಲಸಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಸರಕಾರಿ ಸಾರಿಗೆ ಸಿಬ್ಬಂದಿ, ವಿದ್ಯುತ್ ಮತ್ತು ನೀರು ಪೂರೈಕೆ ಸಿಬ್ಬಂದಿಗೆ ವ್ಕಾಕ್ಸಿನ್ ಕೊಡಲಾಗುವುದು. ಇನ್ನು ಸೋಂಕಿತರಾಗಿ ಗುಣಮುಖರಾದವರಿಗೆ ತಕ್ಷಣವೇ ಲಸಿಕೆ ಕೊಡಬೇಕಿಲ್ಲ. ಮೂರು ತಿಂಗಳ ನಂತರ ಲಸಿಕೆ ಕೊಟ್ಟರೂ ಸಾಕು. ಕೋವಿಶೀಲ್ಡ್ ಪಡೆದವರಿಗೆ 4-6 ವಾರದಲ್ಲಿ ಸೆಕೆಂಡ್ ಡೋಸ್ ಕೊಡಬೇಕಿತ್ತು. ಆ ಅಂತರವನ್ನು 16 ವಾರಗಳ ವರೆಗೆ ವಿಸ್ತರಿಸಲಾಗಿದೆ. ಡಿಸೆಂಬರ್ ಹೊತ್ತಿಗೆ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಕೊಡಲಾಗುವುದು. ಕೋವಿಡ್ ನಿಯಂತ್ರಣಕ್ಕೆ ಲಸಿಕೆಯೊಂದೇ ಅಂತಿಮ ಪರಿಹಾರ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

500 ಆಕ್ಸಿಜನ್ ಜನರೇಟರ್: ಇನ್ನು ಒಂದೆರಡು ತಿಂಗಳಲ್ಲಿಯೇ ರಾಜ್ಯದ ಎಲ್ಲೆಡೆ 400ರಿಂದ 500 ಆಕ್ಸಿಜನ್ ಜನರೇಟರ್ ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಅಲ್ಲಿಯೂ ಐಸಿಯುಗಳನ್ನು ಹಾಕುತ್ತಿದ್ದೇವೆ. ಒಂದು ಆಕ್ಸಿಜನ್ ಬೆಡ್‍ಗೆ 20 ಸಾವಿರ ಲೀಟರ್ ಆಮ್ಲಜನಕ ಬೇಕು. ಈ ಲೆಕ್ಕದಲ್ಲಿ ನೋಡಿದರೆ, ರಾಜ್ಯದಲ್ಲಿರುವ ಎಲ್ಲ ಆಕ್ಸಿಜನ್ ಬೆಡ್‍ಗಳಿಗೆ ಆಗಿ ಮಿಕ್ಕುವಷ್ಟು ಆಮ್ಲಜನಕದ ತುರ್ತು ಸಂಗ್ರಹ ನಮ್ಮಲ್ಲಿದೆ.

ಮೂರನೇ ಅಲೆಯ ದೃಷ್ಟಿ ಇಟ್ಟುಕೊಂಡು ಇನ್ನು ಹೆಚ್ಚೆಚ್ಚು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 3 ಸಾವಿರ ವೆಂಟಿಲೇಟರ್, 25 ಸಾವಿರ ಆಕ್ಸಿಜನ್ ಬೆಡ್‍ಗಳನ್ನು ಹೆಚ್ಚುವರಿಯಾಗಿ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದೇವೆ. ಇದರ ಪ್ರಮಾಣವನ್ನು ಮತ್ತೂ ಹೆಚ್ಚಿಸುತ್ತೇವೆ. ಇನ್ನು ಪಿಎಂ ಕೇರ್ ನಿಂದ 315 ಕೋಟಿ ರೂ.ಹಣದ ಜತೆಗೆ ವೆಂಟಿಲೇಟರ್ ಗಳನ್ನೂ ನಮಗೆ ಕೊಡಲಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ವಿವರ ನೀಡಿದರು.

