Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉದ್ಯಮದ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ:...

ಉದ್ಯಮದ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್

ತೆರಿಗೆ, ಪರವಾನಿಗೆ, ವಿದ್ಯುತ್ ಶುಲ್ಕ ವಿನಾಯಿತಿ, ಲಸಿಕೆಗೆ ಬೇಡಿಕೆ ಇಟ್ಟ ಉದ್ಯಮಗಳು

ವಾರ್ತಾಭಾರತಿವಾರ್ತಾಭಾರತಿ2 Jun 2021 11:44 PM IST
share
ಉದ್ಯಮದ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್

ಬೆಂಗಳೂರು, ಜೂ. 2: ಕೊವಿಡ್ ಎರಡನೇ ಅಲೆ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಉದ್ಯಮ ವಲಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಸರಕಾರ ಶೀಘ್ರ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದ್ದಾರೆ.

ಬುಧವಾರ ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಲಾಕ್‍ಡೌನ್ ನಂತರದ ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆ ಉದ್ಯಮ ವಲಯದೊಂದಿಗೆ ನಡೆಸಿದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಕೊವಿಡ್ ಸಂದರ್ಭದಲ್ಲಿ ಉದ್ಯಮಗಳು ಎದುರಿಸುತ್ತಿರುವ ಸಂಕಷ್ಟ ಹಾಗೂ ಕೈಗೊಳ್ಳಬಹುದಾದ ಪರಿಹಾರಗಳ ಕುರಿತು ಕೈಗಾರಿಕೋದ್ಯಮಿಗಳು ಹಾಗೂ ನಾನಾ ವಾಣಿಜ್ಯ ಸಂಘಗಳ ಪದಾಧಿಕಾರಿಗಳು ನೀಡಿದ ಸಲಹೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದರು.

ಉದ್ಯಮಿಗಳು ಮುಂದಿಟ್ಟ ಬೇಡಿಕೆಗಳು ಸಮಂಜಸವಾಗಿದ್ದು, ಎಲ್ಲವೂ ಆರ್ಥಿಕ ನೆರವನ್ನು ಬೇಡುತ್ತಿಲ್ಲ. ಉದ್ಯಮಿಗಳ ಮನವಿಯನ್ನು ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕೈಗಾರಿಕೆಗಳ ಪುನಾರಂಭ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು. ಮೇ ತಿಂಗಳಲ್ಲಿ ಸೋಂಕಿನ ತೀವ್ರತೆ ಹೆಚ್ಚಿತ್ತು. ಕೊವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಅನುಷ್ಠಾನಗೊಳಿಸಲಾಗಿತ್ತು. ಇನ್ನು ಹಂತ ಹಂತವಾಗಿ ಲಾಕ್‍ಡೌನ್ ತೆರವುಗೊಳಿಸಿ, ಕೈಗಾರಿಕೆಗಳ ಕಾರ್ಯಚರಣೆಗೆ ಅನುವು ಮಾಡಿಕೊಡಬಹುದು. ಆರ್ಥಿಕತೆಯ ಪುನಾರಂಭಿಸಲು ಸಮಯ ಬಂದಿದೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆ ಎದುರಿಸಲು ಸರಕಾರದ ಜತೆಗೆ ಕೈ ಜೋಡಿಸಿರುವ ಕೈಗಾರಿಕೆಗಳು, ವಾಣಿಜ್ಯ ಸಂಘಟನೆಗಳಿಗೆ ಧನ್ಯವಾದ ಹೇಳಿದ ಮುಖ್ಯ ಕಾರ್ಯದರ್ಶಿ, ಎಲ್ಲ ಕೈಗಾರಿಕೆಗಳು ಸಹಕಾರ ನೀಡಿವೆ. ಆಹಾರ, ಔಷಧ ವಿತರಣೆ, ಆಕ್ಸಿಜನ್ ಪೂರೈಕೆ, ಅಗತ್ಯ ವಸ್ತುಗಳ ಪೂರೈಕೆ, ಪೂರೈಕೆ ಸರಪಳಿಗೆ ಧಕ್ಕೆ ಆಗದಂತೆ ಉದ್ಯಮಗಳು ಕಾರ್ಯನಿರ್ವಹಿಸಿವೆ. ಮೂರನೇ ಅಲೆಯನ್ನ ಸಮರ್ಥವಾಗಿ ಎದುರಿಸಲು ಸರಕಾರ ಹಗಲಿರುಳು ಶ್ರಮಿಸುತ್ತಿದೆ. ಅದಕ್ಕೂ ಉದ್ಯಮಗಳ ಸಹಕಾರ ಬೇಕು ಎಂದು ಅವರು ಕೋರಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಕಾರ್ಯದರ್ಶಿ ಡಾ.ರಾಜ್ ಕುಮಾರ್ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ,  ಮುಖ್ಯಮಂತ್ರಿ ಕಾರ್ಯನೀತಿ ಸಲಹೆಗಾರ ಪ್ರಶಾಂತ್ ಪ್ರಕಾಶ್, ಉದ್ಯಮಿ ಟಿ.ವಿ.ಮೋಹನ್ ದಾ ಸ್ ಪೈ, ಫಿಕ್ಕಿ ಅಧ್ಯಕ್ಷ ಉಲ್ಲಾಸ್ ಕಾಮತ್, ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ.ಸುಂದರ್, ಉಪಾಧ್ಯಕ್ಷ ಐ.ಎಸ್.ಪ್ರಸಾದ್, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ, ಆಟೋಮೊಬೈಲ್ ಅಸೋಸಿಯೇಷನ್ ಅಧ್ಯಕ್ಷ ಎಂಪಿ ಶ್ಯಾಮ್, ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್, ಐಟಿ ವಲಯದ ಪ್ರತಿನಿಧಿ ಪ್ರಹ್ಲಾದ್,  ಅಸೋಚಾಮ್‍ನ ಬಿ.ವಿ.ನಾಯ್ಡು, ಪ್ರವಾಸೋದ್ಯಮ ವಲಯದ ಪ್ರತಿನಿಧಿ ಶ್ಯಾಮರಾಜು, ಜವಳಿ ಉದ್ದಿಮೆ ವಲಯದ ಅಧ್ಯಕ್ಷ ಆನಂದ್, ರಿಯಲ್‍ಎಸ್ಟೇಟ್ ಉದ್ಯಮ ಸಂಘದ ಗೋವಿಂದರಾಜ್ ಉಪಸ್ಥಿತಿರಿದ್ದರು.

