ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ಐವರು ಆರೋಪಿಗಳ ಸೆರೆ
ಉಳ್ಳಾಲ : ಇಲ್ಲಿನ ಠಾಣಾ ವ್ಯಾಪ್ತಿಯ ವೈದ್ಯನಾಥ ನಗರದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದೀಪಕ್, ಹೇಮಂತ್, ರಾಜೇಶ್, ಚೌಡಪ್ಪ ಮತ್ತು ಮಂಜು ಎಂದು ಗುರುತಿಸಲಾಗಿದೆ.
ಬಂಧಿತರಿಂದ 4,390 ನಗದು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





