Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಸೋಂಕು ಪ್ರಕರಣ; ಖಾಸಗಿ...

ಕೊರೋನ ಸೋಂಕು ಪ್ರಕರಣ; ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್‌ಗಳನ್ನು ಕಾಯ್ದಿರಿಸಬೇಕು: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ22 May 2021 10:33 PM IST
share
ಕೊರೋನ ಸೋಂಕು ಪ್ರಕರಣ; ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್‌ಗಳನ್ನು ಕಾಯ್ದಿರಿಸಬೇಕು: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಮೇ 22: ಕೆ.ಪಿ.ಎಂ.ಇ ಕಾಯ್ದೆಯಡಿ ನೋಂದಣಿಯಾದ ಎಲ್ಲಾ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್‌ಗಳನ್ನು ಸರಕಾರಿ ಆಸ್ಪತ್ರೆಯಿಂದ ಶಿಫಾರಸ್ಸು ಮಾಡುವ ಕೊರೋನ ರೋಗಿಗಳಿಗೆ ಒದಗಿಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಕುರಿತು ನಗರದ ಅಥೇನಾ ಆಸ್ಪತ್ರೆಯ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಖಾಸಗಿ ಆಸ್ಪತ್ರೆಗೆ ಆಯುಷ್ಮಾನ್ ಆರೋಗ್ಯ ಕರ್ನಾಟಕದ ಕಾರ್ಡ್ ಹೊಂದಿ ತೀರಾ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಕೋವಿಡ್ ರೋಗಿಗಳು ನೇರವಾಗಿ ಬಂದಾಗ ಅವರಿಗೆ ಚಿಕಿತ್ಸೆ ನೀಡಲು ನೀರಾಕರಿಸದೆ, ಆರೋಗ್ಯ ಮಿತ್ರರ ಸಹಾಯದೊಂದಿಗೆ ಸರಕಾರಿ ಆಸ್ಪತ್ರೆಯ ವೈದ್ಯರ ರೆಫರೆನ್ಸ್‌ನ್ನು ವಾಟ್ಸ್ ಆ್ಯಪ್ ಮೂಲಕ ಪಡೆದು ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಸಚಿವರು ತಿಳಿಸಿದರು.

ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸಾರ್ವಜನಿಕರು ಬಂದಾಗ ಆರೋಗ್ಯ ಮಿತ್ರರು ಅವರಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿ ಚಿಕಿತ್ಸೆ ಕೊಡಿಸಲು ಸಹಕರಿಸಬೇಕು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ರೋಗಿಗಳು ಡಿಸ್ಚಾರ್ಜ್ ಆಗುವ ಸಂದರ್ಭ ಪ್ರತೀ ರೋಗಿಯ ಡಿಸ್ಚಾರ್ಜ್ ಸಮ್ಮರಿಗೆ ನೋಡಲ್ ಅಧಿಕಾರಿಗಳ ದೃಢೀಕರಣ ಪಡೆಯುವುದು ಕಡ್ಡಾಯ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದಾಗ ನಿಗದಿತ ಶುಲ್ಕವನ್ನು ಪಡೆಯಲು ಸರಕಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಶುಲ್ಕ ಪಡೆದಿರುವುದು ಕಂಡುಬಂದಲ್ಲಿ ಅಂತಹ ಹೆಚ್ಚುವರಿ ಶುಲ್ಕವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಒಳ ರೋಗಿಗಳಾಗಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಪ್ರತೀ ದಿನ ತಪ್ಪದೆ ಅಪ್ ಲೋಡ್ ಮಾಡಬೇಕು. ಒಂದೊಮ್ಮೆ ಆಸ್ಪತ್ರೆಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್‌ನಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಯು ರೋಗ ಉಲ್ಬಣಗೊಂಡು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುವುದು ಅನಿವಾರ್ಯವಾದಲ್ಲಿ ಆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲದಿದ್ದರೆ ಇತರ ಖಾಸಗಿ ಆಸ್ಪತ್ರೆಯಲ್ಲಿ ಖಾಲಿಯಿದ್ದಲ್ಲಿ ಆರೋಗ್ಯ ಮಿತ್ರರು ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉಪಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರ ಣಾಧಿಕಾರಿ ಹಾಗೂ ಎ.ಬಿ.ಆರ್.ಕೆ. ನೋಡಲ್ ಅಧಿಕಾರಿ ಡಾ. ರತ್ನಾಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X