Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರೀಕ್ಷೆ ತಡವಾದರೂ ಆನ್‍ಲೈನ್ ಬೋಧನೆ...

ಪರೀಕ್ಷೆ ತಡವಾದರೂ ಆನ್‍ಲೈನ್ ಬೋಧನೆ ಮುಂದುವರಿಕೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ21 May 2021 11:22 PM IST
share
ಪರೀಕ್ಷೆ ತಡವಾದರೂ ಆನ್‍ಲೈನ್ ಬೋಧನೆ ಮುಂದುವರಿಕೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಮೇ 21: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಪದವಿ ಕೋರ್ಸ್‍ಗಳ ಸಮ ಸ್ಥಾನಿಕ ಸೆಮಿಸ್ಟರ್ ಕೋರ್ಸ್‍ಗಳಿಗೆ ಆನ್‍ಲೈನ್ ತರಗತಿಗಳನ್ನು ಮುಂದುವರಿಸಬೇಕು. ಈ ಕೋರ್ಸ್‍ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್ ಗಳಿಗೆ ಪರೀಕ್ಷೆಗಳನ್ನು ಇನ್ನೂ ಪೂರೈಸದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೂಡ ಸಮ ಸ್ಥಾನಿಕ ಸೆಮಿಸ್ಟರ್ ಗಳಿಗೆ (2ನೇ, 4ನೇ, 6ನೇ ಮತ್ತು 8ನೇ ಸೆಮಿಸ್ಟರ್ ಗಳು) ಆನ್‍ಲೈನ್ ತರಗತಿಗಳನ್ನು ಪ್ರಾರಂಭ ಮಾಡಬೇಕು. ಬಹುತೇಕ ಕೋರ್ಸ್‍ಗಳಿಗೆ ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದರಿಂದ ಪದವಿ ಕೋರ್ಸ್‍ಗಳ ಬೆಸ ಸ್ಥಾನಿಕ ಸೆಮಿಸ್ಟರ್ ಗಳಿಗೆ ಕೋವಿಡ್ ಪರಿಸ್ಥಿತಿ ತಹಬಂದಿಗೆ ಬಂದಮೇಲೆ ನಡೆಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಲವು ಇಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್‍ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್ ಗಳಿಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು ಎಂದು ಅಶ್ವತ್ಥ ನಾರಾಯಣ ವಿವರಿಸಿದ್ದಾರೆ.

ಸ್ನಾತಕೋತ್ತರ ಕೋರ್ಸ್‍ಗಳ ಬಗ್ಗೆ ಪ್ರಸ್ತಾಪಿಸಿರುವ ಅಶ್ವತ್ಥ ನಾರಾಯಣ, ಕೋವಿಡ್ ಕಾರಣದಿಂದಾಗಿ ಕೆಲವು ವಿಶ್ವವಿದ್ಯಾಲಯಗಳಲ್ಲಿ ಮೊದಲ ಸೆಮಿಸ್ಟರ್ ಗೆ ಪ್ರವೇಶಾತಿ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಹೆಚ್ಚಿನ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಮೂರನೇ ಸೆಮಿಸ್ಟರ್ ನ ತರಗತಿಗಳು ಮುಗಿದಿದ್ದು, ಕೆಲವೆಡೆ ಪರೀಕ್ಷೆಗಳು ಕೂಡ ಆರಂಭವಾಗಿದ್ದವು ಎಂದು ತಿಳಿಸಿದ್ದಾರೆ.

ಹೀಗಾಗಿ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ, ಮೂರನೇ ಸೆಮಿಸ್ಟರ್ ತರಗತಿಗಳು ಈಗಾಗಲೇ ಮುಗಿದಿದ್ದು, ಪರೀಕ್ಷೆಗಳನ್ನು ನಡೆಸುವುದು ಮಾತ್ರ ಬಾಕಿ ಉಳಿದಿದ್ದರೆ, ಅಲ್ಲಿ ಕೂಡ ಸಮ ಸ್ಥಾನಿಕ ಸೆಮಿಸ್ಟರ್ ಗಳಿಗೆ ಆನ್‍ಲೈನ್ ತರಗತಿಗಳನ್ನು ಆರಂಭಿಸಬೇಕು. ಬೆಸ ಸ್ಥಾನಿಕ ಸೆಮಿಸ್ಟರ್ ಗಳಿಗೆ ಬಾಕಿ ಉಳಿಯುವ ಪರೀಕ್ಷೆಗಳನ್ನು ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್ ಗಳಿಗೆ (1ನೇ, 3ನೇ, 5ನೇ, 7ನೇ ಸೆಮಿಸ್ಟರ್‍ಗಳು) ಇನ್ನೂ ತರಗತಿಗಳನ್ನು ಮುಗಿಸದ ವಿಶ್ವವಿದ್ಯಾಲಯಗಳು ಆನ್‍ಲೈನ್ ತರಗತಿಗಳನ್ನು ಮುಂದುವರಿಸಬೇಕು. ಒಂದೊಮ್ಮೆ ಈ ತರಗತಿಗಳು ಮುಗಿದ ಮೇಲೂ ಕೋವಿಡ್‍ನಿಂದಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದಿದ್ದರೆ, ತಕ್ಷಣವೇ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್ ಗಳಿಗೆ ಆನ್‍ಲೈನ್ ತರಗತಿಗಳನ್ನು ಶುರುಮಾಡಬೇಕು. ಇದರಿಂದಾಗಿ ಬಾಕಿ ಉಳಿಯುವ ಬೆಸ ಸ್ಥಾನಿಕ ಸೆಮಿಸ್ಟರ್‍ಗಳ ಪರೀಕ್ಷೆಗಳನ್ನು ಕೋವಿಡ್ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಪರಿಸ್ಥಿತಿಯ ಬೆಳವಣಿಗೆಗಳಿಗೆ ಅನುಗುಣವಾಗಿ ಕುಲಪತಿಗಳು ಮತ್ತು ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲಿ ಹೊರಹೊಮ್ಮುವ ನಿರ್ಧಾರಗಳನ್ನು ಆಧರಿಸಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ಹಾಗೂ ವೇಳಾಪಟ್ಟಿಗಳನ್ನು ರೂಪಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X