ಉಪಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ಶಿಕ್ಷಕ ಕೊರೋನ ಸೋಂಕಿನಿಂದ ಸಾವು
ಚಿಕ್ಕೋಡಿ, ಮೇ 23: ಇತ್ತೀಚಿಗೆ ನಡೆದ ಬೆಳಗಾವಿ ಲೋಕಾಸಭಾ ಉಪಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕ ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೋಳ್ಳಿ ಗ್ರಾಮದ ಹುಲ್ಲೋಳ್ಳಿ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ರಾಜಶೇಖರ ತಳವಾರ (56) ಮೃತ ಶಿಕ್ಷಕ ಎಂದು ತಿಳಿದುಬಂದಿದೆ.
ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ಸವದತ್ತಿ ಮತಕ್ಷೇತ್ರದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದಾದ ಬಳಿಕ ಶಿಕ್ಷಕ ರಾಜಶೇಖರ ಅವರು ಜ್ವರದಿಂದ ಬಳಲುತ್ತಿದ್ದರು. ತದನಂತರ ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು.
ಅಂದಿನಿಂದ ಸತತ ಹದಿನೈದು ದಿನಗಳ ಕಾಲ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ರಾಜಶೇಖರ ರವಿವಾರ ಸಾವನ್ನಪ್ಪಿದ್ದಾರೆ.
Next Story