ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಲಸಿಕೆ
ಮಂಗಳೂರು, ಮೇ 29: ಗ್ರಾಪಂ ಮತ್ತು ನಗರಾಡಳಿತ ಸಂಸ್ಥೆಯ ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ಕೊರೋನ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡುವ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರಿಗೆ ಸಲ್ಲಿಸಿದ ಮನವಿಗೆ ಸ್ಪಂದನೆ ಸಿಕ್ಕಿದೆ.
ರಾಜ್ಯದ 6,020ಕ್ಕೂ ಅಧಿಕ ಗ್ರಾಪಂಗಳ 95,000ಕ್ಕೂ ಅಧಿಕ ಸದಸ್ಯರಿಗೆ ಕೋವಿಡ್ ಚುಚ್ಚುಮದ್ದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





