Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ 2ನೇ ಅಲೆಯ ತೀವ್ರತೆಗೆ ಸಿದ್ಧತೆ...

ಕೋವಿಡ್ 2ನೇ ಅಲೆಯ ತೀವ್ರತೆಗೆ ಸಿದ್ಧತೆ ಅಸಮರ್ಪಕವಾಗಿದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ30 May 2021 11:32 PM IST
share
ಕೋವಿಡ್ 2ನೇ ಅಲೆಯ ತೀವ್ರತೆಗೆ ಸಿದ್ಧತೆ ಅಸಮರ್ಪಕವಾಗಿದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಮೇ 30: ಭಾರತದಲ್ಲಿ ಕೊರೋನ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ ಎಂಬುದನ್ನು ಒಪ್ಪಿಕೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೋನ ಎರಡನೇ ಅಲೆಯ ಉಲ್ಬಣವನ್ನು ನಿಯಂತ್ರಿಸಲು ಮಾಡಿದ ಸಿದ್ಧತೆ ಅಸಮರ್ಪವಾಗಿದೆ ಎಂಬುದು ಸಾಬೀತಾಗಿದೆ ಎಂದಿದ್ದಾರೆ.

ಐಐಎಂಬಿ ಹಳೆ ವಿದ್ಯಾರ್ಥಿಗಳ ಸಂಘಟನೆ ಶನಿವಾರ ಆಯೋಜಿಸಿದ್ದ ತಜ್ಞರ ಸಮಾವೇಶದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು.

‘2020ರ ಪರಿಸ್ಥಿತಿ 2021ರಲ್ಲಿ ಇಲ್ಲ ಎಂಬುದು ನಮಗೆಲ್ಲಾ ತಿಳಿದಿದೆ. ಕೆಲವು ವಿಷಯಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಆದರೆ, ಇನ್ನು ಕೆಲವು ವಿಷಯಗಳಲ್ಲಿ ಬಹುಶಃ ನಾವು ಸ್ಪಲ್ಪ ಉತ್ತಮವಾಗಿ ಸಿದ್ದರಾಗಿದ್ದೇವೆ. ಎರಡನೇ ಅಲೆ ಇಷ್ಟು ಪ್ರಮಾಣದಲ್ಲಿ ಹಾಗೂ ತೀವ್ರತೆಯಲ್ಲಿ ಬಂದಿರುವುದರಿಂದ ಸಿದ್ಧತೆ ಸಾಕಾಗಿಲ್ಲ’’ ಎಂದು ಸೀತಾರಾಮನ್ ಹೇಳಿದರು.

ಸಮಾವೇಶದ ಚರ್ಚೆಯ ಪರಿಕಲ್ಪನೆ ಎರಡನೇ ಅಲೆಯ ಬಳಿಕ ಚೇತರಿಕೆ, ಪುನರ್ವಸತಿ ಹಾಗೂ ತಡೆ ಆಗಿತ್ತು.

 ಸಿಎಂಸಿ ವೆಲ್ಲೂರಿನ ವೈದ್ಯಕೀಯ ವಿಜ್ಞಾನಿ, ಪ್ರೊ. ಗಗನ್ ದೀಪ್ ಕಂಗ್, ಇಷ್ಟು ತ್ವರಿತವಾಗಿ ಲಸಿಕೆಗಳು ಬೇಕಾಗುತ್ತದೆ ಎಂದು ಭಾರತದಲ್ಲಿ ಯಾರೊಬ್ಬರೂ ಊಹಿಸಿರಲಿಲ್ಲ ಎಂದರು.

 ದೇಶದ ಜನರಿಗೆ ತ್ವರಿತವಾಗಿ ಲಸಿಕೆ ಹಾಕುವುದು ಅಗತ್ಯ ಎಂಬುದು ಮನಗಾಣುವುದಕ್ಕೆ ಮುನ್ನ ಮೊದಲ ಹಲವು ವಾರಗಳ ಕಾಲ ಲಸಿಕೆ ಹಾಕುವುದು ನಿಧಾನವಾಗಿ ನಡೆಯಿತು ಎಂದು ಅವರು ಹೇಳಿದರು.

