ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಹುಬ್ಬಳ್ಳಿ, ಮೇ 31: ಖಾಸಗಿ ಆಸ್ಪತ್ರೆವೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಹಿಳಾ ರೋಗಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಓರ್ವನನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಾರ್ಡ್ ಬಾಯ್ ಅಶೋಕ ಹಲಗಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.
ಪಾಶ್ರ್ವವಾಯು ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಸಿಟಿ ಸ್ಕ್ಯಾನ್ ಮಾಡುವುದಕ್ಕಾಗಿ ಅವರನ್ನು ಕೊಠಡಿಗೆ ಕರೆದೊಯ್ದಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮೇ 23ರಂದು ಪ್ರಕರಣ ದಾಖಲಾಗಿತ್ತು.
ದೂರಿನ ಬಳಿಕ ಆರೋಪಿ ಅಶೋಕ ತಲೆಮರೆಸಿಕೊಂಡಿದ್ದ. ಈ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Next Story





