Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸಗೊಬ್ಬರ ಖರೀದಿ ಸಮಯ ವಿಸ್ತರಿಸಿದ...

ರಸಗೊಬ್ಬರ ಖರೀದಿ ಸಮಯ ವಿಸ್ತರಿಸಿದ ಸರಕಾರ: ಬಿತ್ತನೆ ಕಾರ್ಯಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ29 May 2021 10:47 PM IST
share

ಬೆಂಗಳೂರು, ಮೇ 29: ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭಗೊಂಡಿರುವುದರಿಂದ ರೈತರ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರಸಗೊಬ್ಬರ ಬಿತ್ತನೆ ಬೀಜ ಖರೀದಿ ರೈತರಿಗೆ ಅಗತ್ಯವಾಗಿರುವುದನ್ನು ಗಮನಿಸಿದ ಸರಕಾರ ರಸಗೊಬ್ಬರ ಬಿತ್ತನೆ ಬೀಜ ಖರೀದಿ ಸಮಯವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಪ್ರಸ್ತುತ ಜೂನ್ 7ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ರವರೆಗೆ ಸಮಯ ನಿಗದಿಪಡಿಸಿದ್ದು, ಕೃಷಿ ಚಟುವಟಿಕೆಗಳಿಗೆ ಸಮಯದ ನಿರ್ಬಂಧ ವಿಧಿಸಿಲ್ಲ. ಆದರೂ, ಬೆಂಗಳೂರು ಸೇರಿದಂತೆ ಕೆಲವೆಡೆ ರೈತರು ರಸಗೊಬ್ಬರ ಬಿತ್ತನೆ ಬೀಜ ಖರೀದಿಗೆ ಸಮಯದ ಅಭಾವದಿಂದ ಮುಗಿಬಿದ್ದು, ಸುರಕ್ಷಿತ ಅಂತರವಿಲ್ಲದೇ ಖರೀದಿಗೆ ಮುಂದಾಗುತ್ತಿರುವುದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೃಷಿ ಇಲಾಖೆ ಹಾಗೂ ಸರಕಾರದೊಂದಿಗೆ ಚರ್ಚಿಸಿ ರೈತರಿಗೆ ಅಗತ್ಯ ರಸಗೊಬ್ಬರ ಬಿತ್ತನೆಬೀಜ ಪೂರೈಕೆ ಖರೀದಿ ಸಮಯವನ್ನು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ವಿಸ್ತರಿಸಲಾಗಿದೆ.

ಮಳೆ ವಿವರ: 2021-22ನೆ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಮೇ 28ರ ವರೆಗೆ 105 ಮಿ.ಮೀ ಸಾಮಾನ್ಯ ಮಳೆಯಾಗಿದ್ದು, 159 ಮಿ.ಮೀ. ವಾಸ್ತವಿಕ ಸರಾಸರಿ ಮಳೆ ಅಂದರೆ ಶೇ.51 ರಷ್ಟು ಮಳೆಯಾಗಿರುತ್ತದೆ.

ಆಹಾರ ಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನೆ ಗುರಿ: 2021-22ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ 77 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹೊಂದಿದ್ದು, 101.38ಲಕ್ಷ ಟನ್ ಆಹಾರ ಧಾನ್ಯಗಳು ಹಾಗೂ 10.85 ಲಕ್ಷ ಟನ್ ಎಣ್ಣೆಕಾಳುಗಳ ಉತ್ಪಾದನೆ ಗುರಿ ಹೊಂದಲಾಗಿದೆ.

ಗರಿಗೆದರಿರುವ ಕೃಷಿ ಚಟುವಟಿಕೆ: ಎಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭೂಮಿ ಸಿದ್ಧತೆ ಹಾಗೂ ಜೋಳ, ಹೆಸರು ಉದ್ದು, ಹಲಸಂದೆ, ಎಳ್ಳು, ಸೂರ್ಯಕಾಂತಿ, ಹತ್ತಿ, ತಂಬಾಕು ಸೇರಿದಂತೆ ಇತರೆ ಬೆಳೆಗಳ ಬಿತ್ತನೆ ಪ್ರಾರಂಭವಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ನೈರುತ್ಯ ಮಾರುತ ಮಳೆಯು ಪ್ರಾರಂಭವಾದ ಬಳಿಕ ಭೂಮಿ ಸಿದ್ಧತೆ ಹಾಗೂ ಬಿತ್ತನೆ ಕಾರ್ಯಗಳು ಪ್ರಾರಂಭವಾಗಿವೆ.

ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಮೈಸೂರು, ಬೆಳಗಾವಿ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದು, ಮೇ 28ರ ವರೆಗೆ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಇಲ್ಲಿಯವರೆಗಿನ ವರದಿ ಪ್ರಕಾರ 77.00 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಗೆ ಪ್ರತಿಯಾಗಿ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.3.97ರಷ್ಟು ಬಿತ್ತನೆಯಾಗಿದೆ.

ಬಿತ್ತನೆ ಬೀಜಕ್ಕಿಲ್ಲ ಕೊರತೆ: ಲಾಕ್‍ಡೌನ್ ಸಮಯದಲ್ಲಿಯೂ ಕೃಷಿಗಾಗಲೀ ರೈತಾಪಿ ಚಟುವಟಿಕೆಗಳಿಗಾಗಲೀ ಅಥವಾ ಕೃಷಿ ಯಂತ್ರೋಪಕರಣಗಳ ಖರೀದಿಗಾಗಲೀ ಯಾವುದೇ ನಿರ್ಬಂಧ ವಿಧಿಸಿಲ್ಲ. 2021-21ರ ಮುಂಗಾರು ಹಂಗಾಮಿಗೆ ಅಂದಾಜು 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆಯಿದ್ದು, ಕಳೆದ ಮೇ 28ರ ವರೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಇದುವರೆಗೂ 19,675 ಕ್ವಿಂಟಾಲ್‍ಗಳಷ್ಟು ಬಿತ್ತನೆ ಬೀಜ ವಿತರಿಸಲಾಗಿದ್ದು, 1,74,653 ಕ್ವಿಂಟಾಲ್‍ಗಳಷ್ಟು ಇನ್ನೂ ದಾಸ್ತಾನು ಇದೆ. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ಪೂರೈಸಲಾಗುತ್ತಿದ್ದು, ಬಿತ್ತನೆ ಬೀಜ ಪೂರೈಕೆಗೆ ಯಾವುದೇ ಕೊರತೆ ಇರುವುದಿಲ್ಲ.

2021-22ರ ಮುಂಗಾರು ಹಂಗಾಮಿನಲ್ಲಿ ಒಟ್ಟು 26.47 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ಗೊಬ್ಬರಗಳಿಗೆ ಬೇಡಿಕೆಯಿದ್ದು, ಇದರಲ್ಲಿ ಎಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ 7,97,662 ಮೆಟ್ರಿಕ್ ಟನ್ ರಸಗೊಬ್ಬರಗಳಿಗೆ ಬೇಡಿಕೆಯಿದ್ದು, ಮೇ 28ರವರೆಗೆ ಒಟ್ಟು 5,67,239 ಮೆಟ್ರಿಕ್ ಟನ್ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜಾಗಿದೆ. ಅಲ್ಲದೆ, ಇನ್ನೂ ಒಟ್ಟು 12,38,600 ಮೆಟ್ರಿಕ್ ಟನ್‍ಗಳಷ್ಟು ರಸಗೊಬ್ಬರ ದಾಸ್ತಾನು ಇದ್ದು, ಯಾವುದೇ ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X