Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಆರ್‌ಪಿಎಲ್ ನೇಮಕಾತಿಯಲ್ಲಿ ಅಕ್ರಮ...

ಎಂಆರ್‌ಪಿಎಲ್ ನೇಮಕಾತಿಯಲ್ಲಿ ಅಕ್ರಮ ಆರೋಪ: ಸಂಸದ, ಶಾಸಕರ ರಾಜೀನಾಮೆಗೆ ಮುನೀರ್ ಕಾಟಿಪಳ್ಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 May 2021 7:05 PM IST
share
ಎಂಆರ್‌ಪಿಎಲ್ ನೇಮಕಾತಿಯಲ್ಲಿ ಅಕ್ರಮ ಆರೋಪ: ಸಂಸದ, ಶಾಸಕರ ರಾಜೀನಾಮೆಗೆ ಮುನೀರ್ ಕಾಟಿಪಳ್ಳ ಆಗ್ರಹ

ಮಂಗಳೂರು, ಮೇ 22: ಎಂಆರ್‌ಪಿಎಲ್ ಕಂಪೆನಿಯ 224 ಉದ್ಯೋಗದ ನೇಮಕಾತಿಯಲ್ಲಿ ಅವಿಭಜಿತ ದ.ಕ.ಜಿಲ್ಲೆ ಸಹಿತ ಕನ್ನಡ ನಾಡಿಗೆ ಬಹುದೊಡ್ಡ ವಂಚನೆ ಎಸಗಲಾಗಿದೆ. ಉತ್ತರ ಪ್ರದೇಶ, ಬಿಹಾರದಿಂದಲೆ ಸುಮಾರು 100 ಮಂದಿಗೆ ಅವಕಾಶ ಪಡೆದಿದ್ದಾರೆ. ಒಟ್ಟು ನೇಮಕಾತಿ ಪ್ರಕ್ರಿಯೆಯಲ್ಲೆ ಬಹುದೊಡ್ಡ ಅಕ್ರಮ ನಡೆದಿದೆ. ಹಾಗಾಗಿ ಈ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ ಈ ಎಲ್ಲಾ ವೈಫಲ್ಯ, ವಂಚನೆಗಳಿಗೆ ಅವಳಿ ಜಿಲ್ಲೆಗಳ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಶಾಸಕರು ನೇರ ಕಾರಣರಾಗಿದ್ದು, ಅವರು ತಕ್ಷಣ ರಾಜಿನಾಮೆ ಸಲ್ಲಿಸಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಎಂಆರ್‌ಪಿಎಲ್ 224 ಉದ್ಯೋಗಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದಾಗ ಡಿವೈಎಫ್‌ಐ ಪ್ರಬಲ ವಿರೋಧ ವ್ಯಕ್ತಪಡಿಸಿತ್ತು. ಸ್ಥಳೀಯರಿಗೆ ಶೇ. 80 ಸ್ಥಾನಗಳನ್ನು ಮೀಸಲಿಟ್ಟು ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಕ್ಕೊತ್ತಾಯ ಹಾಗೂ ಎಂಆರ್‌ಪಿಎಲ್ ಮುಂಭಾಗ ಸಾಮೂಹಿಕ ಧರಣಿಯನ್ನೂ ನಡೆಸಲಾಗಿತ್ತು.

ಪ್ರತಿಭಟನೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ಕಂಪೆನಿಗೆ ನೋಟಿಸ್ ಜಾರಿಗೊಳಿಸಿ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸುವಂತೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಕಂಪೆನಿ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದಿತ್ತು. ಸಂಸದರಾದ ನಳಿನ್ ಕುಮಾರ್ ಕಟೀಲ್ ಸಹಿತ ಯಾವೊಬ್ಬ ಶಾಸಕರೂ ಆಗ ಧ್ವನಿ ಗೂಡಿಸಿರಲಿಲ್ಲ. ಈಗ ಕೊರೋನ, ಲಾಕ್‌ಡೌನ್‌ ಗದ್ದಲಗಳ ಮಧ್ಯೆ ಕಂಪೆನಿ ತನ್ನ ಅಜೆಂಡಾ ಜಾರಿಗೊಳಿಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ದ.ಕ.ಮತ್ತು ಉಡುಪಿ ಜಿಲ್ಲೆಗೆ ತಲಾ ಎರಡು ಸಹಿತ ಕರ್ನಾಟಕಕ್ಕೆ ಕೇವಲ 13 ಸ್ಥಾನಗಳು ಮಾತ್ರ ದೊರಕಿವೆ. ಆದರೆ ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಒಟ್ಟು ನೂರು ಸ್ಥಾನಗಳು ದೊರಕಿವೆ. ದಕ್ಷಿಣ ಭಾರತದ ಇತರ ರಾಜ್ಯಗಳ ಅಭ್ಯರ್ಥಿಗಳೂ ಅತಿ ಕಡಿಮೆ ಸಂಖ್ಯೆಯಲ್ಲಿ ಸ್ಥಾನ ಪಡೆದಿ ದ್ದಾರೆ. ಒಟ್ಟು ಉತ್ತರ ಭಾರತದ ರಾಜ್ಯಗಳು ಅಭ್ಯರ್ಥಿಗಳನ್ನೇ ಗುರುತಿಸಿ ಆಯ್ಕೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವಾರು ಪ್ರತಿಭಾವಂತ ಯುವಜನರು ಅತ್ಯುತ್ತಮವಾಗಿ ಪರೀಕ್ಷೆ ಎದುರಿಸಿದ್ದರೂ ಅವರನ್ನು ಹೀನಾಯವಾಗಿ ಹೊರದಬ್ಬಲಾಗಿದೆ. ಈಗ ಆಯ್ಕೆಯಾಗಿರುವ ಉತ್ತರ ಭಾರತದ ಅಭ್ಯರ್ಥಿಗಳ ಸಾಮರ್ಥ್ಯದ ಕುರಿತೂ ಹಲವು ಅನುಮಾನಗಳು ವ್ಯಕ್ತವಾಗಿವೆ ಎಂದು ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X