ದ.ಕ. ಜಿಲ್ಲೆ : ಕೋವಿಡ್‌ಗೆ ಮತ್ತೆ 9 ಬಲಿ; 913 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಮೇ 22: ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ 9 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 854ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ 913 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 927 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರಗೆ 8,24,105 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,54,665 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 69,440 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 58,211 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,375 ಸಕ್ರಿಯ ಪ್ರಕರಣ ವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಸ್ಕ್ ನಿಯಮ ಉಲ್ಲಂಸಿದ 55,904 ಮಂದಿಯಿಂದ 58,40,030 ರೂ. ದಂಡ ವಸೂಲು ಮಾಡಲಾಗಿದೆ.
Next Story





