ಮಿನಿಪೊಲಿಸ್: ಗುಂಡಿನ ದಾಳಿಯಲ್ಲಿ ಇಬ್ಬರು ಸಾವು

ವಾಶಿಂಗ್ಟನ್, ಮೇ 22: ಅಮೆರಿಕದ ಮಿನಿಪೊಲಿಸ್ ನಗರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಗುಂಡು ಹಾರಾಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಹಾಗು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರು ಪುರುಷರು ಮತ್ತು ಐವರು ಮಹಿಳೆಯರು ಸೇರಿದಂತೆ 10 ಮಂದಿಯ ಮೇಲೆ ಗುಂಡು ಹಾರಿಸಲಾಗಿತ್ತು ಎಂದು ಮಿನಿಪೊಲಿಸ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರಿಬ್ಬರೂ ಪುರುಷರು. ಸ್ಥಳದಲ್ಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ವರ್ಷದ ಮೇ ತಿಂಗಳಲ್ಲಿ ಇದೇ ನಗರದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ವ್ಯಕ್ತಿಯನ್ನು ಬಿಳಿಯ ಪೊಲೀಸ್ ಅಧಿಕಾರಿಯೊಬ್ಬ ಉಸಿರುಗಟ್ಟಿಸಿ ಕೊಂದಿದ್ದರು.
Next Story





