ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕೆ ಅರ್ಜಿ ಆಹ್ವಾನ ವಿರೋಧಿಸಿ ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ, ಜೂ.1: ಅಪಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡುವ ಮಹಾರಾಷ್ಟ್ರ ಸರಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ.
ಗುಜರಾತ್, ರಾಜಸ್ತಾನ, ಛತ್ತೀಸ್ಗಢ, ಹರ್ಯಾಣ ಮತ್ತು ಪಂಜಾಬ್ ನ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಅಪಘಾನಿಸ್ತಾನ, ಬಾಂಗ್ಲಾ, ಪಾಕ್ ಮೂಲದ ಹಿಂದು, ಸಿಖ್, ಜೈನರು, ಬೌದ್ಧಧರ್ಮೀಯರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನರು ಭಾರತೀಯ ಪೌರತ್ವ ಪಡೆಯಲು ಅರ್ಜಿಯನ್ನು ಕೇಂದ್ರ ಸರಕಾರ ಶುಕ್ರವಾರ ಆಹ್ವಾನಿಸಿತ್ತು.
1955ರ ಪೌರತ್ವ ತಿದ್ದುಪಡಿ ಕಾಯ್ದೆಯ ಸೆಕ್ಷನ್ 16ರಡಿ ಹಾಗೂ 2009ರ ನಿಯಮದಡಿ ಈ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ 2019ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ರೂಪಿಸಿದ್ದರೂ ಇನ್ನೂ ಜಾರಿಗೊಂಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದ ವಿವಿಧೆಡೆ ಭಾರೀ ವಿರೋಧ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ.
Next Story





