ಸುಳ್ಯ: ಕಳವು ಆರೋಪಿಯ ಹೊಟ್ಟೆಯಲ್ಲಿ 35 ಗ್ರಾಂ ಚಿನ್ನ ಪತ್ತೆ

ಸುಳ್ಯ: ಇಲ್ಲಿನ ಮೋಹನ್ ಜುವೆಲ್ಲರಿ ಮಾರ್ಟ್ ನಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಆರೋಪಿಯ ಹೊಟ್ಟೆಯಲ್ಲಿ 35 ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ಮತ್ತು ಪುತ್ತೂರಿನಲ್ಲಿ ಚಿನ್ನ ಕಳವು ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ತಂಗಚ್ಚನ್ ಮತ್ತು ಶಿಬು ಎಂಬವರನ್ನು ಬಂಧಿಸಿದ್ದರು. ಇದರಲ್ಲಿ ಶಿಬು ಎಂಬಾತನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಎಕ್ಸರೇ ತೆಗೆದಾಗ ಆತನ ಹೊಟ್ಟೆಯಲ್ಲಿ ಚಿನ್ನಾಭರಣ ಇರುವುದು ಕಂಡು ಬಂದಿತ್ತು. ಹೀಗಾಗಿ ವೈದ್ಯರು ಕಾರ್ಯಾಚರಣೆ ನಡೆಸಿ ಆರೋಪಿಯ ಹೊಟ್ಟೆಯಿಂದ 35 ಗ್ರಾಂ ಚಿನ್ನಾಭರಣಗಳನ್ನು ಹೊರ ತೆಗೆದಿದ್ದಾರೆ. ಉಂಗುರ, ಓಲೆ, ಸೇರಿದಂತೆ 30 ಕ್ಕೂ ಅಧಿಕ ಆಭರಣಗಳು ಹೊರ ಬಂದಿತ್ತು ಎಂದು ತಿಳಿಸಿದ್ದಾರೆ.
ಕದ್ದ ಚಿನ್ನವನ್ನು ಆತ ನುಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





