Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ...

ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಸಚಿವೆ ಶಶಿಕಲಾ ಜೊಲ್ಲೆ

ತಂದೆ- ತಾಯಿ ಕಳೆದುಕೊಂಡ ಮಕ್ಕಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಿಂದ ಸಂವಾದ

ವಾರ್ತಾಭಾರತಿವಾರ್ತಾಭಾರತಿ3 Jun 2021 11:18 AM IST
share
ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಜೂ.3: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ  ಗೂಗಲ್ ಮೀಟ್ ಮೂಲಕ ವಿಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಸಚಿವೆ ಮಾಹಿತಿ ನೀಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ಪ್ರತಿಯೊಬ್ಬ ಮಗುವಿನ ಜೊತೆಗೂ ವೈಯಕ್ತಿಕವಾಗಿ ಚರ್ಚೆ ನಡೆಸಿ, ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳ ಪೋಷಕರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು.

ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿ ಮಾತು ಹೇಳಿದರು.

 ಈ ಕುರಿತು ಮಾತನಾಡಿರುವ ಸಚಿವರು ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು  ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 'ಬಾಲ ಸೇವಾ' ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ಸರ್ಕಾದ ಸದಾ ಸಿದ್ಧವಿದೆ ಎಂದು ಹೇಳಿದರು.

ಜಾಗೃತಿ ಕಾರ್ಯಕ್ರಮ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ.

ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಘೋಷಣೆ ಮಾಡಿರುವ ಮಾಸಿಕ 3,500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ಅ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್ ಗೆ ತಲುತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ.  ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X