ಕೊರೋನ ನಿಯಂತ್ರಣಕ್ಕೆ ದ.ಕ. ಜಿಲ್ಲೆಯಲ್ಲಿ ತಜ್ಞರ ಸಮಿತಿ ರಚನೆ : ಶಾಸಕ ಡಾ.ಭರತ್ ಶೆಟ್ಟಿ
ಮಂಗಳೂರು : ಉಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ಸರಕಾರವು ಕೋವಿಡ್- 19 ಸಾಂಕ್ರಾಮಿಕ ರೋಗದ ನಿಯಂತ್ರಣ ಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ತಜ್ಞ ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ. ಸಮಿತಿಯ ಮಾಸಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕಳುಹಿಸಲಾಗುವುದು.
ಈ ಸಮಿತಿಯು ಪ್ರತಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಸೇರಲಿದ್ದು, ಕೊರೊನಾ ಸೋಂಕಿತರ ಶುಶ್ರೂಷೆಗೆ ತೆಗೆದುಕೊಂಡಿರುವ ಕ್ರಮಗಳು, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ನಿಯಂತ್ರಿಸಲು ಪರಿಣಾಮಕಾರಿ ಕ್ರಮಗಳ ಅನುಷ್ಠಾನಗಳ ಕುರಿತು ಜಿಲ್ಲಾಡಳಿತಕ್ಕೆ ಸಲಹೆಗಳನ್ನು ನೀಡಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