ಈಗಾಗಲೇ ನೋಂದಣಿಯಾಗಿರುವ, ನೋಂದಣಿಯಾಗದ ಎಷ್ಟೋ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿದ್ದೇವೆ. ಎಲ್ಲೋ ಕುಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಆಕ್ಸಿಜನ್ ದೊರೆಯುತ್ತಿದೆ. ಹಾಗೆಯೇ ಸಣ್ಣ ಪ್ರಮಾಣದಲ್ಲಿದ್ದ ಆಕ್ಸಿಜನ್ ಸಾಗಾಣಿಕೆ ವ್ಯವಸ್ಥೆ ಈಗ ದೊಡ್ಡ ಪ್ರಮಾಣದಲ್ಲಿ ಆಗಿದ್ದು, ಪ್ರತ್ಯೇಕ ರೈಲುಗಳಲ್ಲಿ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಬ್ಲ್ಯಾಕ್ ಫಂಗಸ್‍ಗೆ ಔಷಧಿ: ಬ್ಲ್ಯಾಕ್ ಫಂಗಸ್ ಬೇರೆ ರಾಜ್ಯಗಳಲ್ಲಿ ಮೊದಲು ಕಂಡು ಬಂದಿತ್ತು. ನಮ್ಮಲ್ಲಿ ಈಗ ಕಂಡುಬಂದಿದೆ. ಈಗ ಒಂದು ನಿರ್ದಿಷ್ಟ ಔಷಧಿಗೆ ಬೇಡಿಕೆ ಬಂದಿದೆ. ಆದರೆ, ಇದಕ್ಕೆ ಹಲವಾರು ಔಷಧಿಗಳಿದ್ದರೂ ಜನರು ಮಾತ್ರ `ಲೈಸೋಸೋಮಲ್ ಅಮಪೋಟೆರಿಸನ್' ಔಷಧಿಯನ್ನೇ ಕೇಳುತ್ತಿದ್ದಾರೆ. `ಲೈಸೋಸೋಮಲ್ ಅಮಪೋಟೆರಿಸನ್-ಬಿ' ಸೇರಿ ಇನ್ನೂ ಪರ್ಯಾಯ ಔಷಧ ಇದ್ದರೂ ಜನರು ಅದಕ್ಕೇ ಮುಗಿಬೀಳುತ್ತಿದ್ದಾರೆ. ಮೆಡಿಕಲ್ ಸ್ಟೋರ್ ಗಳಲ್ಲಿಯೂ ಪರ್ಯಾಯ ಔಷಧಿಗಳು ಸಿಗುತ್ತಿವೆ. ಈ ತಿಂಗಳ 14ರಂದು `ಲೈಸೋಸೋಮಲ್ ಅಮಪೋಟೆರಿಸನ್' ಔಷಧಿಗೆ ಬೇಡಿಕೆ ಸಲ್ಲಿಸಿದ್ದೇವೆ. ಇನ್ನು ಕೆಲ ದಿನಗಳಲ್ಲಿಯೇ ನಮ್ಮ ಕೈ ಸೇರಲಿದೆ ಎಂದರು.

ಬ್ಲ್ಯಾಕ್ ಫಂಗಸ್ ಅನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ, ಯಾರೂ ಪಡೆಯುವಂತೆಯೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ಔಷಧಿ ಹಂಚಿಕೆಯಲ್ಲಿ ಕೇಂದ್ರ ಸರಕಾರ ತಾರತಮ್ಮ ಎಸಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, `ಮಹಾರಾಷ್ಟ್ರ, ಗುಜರಾಜ್ ಮುಂತಾದ ರಾಜ್ಯಗಳಲ್ಲಿ ಜನವರಿಯಿಂದಲೇ ಎರಡನೇ ಅಲೆ ಆರಂಭವಾಯಿತು. ರಾಜ್ಯದಲ್ಲಿ ಏಪ್ರಿಲ್‍ನಿಂದ ಶುರುವಾಯಿತು. ಅಲ್ಲೆಲ್ಲ ಸೋಂಕಿತರು ಹೆಚ್ಚಾದ ಕಾರಣ ಮೊದಲು ಆದ್ಯತೆಯ ಮೇರೆಗೆ ಔಷಧಿ, ಆಕ್ಸಿಜನ್, ರೆಮಿಡಿಸಿವಿರ್ ಗಳನ್ನು ಕೇಂದ್ರವು ಆ ರಾಜ್ಯಗಳಿಗೆ ಪೂರೈಕೆ ಮಾಡಿತು' ಎಂದರು.

ರಾಜ್ಯದಲ್ಲಿ ಎಪ್ರಿಲ್‍ನಿಂದ ಸೋಂಕು ವಿಪರೀತ ಹೆಚ್ಚಲು ಶುರುವಾಯಿತು. ತಕ್ಷಣವೇ ರಾಜ್ಯ ಸರಕಾರ ಕೇಂದ್ರಕ್ಕೆ ಎಲ್ಲ ಮಾಹಿತಿ ನೀಡಿತು. ಕೂಡಲೇ ಕೇಂದ್ರವೂ ರಾಜ್ಯಕ್ಕೆ ಅಗತ್ಯವಾದ ಎಲ್ಲ ಔಷಧಿ ಒದಗಿಸಲು ತುರ್ತಾಗಿ ಲೈನಪ್ ಮಾಡಿ ಕ್ರಮ ವಹಿಸಿತು. ತಕ್ಷಣವೇ ಎಲ್ಲ ಔಷಧಿಗಳ ಉತ್ಪಾದನೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಲಾಯಿತು. ಅದಾದ ಕೆಲ ದಿನಗಳಲ್ಲಿಯೇ ರಾಜ್ಯಕ್ಕೆ ಪೂರೈಕೆ ಆರಂಭವಾಯಿತು. ರೆಮ್ಡಿಸಿವರ್ ಹಂಚಿಕೆಯಲ್ಲೂ ರಾಜ್ಯಕ್ಕೆ ಅನ್ಯಾಯವಾಗಿಲ್ಲ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಹಂಚಿಕೆ ಆಗಿರುವುದು ರಾಜ್ಯಕ್ಕೆ ಮಾತ್ರ. ಈ ತಿಂಗಳ 23ರ ಹಂಚಿಕೆಯ ರೆಮ್ಡೆಸಿವರ್ ಬಂದರೆ ಮಹಾರಾಷ್ಟ್ರಕ್ಕಿಂತ ನಮಗೇ ಹೆಚ್ಚು ಸಿಕ್ಕಂತಾಗುತ್ತದೆ ಎಂದರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X