Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿರ್ವಹಣೆಯಲ್ಲಿ ಶುಶ್ರೂಷಕರ...

ಕೋವಿಡ್ ನಿರ್ವಹಣೆಯಲ್ಲಿ ಶುಶ್ರೂಷಕರ ಕರ್ತವ್ಯಪ್ರಜ್ಞೆ ಅನುಕರಣೀಯ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ31 May 2021 10:44 PM IST
share
ಕೋವಿಡ್ ನಿರ್ವಹಣೆಯಲ್ಲಿ ಶುಶ್ರೂಷಕರ ಕರ್ತವ್ಯಪ್ರಜ್ಞೆ ಅನುಕರಣೀಯ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಮೇ 31: `ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಅಪಾಯವನ್ನು ಲೆಕ್ಕಿಸದೆ ಕೋವಿಡ್-19 ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರ ಕರ್ತವ್ಯ ಪ್ರಜ್ಞೆ ಅನುಕರಣೀಯ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರ್ಸ್‍ಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಯಡಿಯೂರಪ್ಪ, ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ, ಸ್ಟಾಫ್ ನರ್ಸ್‍ಗಳ ಕಾರ್ಯವನ್ನು ಸದಾ ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ, ಹೆಚ್ಚುವರಿಯಾಗಿ 8 ಸಾವಿರ ರೂ. ವಿಶೇಷ ಕೋವಿಡ್ ಭತ್ತೆಯನ್ನೂ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್-19 ಸೋಂಕಿನಿಂದ ಮೃತಪಟ್ಟ ಸ್ಟಾಫ್ ನರ್ಸ್‍ಗಳಿಗೆ `ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆ'ಯ ಅಡಿಯಲ್ಲಿ 50 ಲಕ್ಷ ರೂ.ಗಳನ್ನು ನೀಡುವ ಸೌಲಭ್ಯವಿದ್ದು, ಈವರೆಗೆ ಇಂತಹ ಆರು ಪ್ರಕರಣಗಳಿಗೆ ಅರ್ಜಿಯನ್ನು ಸ್ವೀಕರಿಸಲಾಗಿದೆ. ಇದರಲ್ಲಿ, ಮೂರು ಪ್ರಕರಣಗಳಿಗೆ ವಿಮಾ ಮೊತ್ತವನ್ನು ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳಿಗೆ ಶೀಘ್ರದಲ್ಲಿಯೇ ವಿಮಾ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸ್ಟಾಫ್ ನರ್ಸ್‍ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿಪಿಇ ಕಿಟ್, ಗ್ಲೌಸ್‍ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಅನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ. ಏನೇ ಕೊರತೆಗಳಿದ್ದರೂ ಅವುಗಳನ್ನು ಸರಕಾರದ ಗಮನಕ್ಕೆ ತನ್ನಿ ಎಂದು ಅವರು ಇದೇ ವೇಳೆ ಹೇಳಿದರು.

ಬೀದರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂತೋಷ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಹೀದಾ, ದಾವಣಗೆರೆ ಚಿಗಟೇರಿ ಆಸ್ಪತ್ರೆಯ ಎಂ.ಡಿ.ಶಾರದಾ, ಬದಾಮಿ ತಾಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ, ಕೋಲಾರ ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯ ಶಶಿಕಲಾ, ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ, ಚಾಮರಾಜನಗರ ಜಿಲ್ಲಾಸ್ಪತ್ರೆಯ ಪ್ರದೀಪ್ ಕುಮಾರ್, ವಿಜಯಪುರ ಜಿಲ್ಲಾಸ್ಪತ್ರೆಯ ಪುಷ್ಪರಾಜ್, ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್., ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಸಂಧ್ಯಾರಾಣಿ ಅವರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್‍ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೂ ರಿಸ್ಕ್ ಅಲೊವೆನ್ಸ್ ಒದಗಿಸುವಂತೆ ಬೀದರ್‍ನ ಸಂತೋಷ್ ಅವರು ಮಾಡಿದ ಮನವಿಗೆ ಉತ್ತರಿಸಿದ ಯಡಿಯೂರಪ್ಪ, ಈಗಾಗಲೇ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ವಿವರಣೆ ನೀಡಿದರು.

ಕುಟುಂಬದವರಿಗೆ ಲಸಿಕೆ ಒದಗಿಸಿ: ವೆನ್ಲಾಕ್ ಆಸ್ಪತ್ರೆಯ ವಹೀದಾ ಅವರು, ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮೊದಲ ಅಲೆಯ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿರುವ ಹಿರಿಯ ನಾಗರಿಕರ ಮರಣ ಪ್ರಮಾಣ ಹೆಚ್ಚಾಗಿತ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಜೊತೆಗೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಮನೆಯವರಿಗೆ ಸೋಂಕು ತಗಲುವ ಅಪಾಯ ಹೆಚ್ಚಿರುವುದರಿಂದ ಕುಟುಂಬದವರಿಗೂ ವ್ಯಾಕ್ಸಿನ್ ಒದಗಿಸಬೇಕು ಎಂದು ಯಡಿಯೂರಪ್ಪನವರಿಗೆ ಮನವಿ ಮಾಡಿದರು.

