ಟ್ರ್ಯಾಕ್ಟರ್ ಖರೀದಿಸಿ, ಚಲಾಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ. 2: ರಾಮನಗರ ಜಿಲ್ಲೆ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್ ವೊಂದನ್ನು ಖರೀದಿಸಿದ್ದಾರೆ.
ಬುಧವಾರ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಪೂಜೆ ಸಲ್ಲಿಸುವ ಮೂಲಕ ಹೊಸ ಟ್ರ್ಯಾಕ್ಟರ್ ಅನ್ನು ಸ್ವಾಗತಿಸಿದ ಕುಮಾರಸ್ವಾಮಿ, ತಾವೇ ಟ್ರ್ಯಾಕ್ಟರ್ ಚಲಾಯಿಸಿದರು. ತಮ್ಮ ಕೃಷಿಭೂಮಿಯನ್ನು ಮಾದರಿ ತೋಟವನ್ನಾಗಿ ಪರಿವರ್ತಿಸಲು ಕೊರೋನ ಸಂದರ್ಭದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದು, ಇತ್ತೀಚಿನ ತಿಂಗಳಲ್ಲಿ ಹೆಚ್ಚು ಕಾಲ ತೋಟದಲ್ಲೇ ವಾಸ್ತವ್ಯ ಹೂಡಿದ್ದಾರೆ.
Next Story





