ರಕ್ತದೊತ್ತಡದಿಂದ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು
ಸುಳ್ಯ: ರಕ್ತದೊತ್ತಡ ಕಡಿಮೆಯಾದ ಪರಿಣಾಮ ವೈದ್ಯಕೀಯ ವಿದ್ಯಾರ್ಥಿನಿ, ಕೂಜುಗೋಡು ಕಟ್ಟೆಮನೆ ಮನೆತನದ ಪ್ರತೀಕ್ಷಾ ಬೆಂಗಳೂರಿನಲ್ಲಿ ಮೃತಪಟ್ಟ ಘಟನೆ ರವಿವಾರ ವರದಿಯಾಗಿದೆ.
ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ದಿನೇಶ್ ಕೂಜುಗೋಡು ಕಟ್ಟೆಮನೆಯವರ ಪುತ್ರಿ ಪ್ರತೀಕ್ಷಾ (21) ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಬೆಂಗಳೂರಿನ ಮನೆಗೆ ಹೋಗಿದ್ದ ಅವರು ರವಿವಾರ ರಾತ್ರಿ 8 ಗಂಟೆ ಸುಮಾರಿಗೆ ಕುಸಿದುಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
Next Story





