ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ರಾಜೀವ ಗಾಂಧಿ ಪುಣ್ಯತಿಥಿ

ಉಡುಪಿ, ಮೇ 21: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಪುಣ್ಯತಿಥಿ ದಿನಾಚರಣೆ ಕಾರ್ಯಕ್ರಮ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಶುಕ್ರವಾರ ನಾಯರ್‌ಕೆರೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಿತು.
ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಮಾಜಿ ಸಚಿವ ವಿನಯಕುಮಾರ್ ಸೊರಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜೀವ್‌ಗಾಂಧಿ ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರ ಣಕ್ಕೆ ಒತ್ತುಕೊಟ್ಟು ತಳಮಟ್ಟದ ಗ್ರಾಪಂಗಳಿಗೆ ಹೆಚ್ಚಿನ ಅಧಿಕಾರ ಸಿಗುವಂತೆ ಮಾಡಿದರು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ, ವಿದೇಶದಲ್ಲಿದ್ದ ಸ್ಯಾಮ್ ಪಿತ್ರೋಡರನ್ನು ಭಾರತಕ್ಕೆ ಆಹ್ವಾ ನಿಸಿ ಮಾಹಿತಿ ತಂತ್ರಜ್ಞಾನದ ಯುಗವನ್ನು ಪ್ರಾರಂಭಿಸಿ ಆಧುನಿಕ ಭಾರತಕ್ಕೆ ಕೊಡುಗೆ ನೀಡಿದವರು ರಾಜೀವ್ ಗಾಂಧಿ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಸ್ವಾಗತಿಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮುರಳಿ ಶೆಟ್ಟಿ, ದೀಪಕ್ ಕೋಟ್ಯಾನ್, ಸೌರಭ್ ಬಲ್ಲಾಳ್, ಕಿಶೋರ್‌ಕುಮಾರ್ ಎರ್ಮಾಳ್, ಹರೀಶ್ ಶೆಟ್ಟಿ ಪಾಂಗಾಳ, ರೋಶನ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಉದ್ಯಾವರ ನಾಗೇಶ್ ಕುಮಾರ್, ರಮೇಶ್ ಕಾಂಚನ್, ನಾರಾಯಣ ಕುಂದರ್, ಜಯಶ್ರೀ ಶೇಟ್, ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.







