ಜೂ.1ರಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ : ಹವಾಮಾನ ಇಲಾಖೆ

ಸಾಂದರ್ಭಿಕ ಚಿತ್ರ
ಮಂಗಳೂರು, ಮೇ 30: ಮುಂಗಾರು ಮಳೆಯು ಕೇರಳ ಪ್ರವೇಶದ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂ.1ರಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಮಂಗಳವಾರದಿಂದ ಉತ್ತಮ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ರವಿವಾರದ ಗರಿಷ್ಠ ತಾಪಮಾನ 30.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ನಗರ ಹಾಗೂ ಹೊರವಲಯದಲ್ಲಿ ಮೋಡ ಹಾಗೂ ಬಿಸಿಲ ವಾತಾವರಣವಿತ್ತು. ಆದರೆ ದ.ಕ.ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ರವಿವಾರ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ಅತ್ಯಧಿಕ ಅಂದರೆ 58 ಮಿ.ಮೀ. ಮಳೆಯಾಗಿದ್ದು, ಉಳಿದಂತೆ ಶಿಶಿಲ, ಉಜಿರೆ ಸಹಿತ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದೆ. ಕಡಬ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕಿನ ಹಲವೆಡೆ ಮಳೆಯಾಗಿದೆ. ಸುಳ್ಯ ತಾಲೂಕಿನ ಅಲ್ಲಲ್ಲಿ ಹಗಲು ತುಂತುರು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
Next Story





