Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮ್ಯೂಕಸ್ ಮೈಕ್ರೋಸಿಸ್ (ಬ್ಲ್ಯಾಕ್ ಫಂಗಸ್)...

ಮ್ಯೂಕಸ್ ಮೈಕ್ರೋಸಿಸ್ (ಬ್ಲ್ಯಾಕ್ ಫಂಗಸ್) ಸೊಂಕು ತಡೆಗೆ ಮುಂಜಾಗೃತ ಕ್ರಮ: ಸಚಿವ ಡಾ ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ22 May 2021 1:45 PM IST
share
ಮ್ಯೂಕಸ್ ಮೈಕ್ರೋಸಿಸ್ (ಬ್ಲ್ಯಾಕ್ ಫಂಗಸ್) ಸೊಂಕು ತಡೆಗೆ ಮುಂಜಾಗೃತ ಕ್ರಮ: ಸಚಿವ ಡಾ ಸುಧಾಕರ್

ಹುಬ್ಬಳ್ಳಿ : ತಜ್ಞರ ವರದಿ ಆಧರಿಸಿ ಬ್ಲ್ಯಾಕ್ ಫಂಗಸ್ ಸೊಂಕು ಹರಡುವುದನ್ನು ತಡೆಯಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲ್ಯಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್‌ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈನ್ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ.

ಬ್ಲ್ಯಾಕ್ ಹಾಗೂ ವೈಟ್ ಫಂಗಸ್‌ನಲ್ಲಿ ವರ್ಣದ ಅಂಶ ಹೊರತು ಪಡಸಿದರೆ ಬೇರೆ ವ್ಯತ್ಯಾಸಗಳು ಇಲ್ಲ. ಸ್ಟಿರಾಯ್ಡ್‌ನ ವಿವೇಚನ ರಹಿತ ಬಳಕೆ ದೇಹದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವಂತೆ ಮಾಡುತ್ತದೆ. ಐ.ಸಿ.ಯು.ನಲ್ಲಿ ಆಮ್ಲಜನಕದ ಮೇಲೆ ರೋಗಿಗಳು ಹೆಚ್ಚುಕಾಲ ಇರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಫಂಗಸ್ ಸೋಂಕು ಇವರನ್ನು ತೀವ್ರತರನಾಗಿ ಬಾದಿಸುತ್ತಿದೆ. ದೇಶದಲ್ಲಿ 40 ರಿಂದ 50 ಬ್ಲ್ಯಾಕ್ ಪಂಗಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಆದರೆ ಇಂದು ಹಲವು ರಾಜ್ಯಗಳಲ್ಲಿ ಸೊಂಕು ಹೆಚ್ಚಾಗಿ ಹರಡುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 250 ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ. ‌ಎಲ್ಲಾ ಸೊಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೇಶದಲ್ಲಿ ಬ್ಲ್ಯಾಕ್ ಪಂಗಸ್ ಚಿಕಿತ್ಸೆಗೆ ಅಗತ್ಯವಾದ ಔಷಧಗಳ 14,000 ವೈಲ್ಸ್ ಉತ್ಪಾದನೆಯಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವಷ್ಟು ವೈಲ್‌ಗಳನ್ನು ಒದಗಿಸುವುದಾಗಿ ಕೇಂದ್ರ ರಾಸಾಯನಿಕ ‌ಹಾಗೂ ರಸಗೊಬ್ಬರ ಖಾತೆ ಸಚಿವರಾದ ಸದಾನಂದಗೌಡ ಅವರು ಆಶ್ವಾಸನೆ ನೀಡಿದ್ದಾರೆ ಎಂದರು. ಪತ್ರಕರ್ತರ ಪಶ್ನೆಗೆ ಉತ್ತರಿಸಿದ ಸಚಿವರು ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ‌ ಹಾಗೂ ಗ್ರೂಪ್ ಡಿ ನೌಕರರಿಗೂ ತುರ್ತು ಸಂದರ್ಭದ ಭತ್ಯೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಿಮ್ಸ್‌ನಲ್ಲಿ ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ವಿಧಿವಿಧಾನ, ಕೈಗೊಳ್ಳಲಾದ ವ್ಯವಸ್ಥೆಗಳು, ಸರ್ಕಾರ ಮಾರ್ಗಸೂಚಿಗಳ ಪಾಲನೆ ಕುರಿತು ಮಾಹಿತಿ ಪಡೆದು, ಪರಿಶೀಲನೆ ನೆಡಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯದ ರೋಸ್ಟರ್ ಸರಿಯಾಗಿ ನಿಭಾಯಿಸುವಂತೆ ಕಿಮ್ಸ್ ಮುಖ್ಯಸ್ಥರಿಗೆ ತಿಳಿಸಿದರು. ನಂತರ ಕಿಮ್ಸ್ ವೈದ್ಯಾಧಿಕಾರಿಗಳ ಸಭೆ ನಡೆಸಿದರು.

ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರಠಾಣಿ, ಜಿ.ಪಂ.ಸಿ.ಇ.ಓ ಡಾ.ಬಿ.ಸುಶೀಲಾ, ಕಿಮ್ಸ್ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರು, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X