ಉದ್ಯಮಗಳ ಪ್ರಮುಖ ಬೇಡಿಕೆಗಳು:

ಸಣ್ಣ, ಅತಿಸಣ್ಣ ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಫ್ರಂಟ್‍ಲೈನ್ ಕಾರ್ಯಕರ್ತರೆಂದು ಪರಿಗಣಿಸಿ ಲಸಿಕೆ ನೀಡಬೇಕು. ಬಾರ್ ಮತ್ತು ರೆಸ್ಟೋರೆಂಟ್‍ಗಳು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲವಾದ ಕಾರಣ ಮಾಸಿಕ ಪರವಾನಗಿ ಶುಲ್ಕ (75 ಸಾವಿರ ರೂ.) ಪಾವತಿಗೆ ವಿನಾಯಿತಿ ನೀಡಬೇಕು. ಬೆಸ್ಕಾಂ ಶುಲ್ಕ, ಕನಿಷ್ಠ ವಿದ್ಯುತ್ ಶುಲ್ಕ ಪಾವತಿಗೆ ವಿನಾಯಿತಿ, ಗುಜರಾತ್, ಮಾಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿರುವ ಪ್ರಮುಖ ಉದ್ಯಮಗಳಿಗೆ ಅಗತ್ಯ ಉತ್ಪನ್ನಗಳ ಪೂರೈಕೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪೂರೈಕೆ ಸರಪಳಿಗೆ ತೊಂದರೆ ಆಗದಂತೆ ಉದ್ಯಮಗಳು ಪುನಾರಂಭಕ್ಕೆ ಸಹಕರಿಸಬೇಕು. ನಗರ ಪ್ರದೇಶಗಳಲ್ಲಿರುವ ನರೇಗಾ ಯೋಜನೆ ಜಾರಿ, ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಉದ್ಯಮಿಗಳು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X