Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಎಂಸಿಗೆ ವಾಪಸಾಗಲು ಸಾಲುಗಟ್ಟಿ ನಿಂತ...

ಟಿಎಂಸಿಗೆ ವಾಪಸಾಗಲು ಸಾಲುಗಟ್ಟಿ ನಿಂತ ಬಿಜೆಪಿಗೆ ಪಕ್ಷಾಂತರವಾಗಿದ್ದ ನಾಯಕರು

ವಾರ್ತಾಭಾರತಿವಾರ್ತಾಭಾರತಿ1 Jun 2021 11:14 AM IST
share
ಟಿಎಂಸಿಗೆ ವಾಪಸಾಗಲು ಸಾಲುಗಟ್ಟಿ ನಿಂತ ಬಿಜೆಪಿಗೆ ಪಕ್ಷಾಂತರವಾಗಿದ್ದ ನಾಯಕರು

ಕೋಲ್ಕತಾ: ರಾಜ್ಯ ಚುನಾವಣೆಗೆ ತಿಂಗಳುಗಳ ಮೊದಲು  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರಿಸಿದ ದೊಡ್ಡ ಸವಾಲು ಎಂದರೆ, ತಮ್ಮ ಪಕ್ಷದ ನಾಯಕರು ಬಿಜೆಪಿಗೆ ಬೃಹತ್ ಪ್ರಮಾಣದಲ್ಲಿ ವಲಸೆ ಹೋಗಿದ್ದು. ಟಿಎಂಸಿಯಿಂದ ಬಿಜೆಪಿಗೆ ನಿರಂತರ ಪಕ್ಷಾಂತರ ಪರ್ವ ಸಾಗಿದಾಗ ತೃಣಮೂಲ ಕಾಂಗ್ರೆಸ್ ಪತನವಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಫಲಿತಾಂಶ ಪ್ರಕಟವಾಗಿ ಒಂದು ತಿಂಗಳ ನಂತರ ಬಿಜೆಪಿಯಲ್ಲಿರುವ ಹಲವರು ನಾಯಕರು ಟಿಎಂಸಿಗೆ ವಾಪಸಾಗಲು ಸಾಲುಗಟ್ಟಿ ನಿಂತಿದ್ದಾರೆ.

ಮೇ 2 ರಂದು ಪ್ರಕಟವಾದ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಭರ್ಜರಿ ಜಯ ಗಳಿಸಿ ಎಲ್ಲರನ್ನು ದಿಗ್ಭ್ರಮೆಗೊಳಿಸಿತು. ತೃಣಮೂಲ ಕಾಂಗ್ರೆಸ್ 292 ವಿಧಾನಸಭಾ ಸ್ಥಾನಗಳಲ್ಲಿ 213 ಗೆದ್ದಿದೆ.  ಬಿಜೆಪಿ 77 ಸ್ಥಾನಗಳನ್ನು ಗಳಿಸಿತ್ತು.

ಈಗ ಬಿಜೆಪಿಯಿಂದ ಟಿಎಂಸಿಗೆ ಮರು ವಲಸೆ ಹೊಸ ಪ್ರವೃತ್ತಿಯಾಗಿದ್ದು, ಬಿಜೆಪಿಯಿಂದ ತೃಣಮೂಲಕ್ಕೆ ಪಕ್ಷಾಂತರ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಹಲವರು ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮರು ಪ್ರವೇಶ ಕೋರಿದ್ದಾರೆ.

ಮಾಜಿ ಶಾಸಕಿ  ಸೋನಾಲಿ ಗುಹಾ, ಮಾರ್ಚ್‌ನಲ್ಲಿ ತೃಣಮೂಲವನ್ನು ತೊರೆದ ನಂತರ "ನೀರಿನಿಂದ ಹೊರಬಂದ ಮೀನಿನಂತಹ ಸ್ಥಿತಿಯಲ್ಲಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಮತ್ತೊಮ್ಮೆ ಟಿಎಂಸಿ ಧ್ವಜವನ್ನು ಹಿಡಿಯಲು  ಬಯಸುತ್ತೇನೆ ಎಂದು ಫುಟ್ಬಾಲ್ ಆಟಗಾರ-ರಾಜಕಾರಣಿ ದೀಪೇಂದು  ಬಿಸ್ವಾಸ್ ಅವರು ಮಮತಾ  ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ. ಪಿಟಿಐ ವರದಿಯ ಪ್ರಕಾರ ಅಂತಹ ಇತರ ಹೆಸರುಗಳಲ್ಲಿ ಸರಳಾ  ಮುರ್ಮು ಹಾಗೂ  ಅಮಲ್ ಆಚಾರ್ಯ  ಕೂಡ ಇದ್ದಾರೆ.

"ನಾಯಕರು ಮಾತ್ರವಲ್ಲ, ಏಳರಿಂದ ಎಂಟು ವಿಜೇತ ಶಾಸಕರು ಹಾಗೂ  ಬಿಜೆಪಿಯ 3-4 ಹಾಲಿ ಸಂಸದರು ತೃಣಮೂಲ ಕಾಂಗ್ರೆಸ್ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕಾಗಿದೆ. ಈ ನಾಯಕರು ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಪಕ್ಷವನ್ನು ತೊರೆದರು. ಕಾರ್ಯಕರ್ತರು ಹಾಗೂ  ನಾಯಕರು ಮಮತಾ ಬ್ಯಾನರ್ಜಿ ಅವರ ನಾಯಕತ್ವದಲ್ಲಿ ಚುನಾವಣೆಯಲ್ಲಿ ಗೆಲ್ಲುವಲ್ಲಿ ಯಶಸ್ವಿಯಾದರು" ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ NDTV ಗೆ ತಿಳಿಸಿದರು.

ಟಿಎಂಸಿಗೆ ಹಿಂದಿರುಗುವ ಹಾದಿಯಲ್ಲಿರುವ  ದೊಡ್ಡ ಹೆಸರು ಮುಕುಲ್ ರಾಯ್. ರಾಯ್ ಅವರು  ತೃಣಮೂಲ ಕಾಂಗ್ರೆಸ್ ಅನ್ನು ಮೊದಲೇ   ತ್ಯಜಿಸಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಮಗ ಈಗ ಬಿಜೆಪಿಯನ್ನು ಟೀಕಿಸಿ  ಫೇಸ್‌ಬುಕ್ ಪೋಸ್ಟ್ ಮಾಡಿದ್ದಾರೆ. ಹಿರಿಯ ನಾಯಕ ರಾಯ್ ಈ ವಿಷಯದ ಬಗ್ಗೆ ಒಂದು ಮಾತನ್ನೂ ಹೇಳಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X