ಜೂ.5ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಭಾರೀ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.1: ನೈಋತ್ಯ ಮುಂಗಾರು ಮಾರುತಗಳು ಜೂ.3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕಕ್ಕೆ ಜೂ.5ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಕ್ಕೆ ಸಮೀಪಿಸುತ್ತಿರುವ ನೈಋತ್ಯ ಮುಂಗಾರು ಹಾಗೂ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ತೀವ್ರಗೊಂಡ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು, ನಗರ, ಗ್ರಾಮಾಂತರ, ಕೊಪ್ಪಳ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Next Story





