ದಕ್ಷಿಣ ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

Image Source : INDIA TV
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಬೆಲ್ಟ್ ನಲ್ಲಿ ಭಾರತೀಯ ಜನತಾ ಪಕ್ಷದ ಮುನ್ಸಿಪಲ್ ಕೌನ್ಸಿಲರ್ ರಾಕೇಶ್ ಪಂಡಿತ್ ಅವರನ್ನು ಮೂವರು ಅಪರಿಚಿತ ಬಂದೂಕುಧಾರಿಗಳು ಬುಧವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ. ಪಂಡಿತ್ ಆಸ್ಪತ್ರೆಯಲ್ಲಿ ತೀವ್ರ ಸ್ವರೂಪ ಗಾಯದಿಂದಾಗಿ ಮೃತಪಟ್ಟಿದ್ದಾರೆ ಎಂದು India Today ವರದಿ ಮಾಡಿದೆ.
ಟ್ರಾಲ್ ಪಟ್ಟಣಕ್ಕೆ ಹೋಗಿದ್ದ ರಾಕೇಶ್ ಪಂಡಿತ್ ಸ್ನೇಹಿತನ ಮಗಳ ಕಾಲಿಗೆ ಗುಂಡು ತಗಲಿ ಗಾಯವಾಗಿದೆ. ಆದಾಗ್ಯೂ, ಮಹಿಳೆಯನ್ನು ಚಿಕಿತ್ಸೆಗಾಗಿ ಪುಲ್ವಾಮಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸದ್ಯಕ್ಕೆ, ಬಂದೂಕುಧಾರಿಗಳನ್ನು ಬಂಧಿಸಲು ಈ ಪ್ರದೇಶವನ್ನು ಸುತ್ತುವರಿಯಲಾಗಿದೆ.
ಈ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಕೇಶ್ ಪಂಡಿತ್ ತನ್ನ ವೈಯಕ್ತಿಕ ಭದ್ರತಾ ಸಿಬ್ಬಂದಿಯೊಂದಿಗೆ ಇರಲಿಲ್ಲ. ದಾಳಿಕೋರರನ್ನು ಬಂಧಿಸಲು ಪೊಲೀಸರು ಹಾಗೂ ಭದ್ರತಾ ಪಡೆಗಳು ಭಾರಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
Next Story