ಮುಂಗಾರು ಮಳೆ: ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ

Photo: Twitter.com/CMofKarnataka
ಬೆಂಗಳೂರು, ಜೂ.3: ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಇಂದು ಸಭೆ ಜರುಗಿತು.
ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಸೋಮಶೇಕರ್, ನಗರಾಭಿವೃದ್ಧಿ ಸಚಿವ ಬಸವರಾಜ್, ಅಬಕಾರಿ ಸಚಿವ ಗೋಪಾಲಯ್ಯ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





