ಮಂಗಳೂರು; ಅತ್ಯಾಚಾರ ಪ್ರಕರಣ: ಆರೋಪಿ ಸೆರೆ

ಮಂಗಳೂರು, ಮೇ 21: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನನ್ನು ಪಾಂಡೇಶ್ವರದ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಕಳೆದ ಡಿಸೆಂಬರ್‌ನಲ್ಲಿ ನಗರದ ಹೊಟೇಲ್‌ಗೆ ಯುವತಿಯನ್ನು ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅದಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ತನ್ನ ಅಪಾರ್ಟ್‌ಮೆಟ್‌ನಲ್ಲೂ ದೈಹಿಕ ಸಂಪರ್ಕ ನಡೆಸಿ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ನಂತರ ಮದುವೆಯಾಗದೆ ವಂಚಿಸಿದ್ದಾನೆ ಎಂದು ಯುವತಿಯು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





