Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ ಕೊರೋನ ಗುಣಮುಖರಾಗುವವರ...

ದ.ಕ.ಜಿಲ್ಲೆಯಲ್ಲಿ ಕೊರೋನ ಗುಣಮುಖರಾಗುವವರ ಪ್ರಮಾಣದಲ್ಲಿ ಹೆಚ್ಚಳ : ಜಿಲ್ಲಾಧಿಕಾರಿ

ವೈದ್ಯಕೀಯ ತಜ್ಞರ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ22 May 2021 10:30 PM IST
share
ದ.ಕ.ಜಿಲ್ಲೆಯಲ್ಲಿ ಕೊರೋನ ಗುಣಮುಖರಾಗುವವರ ಪ್ರಮಾಣದಲ್ಲಿ ಹೆಚ್ಚಳ : ಜಿಲ್ಲಾಧಿಕಾರಿ

ಮಂಗಳೂರು, ಮೇ 22:ದ.ಕ.ಜಿಲ್ಲೆಯಲ್ಲಿ ಸದ್ಯ 10,398 ಕೋವಿಡ್ ಸಕ್ರಿಯ ಪ್ರಕರಣಗಳಿದೆ. 1,470 (ಶೇ.13.26) ರೋಗಿಗಳು ಆಸ್ಪತ್ರೆಯಲ್ಲಿ ಮತ್ತು 8,928(ಶೇ 85.86) ಮನೆ ಹಾಗೂ 91 (ಶೇ 0.88) ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದೊಂದು ವಾರ ದಿಂದ ಕೋವಿಡ್ ಪರೀಕ್ಷೆಯಲ್ಲಿ ಶೇ.31.58 ಸೋಂಕು ದೃಢ ಪಡುವ ಪ್ರಕರಣಗಳು ಕಂಡುಬರುತ್ತಿವೆ. ಪ್ರತಿದಿನ ಗುಣಮುಖ ಹೊಂದುವವರ ಪ್ರಮಾಣವು ಶೇ.84 .63ರಷ್ಟಿದ್ದರೆ ಮರಣ ಪ್ರಮಾಣವು ಶೇ.1.23 ರಷ್ಟಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಶನಿವಾರ ನಡೆದ ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6,882 ಬೆಡ್‌ಗಳಿದೆ. ಆ ಪೈಕಿ 1,470 ರೋಗಿಗಳ ಬಳಕೆಯಲ್ಲಿದರೆ 5,412 ಬೆಡ್‌ಗಳು ಖಾಲಿ ಇವೆ, ಸಾಮಾನ್ಯ ಬೆಡ್‌ಗಳಲ್ಲಿ 472 ,ಆಕ್ಸಿಜನ್ ಬೆಡ್ ನಲ್ಲಿ 555, ಹೈಫ್ಲೋ ಆಕ್ಸಿಜನ್ ಬೆಡ್‌ಗಳಲ್ಲಿ 114, ಐಸಿಯುನಲ್ಲಿ 146, ವೆಂಟಿಲೇಟರ್‌ ನಲ್ಲಿ 183 ಸೇರಿದಂತೆ 1470 ಬೆಡ್‌ಗಳು ಭರ್ತಿಯಾಗಿವೆ ಎಂದು ಡಿಸಿ ತಿಳಿಸಿದರು.

ಬ್ಲ್ಯಾಕ್ ಫಂಗಸ್ ರೋಗವು ಸೋಂಕಿನ ರೋಗವಲ್ಲ. ಜನರು ಇದರ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆಗೆ ಬರುವ ಜಿಲ್ಲೆಯ ಹಾಗೂ ಹೊರಜಿಲ್ಲೆಯವರ ಬಗ್ಗೆ ಪ್ರತೀ ದಿನದ ಮಾಹಿತಿಯನ್ನು ಎಲ್ಲಾ ಆಸ್ಪತ್ರೆಗಳು ನೋಡಲ್ ಅಧಿಕಾರಿಗಳಿಗೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕಾರಣವನ್ನು ತಿಳಿದುಕೊಳ್ಳಲು 5ರಿಂದ 6 ಮಂದಿಯ ತಜ್ಞರ ತಂಡವು ಕೋವಿಡ್ ಚಿಕಿತ್ಸೆ ನೀಡುವುದರ ಜೊತೆಯಲ್ಲಿ ಮರಣ ಹೊಂದಿದವರ ಕುಟುಂಬವನ್ನು ಸಂಪರ್ಕಿಸಿ ರೋಗಿಯ ಬಗ್ಗೆ ಪ್ರಥಮ ಹಂತದಿಂದ ಮರಣ ಹೊಂದುವ ತನಕ ದವರೆಗೆ ನಡೆದ ಪ್ರತಿಯೊಂದು ಮಾಹಿತಿಯನ್ನು ಕ್ರೋಢೀಕರಿಸಬೇಕು ಎಂದು ಡಿಸಿ ಸೂಚಿಸಿದರು.

ಸಭೆಯಲ್ಲಿ ಶಾಸಕ ಡಾ.ಭರತ್ ವೈ. ಶೆಟ್ಟಿ, ಮಂಗಳೂರು ಉಪವಿಭಾಗಾಧಿಕಾರಿ ಮಧನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ರ ಚಿಕಿತ್ಸಕ ಮತ್ತು ಅಧೀಕ್ಷಕ ಡಾ. ಸದಾಶಿವ ಶ್ಯಾನುಬೋಗ್, ಡಾ. ಅಶೋಕ್, ಡಾ. ಬಾಳಿಗಾ, ಡಾ. ಶರತ್, ಡಾ. ರಾಜೇಶ್ ಬಿ. ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X