ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿಗೆ ಕೊರೋನ ದೃಢ

ಹೊಸದಿಲ್ಲಿ: ಖಾಸಗಿ ಆಸ್ಪತ್ರೆಗೆ ಸ್ಥಳಾಂತರವಾದ ಬಳಿಕ ಸಾಮಾಜಿಕ ಹೋರಾಟಗಾರ ಸ್ಟಾನ್ ಸ್ವಾಮಿಯವರಿಗೆ ಕೊರೋನ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಸ್ವಾಮಿಯವರ ಸ್ನೇಹಿತ ಹಾಗೂ ಸಹಪಾಠಿ ಫಾದರ್ ಜೋಸೆಫ್ ಕ್ಸೇವಿಯರ್ ರವಿವಾರ ತಿಳಿಸಿದ್ದಾರೆ.
2018ರ ಭೀಮಾ-ಕೊರೋಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಸ್ವಾಮಿ ಅವರು ಕಸ್ಟಡಿಯಲ್ಲಿದ್ದಾರೆ. ಸದ್ಯ ಅವರು ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿದ್ದಾರೆ. 15 ದಿನಗಳ ಮಟ್ಟಿಗೆ ಸ್ವಾಮಿಯವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಆದೇಶಿಸಿತ್ತು.
84ರ ವಯುಸ್ಸಿನ ಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕೆಲವು ಸಿಟಿ ಸ್ಕ್ಯಾನಿಂಗ್ ಮಾಡಿದ್ದಾರೆ. ಆರೋಗ್ಯ ಹದಗೆಟ್ಟ ಬಳಿಕ ಸ್ವಾಮಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಶನಿವಾರ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಶನಿವಾರ ಫಲಿತಾಂಶ ಬಂದಿದೆ ಎಂದು ಕ್ಸೇವಿಯರ್ scroll.in ಗೆ ತಿಳಿಸಿದ್ದಾರೆ.
ತಾನು ಆಸ್ಪತ್ರೆಗೆ ದಾಖಲಾಗುವುದಿಲ್ಲ. ನನ್ನ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುವಂತೆ ಸ್ವಾಮಿ ಅವರು ಬಾಂಬೆ ಹೈಕೋರ್ಟ್ ಗೆ ವಿನಂತಿಸಿ ದ್ದರು.