ದಾವಣಗೆರೆಯ ಚಿಗಟೇರಿ ಆಸ್ಪತ್ರೆಯ ಶಾರದಾ, ಕೋವಿಡ್ ಸೋಂಕಿತರ ಹೆರಿಗೆ ಮಾಡಿಸಿದ ಅನುಭವವನ್ನು ಹಂಚಿಕೊಂಡರು. ಒಂದು ತಿಂಗಳಿಗೆ ಸುಮಾರು 8 ಸೋಂಕಿತರಿಗೆ ಶಸ್ತ್ರ ಚಿಕಿತ್ಸೆ ಹಾಗೂ 10-12 ಸೋಂಕಿತರಿಗೆ ಸಹಜ ಹೆರಿಗೆಗಳಾಗುತ್ತಿದ್ದು, ತಮ್ಮ ಆಸ್ಪತ್ರೆಯಲ್ಲಿ ಇಂತಹ ತಾಯಿ-ಮಗುವಿನ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು. ಎರಡೂವರೆ ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡ ಬದಾಮಿ ತಾಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ ಅವರಿಗೆ ಸಾಂತ್ವನ ಹೇಳಿದ ಸಿಎಂ, ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

ಜನರು ಭಾವನಾತ್ಮಕವಾಗಿ ವರ್ತಿಸುವುದರಿಂದ, ಕರ್ತವ್ಯ ನಿರ್ವಹಣೆಗೆ ಅಡೆತಡೆಯಾಗುತ್ತದೆ. ಆದರೆ ಮೇಲಾಧಿಕಾರಿಗಳು ಇಂತಹ ಸಮಸ್ಯೆಗಳನ್ನು ಬಗೆಹರಿಸಿ, ಧೈರ್ಯ ತುಂಬುತ್ತಾರೆ ಎಂದು ಕೋಲಾರದ ಎಸ್.ಎನ್.ಆರ್.ಆಸ್ಪತ್ರೆಯ ಶಶಿಕಲಾ ಅವರು ತಿಳಿಸಿದರು. ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ ಅವರು ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ವಿಸ್ತರಿಸುವ ಮೂಲಕ, ಕುಟುಂಬದವರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಒದಗಿಸಲು ನೆರವಾಗುವಂತೆ ಮನವಿ ಮಾಡಿದರು.

ಈ ಕುರಿತು ಕ್ರಮ ವಹಿಸುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ನಸಿರ್ಂಗ್ ಸಿಬ್ಬಂದಿ ಲಸಿಕೆ ಪಡೆದ ಕಾರಣ, ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರಾದ ಸ್ಟಾಫ್ ನರ್ಸ್‍ಗಳ ಪ್ರಮಾಣ ಅತ್ಯಂತ ಕಡಿಮೆ. ಆದುದರಿಂದ ಸಾರ್ವಜನಿಕರ ಲಸಿಕೆ ಅಭಿಯಾನವನ್ನೂ ಬಲಪಡಿಸುವಂತೆ ಮನವಿ ಮಾಡಿದರು. ಚಾಮರಾಜನಗರ ಜಿಲ್ಲಾಸ್ಪತ್ರೆಯ ಪ್ರದೀಪ್ ಕುಮಾರ್, ಸೋಂಕಿತರು ಸಕಾಲದಲ್ಲಿ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗದೆ ಸಾವನ್ನಪ್ಪುತ್ತಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈಗಾಗಲೇ ಗ್ರಾಮೀಣ ಪ್ರದೇಶದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಲಾಗುತ್ತಿದ್ದು, ಆ ಮೂಲಕ ಸಕಾಲದಲ್ಲಿ ಚಿಕಿತ್ಸೆ ನೀಡುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ಬಿಎಸ್‍ವೈ ತಿಳಿಸಿದರು. ವಿಜಯಪುರ ಜಿಲ್ಲೆಯ ಪುಷ್ಪರಾಜ್ ಅವರು ಸೋಂಕಿತರಿಗೆ ಔಷಧೋಪಚಾರದ ಜೊತೆಗೆ ಸ್ಥೈರ್ಯ ಮೂಡಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಅವರು ತೋರಿಸುವ ಕೃತಜ್ಞತೆಯ ಭಾವ ಸಾರ್ಥಕತೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.

ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್. ಅವರು ನಸಿರ್ಂಗ್ ಸಿಬ್ಬಂದಿ ಸತತ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಹಾಗೂ ಹತ್ತಿರದಿಂದ ಸಾವು-ನೋವುಗಳನ್ನು ಕಾಣುವ ಹಿನ್ನೆಲೆಯಲ್ಲಿ ಅವರಿಗೆ ಆಪ್ತ ಸಮಾಲೋಚನೆ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಸಂಧ್ಯಾರಾಣಿ ತಮ್ಮ ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸುವಂತೆ ಮನವಿ ಮಾಡಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಹಾಜರಿದ್ದರು.

"ಲಾಕ್‍ಡೌನ್ ವಿಸ್ತರಣೆ ಸಂಬಂಧ ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿರುವ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಕರ್ತವ್ಯನಿರತ ಶುಶ್ರೂಷಕರೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಅವರ ಸೇವೆಯನ್ನು ವರ್ಣಿಸಲು ಪದಗಳೇ ಇಲ್ಲ. ಅವರೆಲ್ಲರೂ ಬಹಳ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜತೆಗೆ ಕೆಲವು ಸಲಹೆಗಳು ಕೊಟ್ಟಿದ್ದಾರೆ. ಆ ಬಗ್ಗೆ ಸಮಾಲೋಚನೆ ಮಾಡುತ್ತೇನೆ"
-ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X