ದಸಂಸದಿಂದ ಆಗ್ರಹ ಮಂಡನೆ: ಸಿಎಂಗೆ ಮನವಿ

ಉಡುಪಿ, ಜೂ.1: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ರಾಜ್ಯಾದಂತ ಮೇ 31ರಂದು ನಡೆದ ಆಗ್ರಹ ಮಂಡನೆಯ ಪ್ರಯುಕ್ತ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಹಕ್ಕೋತ್ತಾಯ ನಡೆಸಲಾಯಿತು.
ಆಗ್ರಹದ ಮನವಿಯನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ನಿಯೋಗದಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್, ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಪರಮೇಶ್ವರ್ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿ ಬೆಟ್ಟು ಉಪಸ್ಥಿತರಿದ್ದರು.
Next Story





