ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಬ್ಬೀರ್ ಅಹಮ್ಮದ್ ನಿಧನ

ಶಿವಮೊಗ್ಗ, ಮೇ 29: ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಬ್ಬೀರ್ ಅಹಮ್ಮದ್ ಶುಕ್ರವಾರ ರಾತ್ರಿ ಕೋವಿಡ್ ನಿಂದ ನಿಧನರಾಗಿದ್ದಾರೆ.
ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶಬ್ಬೀರ್ ಅವರು ವಿಧಾನ ಪರಿಷತ್ ಮಾಜಿ ಸದಸ್ಯ ದಿ.ಮೀರ್ ಅಝೀಜ್ ಅಹಮ್ಮದ್ ಅವರ ಪುತ್ರರಾಗಿದ್ದರು.
ಶಬ್ಬೀರ್ ಅವರು ಕಳೆದ 10 ದಿನಗಳ ಹಿಂದೆ ಸೋಂಕು ತಗಲಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು 3 ದಿನಗಳ ನಂತರ ಮನೆಗೆ ತೆರಳಿದ್ದರು. ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಓಟಿ ರಸ್ತೆಯಲ್ಲಿರುವ ಎಂ.ಜಿ.ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಶಬ್ಬೀರ್ ಅಹಮ್ಮದ್ ರವರು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದರು. ಪಕ್ಷದ ತತ್ವ ಸಿದ್ಧಾಂತದಲ್ಲಿ ನಂಬಿಕೆ ಮತ್ತು ಅತ್ಯಂತ ಕಳಕಳಿಇಟ್ಟುಕೊಂಡಂತಹ ವ್ಯಕ್ತಿತ್ವವನ್ನು ಹೊಂದಿದ್ದ ಶಬ್ಬೀರ್ ಅಹಮ್ಮದ್ ಅವರು ಇನ್ನಿಲ್ಲ ಎಂಬುದು ತುಂಬಾ ನೋವು ಉಂಟುಮಾಡಿದೆ ಎಂದು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಭಾವಪೂರ್ಣ ಶ್ರದ್ದಾಂಜಲಿಯಲ್ಲಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಕಂಬನಿ ಮಿಡಿದರು.
ಅವರ ಕುಟುಂಬ ವರ್ಗಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ಪಕ್ಷದ ಮುಖಂಡರು ಪ್ರಾರ್ಥಿಸಿದರು.







