ವೆನ್ಲಾಕ್ ಆಸ್ಪತ್ರೆಗೆ ನೋಡಲ್ ಅಧಿಕಾರಿ ನೇಮಕ
ಮಂಗಳೂರು, ಮೇ 22: ನಗರದ ಪಾಂಡೇಶ್ವರದ ಶ್ರೀನಿವಾಸ್ ವಿವಿಯ ಮುಖ್ಯ ವೈದ್ಯಾಧಿಕಾರಿ ಮತ್ತು ಪ್ರೊಫೆಸರ್ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನ ಮಂಗಳೂರು ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ ಡಾ.ಎಂ. ಅಣ್ಣಯ್ಯ ಕುಲಾಲ್ ಅವರನ್ನು ಕೋವಿಡ್-19 ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಗೆ ದ.ಕ.ಜಿಲ್ಲೆಯಲ್ಲದೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳ ರೋಗಿಗಳು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ನಿರೀಕ್ಷಿಸಿ ಬರುತ್ತಿದ್ದಾರೆ. ಆ ಹಿನ್ನಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸಂಪೂರ್ಣ ಮೇಲ್ವಿಚಾರಣೆಗಾಗಿ ಮುಂದಿನ ಮೂರು ತಿಂಗಳ ಅವಧಿಗೆ ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





