ಉಡುಪಿ: ಜೂನ್ 2ರಂದು ಲಸಿಕಾ ಲಭ್ಯತೆ ವಿವರ
ಉಡುಪಿ, ಜೂ.1: ಜಿಲ್ಲೆಯಲ್ಲಿ ಬುಧವಾರ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಲಭ್ಯವಿರುವುದಿಲ್ಲ. 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ /ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಸೇಂಟ್ ಸಿಸಿಲಿ ಶಾಲೆ ಲಸಿಕಾ ಕೇಂದ್ರ (250 ಡೋಸ್), ಕುಕ್ಕಿಕಟ್ಟೆಯ ಎಫ್‌ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲಿ್ಲ (150 ಡೋಸ್) ನೀಡಲಾಗುವುದು.
45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (250 ಡೋಸ್) ನೀಡಲಾಗುವುದು.
ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲಿ್ಲ (400 ಡೋಸ್) ನೀಡಲಾಗುವುದು.
ಎ.23 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡದಲ್ಲಿ 250 ಡೋಸ್ ಮತ್ತು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಪ್ರಾಥುಕ ಶಾಲೆ, ಆದಿಉಡುಪಿ) 250 ಡೋಸ್ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.
ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-2ರಲ್ಲಿರುವ ಆದ್ಯತಾ ಗುಂಪು ಗಳಿಗೆ ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