ಆದರೆ, ಎಲ್ಲರಿಗೂ ತ್ವರಿತವಾಗಿ ಲಸಿಕೆ ಹಾಕುವುದು ಸುಲಭವಲ್ಲ. ಯಾಕೆಂದರೆ, ನಿಗದಿಪಡಿಸಿರುವಷ್ಟು ಲಸಿಕೆಗಳನ್ನು ಮಾತ್ರ ಪೂರೈಸಲು ವ್ಯವಸ್ಥೆ ಮಾಡಲಾಗಿದೆ. 2021ರಲ್ಲಿ 250 ಕೋಟಿ ಹೆಚ್ಚುವರಿ ಡೋಸ್ ಗಳು ಬೇಕಾಗಬಹುದು ಎಂದು ನಾವು ಕಳೆದ ವರ್ಷ ಅಂದಾಜಿಸಿದ್ದೆವು. ಆದರೆ, ಬಹುಪಕ್ಷೀಯ ಏಜೆನ್ಸಿಗಳು ಹಾಗೂ ಸರಕಾರಗಳ ಸಾಕಷ್ಟು ಪರಿಶ್ರಮದಿಂದಾಗಿ ಈ ವರ್ಷ 600 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಡೋಸ್ ಲಸಿಕೆಗಳು ಉತ್ಪಾದಿಸಬೇಕು ಎಂದು ನಾವು ಭಾವಿಸಿದೆವು ಎಂದು ಅವರು ಹೇಳಿದ್ದಾರೆ.

ಲಸಿಕೆ ಅಗ್ಗದ, ಸುರಕ್ಷಿತ ಹಾಗೂ ಕೋವಿಡ್-19ನ ವಿರುದ್ಧದ ಉತ್ತಮ ರಕ್ಷಣೆಯಾಗಿದೆ ಎಂದು ನಾರಾಯಾಣ ಹೆಲ್ತ್‌ ನ ಅಧ್ಯಕ್ಷ ಹಾಗೂ ಕಾರ್ಯಕಾರಿ ನಿರ್ದೇಶಕ ಡಾ. ದೇವಿ ಶೆಟ್ಟಿ ಹೇಳಿದ್ದಾರೆ.

ಮಕ್ಕಳಿಗೆ ಸೋಂಕು ತಗಲದಂತೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದ ಅವರು, ಕಂಟೈನ್ಮೆಂಟ್ ನ ಅತಿ ಪ್ರಮಖವಾದ ಅಗತ್ಯವೆಂದರೆ, ವೈದ್ಯಕೀಯ ಸಿಬ್ಬಂದಿಯನ್ನು ಹೆಚ್ಚಿಸುವುದು ಎಂದರು.

ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ನಿರ್ಮಿಸುವ ಅಗತ್ಯತೆ ಇದೆ ಎಂದು ನಾವು ಪ್ರತಿಯೊಬ್ಬರೂ ಭಾವಿಸುತ್ತೇವೆ. ಆದರೆ, ಆಸ್ಪತ್ರೆಗಳು ಸಮಸ್ಯೆ ಬಗೆಹರಿಸಲಾರವು. ಆಸ್ಪತ್ರೆಗಳನ್ನು ಕಟ್ಟಲು ಅಡ್ಡಿಯಾಗುತ್ತಿರುವುದು ಆಸ್ಪತ್ರೆಗೆ ಕಟ್ಟಲು ಬೇಕಾದ ಹಣವಲ್ಲ. ಬದಲಿಗೆ ವೈದ್ಯರ ಕೊರತೆ. ಕೊರೋನ ರೋಗಿಗಳಿಗೆ ಆರೋಗ್ಯ ಸೇವೆ ನೀಡಲು ನಾವು ಹೋರಾಡುತ್ತಿದ್ದೇವೆ. ಯಾಕೆಂದರೆ, ನಮ್ಮಲ್ಲಿ ವೈದ್ಯರು, ನರ್ಸ್ ಗಳು ಹಾಗೂ ವೈದ್ಯಕೀಯ ತಂತ್ರಜ್ಞರ ಕೊರತೆ ಇದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X