ಬೆಳ್ತಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ

ಬೆಳ್ತಂಗಡಿ, ಜೂ.3: ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ.3ರಂದು ವರದಿಯಾಗಿದೆ.
ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ಆತ್ಮಹತ್ಯೆ ಮಾಡಿಕೊಂಡವರು.
ಇತ್ತೀಚೆಗಷ್ಟೇ ವಿವಾಹವಾಗಿದ್ದ ಬಾಲಕೃಷ್ಣರ ಮೃತದೇಹ ಇಂದು ಬೆಳಗ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮನೆಯ ಸಮೀಪ ಪತ್ತೆಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story





