ಲಾಕ್‍ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಕಟ್ಟಪ್ಪಣೆ

ಹುಬ್ಬಳ್ಳಿ, ಮೇ 22: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆಯಾಗಿರುವ ಲಾಕ್‍ಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರು-ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್‍ಡೌನ್ ಮಾಡಲಾಗುತ್ತಿದೆ ಎಂದರು.
ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಲಾಕ್‍ಡೌನ್ ಪರಿಣಾಮಕಾರಿಯಾಗಿ ಜಾರಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Next Story





